ಕೊಹ್ಲಿ ಅಭಿಮಾನಿಗಳಿಗೆ ಶಾಕ್: ವಿರಾಟ್ ಟಿ20 ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಹೂರ್ತ ನಿಗದಿ!

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಪಡೆಯುವ ದಿನಗಳು ಸಮೀಪಿಸುತ್ತಿವೆಯಾ? ಈ ಪ್ರಶ್ನೆ ಉದ್ಭವಿಸಲು ಕಾರಣವಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಒಂದು ಮಾದರಿಯಿಂದ ನಿವೃತ್ತಿ ಪಡೆಯುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಬಿಸಿಸಿಐ ಹಾಗೂ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿ ಕೂಡ ಈ ಬಗ್ಗೆ ಗಂಭೀರ ಚಿಂತನೆಯಲ್ಲಿರುವುದು ಸ್ಪಷ್ಟವಾಗಿದೆ.
ಹೌದು ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ದಿನಗಳು ಸಮೀಪಿಸದಂತೆ ಕಾಣಿಸುತ್ತಿದೆ. ಈ ಬಾರಿಯ ವಿಶ್ವ ಕಪ್ ಟೂರ್ನಿ ಬಳಿಕ ಈ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. ಈ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಳ್ಳಲಿದೆಯಾ ಅಥವಾ ವಿರಾಟ್ ಕೊಹ್ಲಿಯೇ ತೆಗೆದುಕೊಳ್ಳಲಿದ್ದಾರಾ ಎಂಬುದು ಕುತೂಹಲ ಮೂಡಿಸಿದೆ.

ಚುಟುಕು ಮಾದರಿಯಲ್ಲಿ ಕಳೆಗುಂದಿದ ಕೊಹ್ಲಿ
ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡುತ್ತಾ ತಂಡಕ್ಕೆ ಆಧಾರವಾಗಿದ್ದ ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಎಲ್ಲಾ ಮಾದರಿಯಲ್ಲಿಯೂ ನೀರಸ ಪ್ರದರ್ಶನ ನೀಡುತ್ತಿದ್ದಾರೆ. ಚುಟುಕು ಮಾದರಿಗೆ ಅಗತ್ಯವಿರುವ ವೇಗದಲ್ಲಿ ರನ್‌ಗಳಿಸಲು ಕೊಹ್ಲಿ ವಿಫಲವಾಗುತ್ತಿದ್ದಾರೆ. 20-35 ರನ್‌ಗಳಿಗೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಸ್ಟ್ರೈಕ್‌ರೇಟ್ ಬಹಳಷ್ಟು ಕಡಿಮೆಯಿದೆ. ಕಳೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿಯೂ ಕೊಹ್ಲಿ ಸ್ಟ್ರೈಕ್‌ರೇಟ್ 102.94 ಇದ್ದಿದ್ದು ಗಮನಿಸಹುದು.

ಏಷ್ಯಾ ಕಪ್‌ನಲ್ಲಿನ ಪ್ರದರ್ಶನ ನಿರ್ಣಾಯಕ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳಿಸದೆ ಮೂರು ವರ್ಷಗಳಾಗುತ್ತಾ ಬಂದಿದೆ. ಅದರಲ್ಲೂ ಇತ್ತೀಚೆಗೆ ಕೊಹ್ಲಿ ರನ್‌ಗಳಿಸಲು ಅಕ್ಷರಶಃ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಸುಮಾರು ಒಂದು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ಸಂಪೂರ್ಣ ದೂರವುಳಿದುಕೊಂಡಿದ್ದರು. ಏಷ್ಯಾಕಪ್ ಮೂಲಕ ಕಮ್‌ಬ್ಯಾಕ್ ಮಾಡಿರುವ ಕೊಹ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 30+ ರನ್‌ಗಳಿಸಲು ಯಶಸ್ವಿಯಾಗಿದ್ದರು ಕೂಡ ಅವರ ಬ್ಯಾಟ್‌ನಿಂದ ಸರಾಗವಾಗಿ ರನ್ ಹರಿದುಬಂದಂತೆ ಭಾಸವಾಗಲಿಲ್ಲ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಕೊಹ್ಲಿಯಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಮಹಳಷ್ಟು ಮಹತ್ವ ಪಡೆದುಕೊಂಡಿದೆ.

ವಿಶ್ವಕಪ್ ತಂಡದಿಂದ ಹೊರಬೀಳುತ್ತಾರಾ ಕೊಹ್ಲಿ?
ಏಷ್ಯಾ ಕಪ್‌ಗೆ ಆಯ್ಕೆಯಾಗಿರುವ ವಿರಾಟ್ ಕೊಹ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಒಂದು ವೇಳೆ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಭಾಗವಹಿಸಿದರೂ ಕೂಡ ಅದಾದ ಬಳಿಕ ಮುಂದುವರಿಯುತ್ತಾರಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಏಷ್ಯಾ ಕಪ್‌ನಲ್ಲಿ ಉತ್ತಮ ಆರಂಭ ಪಡೆದ ಭಾರತ
ಇನ್ನು ಈ ಬಾರಿಯ ಏಷ್ಯಾ ಕಪ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಗೆಲ್ಲುವ ಮೂಲಕ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡ ನಂತರ ಬ್ಯಾಟಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಪ್ರದರ್ಶನದಿಂದಾಗಿ ರೋಚಕ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಪ್ರದರ್ಶನ ನೀಡಿ ಮಿಂಚಿದ್ದಾರೆ. ಮುಂದಿನ ಪಂದ್ಯವನ್ನು ಭಾರತ ಬುಧವಾರ ಹಾಂಕಾಂಗ್ ವಿರುದ್ಧ ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications