ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Asia Cup 2022: ಏಷ್ಯಾಕಪ್‌ಗಾಗಿ 2 ವಾರಗಳ ಮುಂಚೆಯೇ ಅಭ್ಯಾಸ ಆರಂಭಿಸಲಿದ್ದಾರೆ ವಿರಾಟ್ ಕೊಹ್ಲಿ

Asia Cup 2022: Virat Kohli to start practice 2 weeks before to Asia Cup 2022

ಇದೇ ತಿಂಗಳ 27ರಿಂದ ಯುಎಇ ನೆಲದಲ್ಲಿ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಆರಂಭವಾಗುತ್ತಿದ್ದು, ಟೂರ್ನಿಗಾಗಿ ಪ್ರಕಟವಾದ ತಂಡದಲ್ಲಿ ನಿರೀಕ್ಷೆಯಂತೆ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಅವಕಾಶ ದೊರಕಿದೆ. ಸಾಲು ಸಾಲು ಸರಣಿಗಳಿಂದ ಹೊರಗುಳಿದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವಿರಾಟ್ ಕೊಹ್ಲಿ ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗುತ್ತಾರಾ ಎಂಬ ಪ್ರಶ್ನೆ ಎದ್ದಿತ್ತು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಸಾಲು ಸಾಲು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದರು ಹಾಗೂ ಅದನ್ನು ಆಯ್ಕೆಗಾರರು ಪರಿಗಣಿಸಿದರೆ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟ ಎಂಬ ಅಭಿಪ್ರಾಯಗಳೂ ಸಹ ಹರಿದಾಡುತ್ತಿದ್ದವು.

Asia Cup 2022: ಏಷ್ಯಾಕಪ್‌ಗೆ ಪ್ರಕಟವಾದ ತಂಡದಲ್ಲಿ ಬೌಲಿಂಗ್ ಅಸ್ತ್ರ ಬುಮ್ರಾ ಇಲ್ಲದಿರಲು ಇದೇ ಕಾರಣAsia Cup 2022: ಏಷ್ಯಾಕಪ್‌ಗೆ ಪ್ರಕಟವಾದ ತಂಡದಲ್ಲಿ ಬೌಲಿಂಗ್ ಅಸ್ತ್ರ ಬುಮ್ರಾ ಇಲ್ಲದಿರಲು ಇದೇ ಕಾರಣ

ಆದರೆ ಈ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಹಾಕಿದ ಬಿಸಿಸಿಐ ಆಯ್ಕೆಗಾರರ ಸಮಿತಿ ವಿರಾಟ್ ಕೊಹ್ಲಿಯನ್ನು ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಆಯ್ಕೆ ಮಾಡುವುದರ ಮೂಲಕ ಎಲ್ಲಾ ಟ್ರೋಲ್‌ಗಳಿಗೂ ಅಂತ್ಯ ಹಾಡಿದೆ. ಇತ್ತ ಇತ್ತೀಚೆಗಷ್ಟೇ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಿಗೂ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಮುಂಬರುವ ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾದ ಬೆನ್ನಲ್ಲೇ ಅಭ್ಯಾಸ ಆರಂಭಿಸಲು ಮುಂದಾಗಿದ್ದಾರೆ.

CWG 2022: ಕಾಮನ್‍ವೆಲ್ತ್ ಮುಕ್ತಾಯ; ಭಾರತದ ಪರ ಪದಕ ಗೆದ್ದ ಎಲ್ಲಾ ಕ್ರೀಡಾಪಟುಗಳ ಪಟ್ಟಿCWG 2022: ಕಾಮನ್‍ವೆಲ್ತ್ ಮುಕ್ತಾಯ; ಭಾರತದ ಪರ ಪದಕ ಗೆದ್ದ ಎಲ್ಲಾ ಕ್ರೀಡಾಪಟುಗಳ ಪಟ್ಟಿ

ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸುವುದು ಯಾವಾಗ ಮತ್ತು ಯಾವ ಎಲ್ಲಿ ಅಭ್ಯಾಸ ನಡೆಸಲಿದ್ದಾರೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಮುಂಬೈನಲ್ಲಿ ಅಭ್ಯಾಸ

ಮುಂಬೈನಲ್ಲಿ ಅಭ್ಯಾಸ

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಮುಂಬೈನ ಇನ್‌ಡೋರ್ ಅಕಾಡೆಮಿಯಲ್ಲಿ ವಿರಾಟ್ ಕೊಹ್ಲಿ ಇದೇ ವಾರಾಂತ್ಯದಿಂದ ಮುಂಬರುವ ಏಷ್ಯಾಕಪ್ ಟೂರ್ನಿಗಾಗಿ ಅಭ್ಯಾಸ ಆರಂಭಿಸುವುದಾಗಿ ತಿಳಿದು ಬಂದಿದೆ. ಸದ್ಯ ವಿರಾಟ್ ಕೊಹ್ಲಿ ವೊರ್ಲಿ ಓಂಕಾರ್ ಬಿಲ್ಡಿಂಗ್‌ನಲ್ಲಿ ವಾಸವಿದ್ದು, ಇಲ್ಲಿಗೆ ಕುರ್ಲಾ ಕಾಂಪ್ಲೆಕ್ಸ್‌ ಇಪ್ಪತ್ತು ನಿಮಿಷಗಳ ಪ್ರಯಾಣವಾಗಿರುವ ಕಾರಣ ವಿರಾಟ್ ಕೊಹ್ಲಿ ಇಲ್ಲಿ ಅಭ್ಯಾಸ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಮೂರು ವಾರ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಕಳಪೆ ಫಾರ್ಮ್‌ನಿಂದ ಹೊರಬಂದು ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದ್ದು ವಿರಾಟ್ ಕೊಹ್ಲಿ ಈ ಸಲುವಾಗಿ ಜಿಂಬಾಬ್ವೆ ಸರಣಿಯನ್ನೂ ಬಿಟ್ಟು ಈ ಅಭ್ಯಾಸದಲ್ಲಿ ತೊಡಗಿಕೊಳ್ಳಲಿದ್ದಾರೆ.

ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಟೀಮ್ ಇಂಡಿಯಾ

ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಟೀಮ್ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್ .

3 ಹೆಚ್ಚುವರಿ ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ಅಕ್ಷರ್ ಪಟೇಲ್.

Virat Kohli ತಮ್ಮ ನೂರನೇ ಪಂದ್ಯವನ್ನು Pakistan ವಿರುದ್ಧ ಆಡಲಿದ್ದಾರೆ | *Cricket | OneIndia Kannada
ಏಷ್ಯಾಕಪ್ ವೇಳಾಪಟ್ಟಿ

ಏಷ್ಯಾಕಪ್ ವೇಳಾಪಟ್ಟಿ

27 ಆಗಸ್ಟ್‌: ಶ್ರೀಲಂಕಾ vs ಅಫ್ಘಾನಿಸ್ತಾನ (ದುಬೈ)

28 ಆಗಸ್ಟ್‌: ಭಾರತ vs ಪಾಕಿಸ್ತಾನ (ದುಬೈ)

30 ಆಗಸ್ಟ್‌: ಬಾಂಗ್ಲಾದೇಶ vs ಅಫ್ಘಾನಿಸ್ತಾನ (ದುಬೈ)

31 ಆಗಸ್ಟ್‌: ಭಾರತ vs ಕ್ವಾಲಿಫೈಯರ್ (ದುಬೈ)

1 ಸೆಪ್ಟೆಂಬರ್: ಶ್ರೀಲಂಕಾ vs ಬಾಂಗ್ಲಾದೇಶ (ದುಬೈ)

2 ಸೆಪ್ಟೆಂಬರ್: ಪಾಕಿಸ್ತಾನ vs ಕ್ವಾಲಿಫೈಯರ್ (ಶಾರ್ಜಾ)

3 ಸೆಪ್ಟೆಂಬರ್: B1 vs B2 (ಶಾರ್ಜಾ)

4 ಸೆಪ್ಟೆಂಬರ್: A1 vs A2 (ದುಬೈ)

6 ಸೆಪ್ಟೆಂಬರ್: A1 vs B1 (ದುಬೈ)

7 ಸೆಪ್ಟೆಂಬರ್: A2 vs B2 (ದುಬೈ)

8 ಸೆಪ್ಟೆಂಬರ್: A1 vs B2 (ದುಬೈ)

9 ಸೆಪ್ಟೆಂಬರ್: B1 vs A2 (ದುಬೈ)

11 ಸೆಪ್ಟೆಂಬರ್: ಫೈನಲ್‌ (ದುಬೈ)

Story first published: Tuesday, August 9, 2022, 19:07 [IST]
Other articles published on Aug 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X