ಏಷ್ಯಾಕಪ್: ಈ ದಿನದೊಳಗೆ ರಾಹುಲ್ ಕೊವಿಡ್ ವರದಿ ನೆಗೆಟಿವ್ ಬರದಿದ್ದರೆ ಭಾರತಕ್ಕೆ ಲಕ್ಷ್ಮಣ್ ಕೋಚ್!

ಇದೇ ತಿಂಗಳ 27ರ ಶನಿವಾರದಂದು ನಡೆಯಲಿರುವ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿ ಆರಂಭವಾಗಲಿದ್ದು, ಇದು ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಾಗಿದ್ದು, ಟಿ ಟ್ವೆಂಟಿ ಮಾದರಿಯಲ್ಲಿ ನಡೆಯಲಿರುವ ಎರಡನೇ ಆವೃತ್ತಿಯಾಗಿದೆ.
ಇತ್ತ ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಟ್ರೋಫಿ ಗೆದ್ದು ಹಾಲಿ ಚಾಂಪಿಯನ್ ಎನಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿಯೂ ಸಹ ಗೆದ್ದು ಹ್ಯಾಟ್ರಿಕ್ ಬಾರಿಸುವ ಯೋಜನೆಯಲ್ಲಿದೆ. ಇನ್ನು ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ನಂತರ ಟೀಮ್ ಇಂಡಿಯಾದ ನಾಯಕ ಹಾಗೂ ಕೋಚ್ ಬದಲಾವಣೆಯಾಗಿದ್ದು, ರಾಹುಲ್ ದ್ರಾವಿಡ್ ಹೆಡ್ ಕೋಚ್ ಆಗಿ ತಂಡವನ್ನು ನಂತರದ ಪಂದ್ಯಗಳಲ್ಲಿ ಅತಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.
ಅದರಲ್ಲಿಯೂ ರೋಹಿತ್ ಶರ್ಮಾ ನಾಯಕತ್ವ ಮತ್ತು ರಾಹುಲ್ ದ್ರಾವಿಡ್ ಕೋಚಿಂಗ್ ಅಡಿಯಲ್ಲಿ ಕಣಕ್ಕಿಳಿದ ಎಲ್ಲಾ ಸರಣಿಗಳಲ್ಲಿಯೂ ಟೀಮ್ ಇಂಡಿಯಾ ಗೆದ್ದಿದ್ದು, ಈ ಜೋಡಿ ಸದ್ಯ ವಿಶ್ವದ ಅತಿ ಯಶಸ್ವಿ ನಾಯಕ ಮತ್ತು ಕೋಚ್ ಜೋಡಿ ಎನಿಸಿಕೊಂಡಿದೆ. ಹೀಗೆ ಅದ್ಬುತ ಫಲಿತಾಂಶವನ್ನು ನೀಡುತ್ತಾ ಬಂದಿರುವ ಕೋಚ್ ರಾಹುಲ್ ದ್ರಾವಿಡ್ ಅಡಿಯಲ್ಲಿ ಟೀಂ ಇಂಡಿಯಾ ಈ ಬಾರಿಯ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯುವುದು ಖಚಿತ ಎನ್ನಲಾಗಿತ್ತು. ಆದರೆ, ಈ ಎಲ್ಲಾ ನಿರೀಕ್ಷೆಗಳಿಗೆ ಇದೀಗ ಹಿನ್ನಡೆಯುಂಟಾಗಿದ್ದು, ಯುಎಇ ಪ್ರಯಾಣ ಆರಂಭಿಸುವುದಕ್ಕೂ ಮುನ್ನ ನಡೆಸಿದ ಕೊವಿಡ್ ಪರೀಕ್ಷೆಯಲ್ಲಿ ರಾಹುಲ್ ದ್ರಾವಿಡ್ ಅವರಿಗೆ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ದ್ರಾವಿಡ್ ಯುಎಇಗೆ ಹಾರಿದ ತಂಡದ ಜೊತೆ ಪಯಣ ಬೆಳೆಸದೇ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ. ಹೀಗೆ ಕೊವಿಡ್‌ಗೆ ಒಳಗಾಗಿರುವ ರಾಹುಲ್ ದ್ರಾವಿಡ್ ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಾರಾ ಅಥವಾ ಇಲ್ಲವಾ, ರಾಹುಲ್‌ಗೆ ಇರುವ ಕಾಲಾವಕಾಶ ಎಷ್ಟು ಎಂಬುದರ ಕುರತಾದ ಮಾಹಿತಿ ಈ ಕೆಳಕಂಡಂತಿದೆ.

ಇಷ್ಟರೊಳಗೆ ದ್ರಾವಿಡ್ ಸುಧಾರಿಸಿಕೊಳ್ಳಲೇಬೇಕು
ಇನ್ನು ಕೊರೊನಾ ಸೋಂಕಿಗೆ ಒಳಗಾಗಿರುವ ರಾಹುಲ್ ದ್ರಾವಿಡ್ ಆಗಸ್ಟ್ 24ರ ಬುಧವಾರದಂದು ನಡೆಸಲಾಗುವ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿಯನ್ನು ಪಡೆಯಲೇಬೇಕಿದೆ. ಒಂದುವೇಳೆ ಈ ಪರೀಕ್ಷೆಯಲ್ಲಿಯೂ ಸಹ ರಾಹುಲ್ ದ್ರಾವಿಡ್ ವರದಿ ಪಾಸಿಟಿವ್ ಬಂದರೆ ರಾಹುಲ್ ದ್ರಾವಿಡ್ ಬದಲಾಗಿ ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾವನ್ನು ಕೋಚ್ ಆಗಿ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಮುನ್ನಡೆಸಲಿದ್ದಾರೆ.

ಈಗಾಗಲೇ ತಂಡ ಸೇರಿರುವ ಲಕ್ಷ್ಮಣ್
ಇನ್ನು ವಿವಿಎಸ್ ಲಕ್ಷ್ಮಣ್ ಈಗಾಗಲೇ ದುಬೈ ತಲುಪಿದ್ದಾರೆ. ತಂಡದ ಅಭ್ಯಾಸದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಲಕ್ಷ್ಮಣ್ ಅವರಿಗೆ ಕೋಚ್ ಆಗಿ ನೇಮಕಗೊಳ್ಳಲು ಇನ್ನೂ ಸಹ ಬಿಸಿಸಿಐನಿಂದ ಅಧಿಕೃತ ಪತ್ರ ಬರಬೇಕಿದೆ.ಬುಧವಾರ ( ಆಗಸ್ಟ್ 24 ) ರಾಹುಲ್ ದ್ರಾವಿಡ್ ಕೊರೊನಾ ವರದಿ ಪಾಸಿಟಿವ್ ಬಂದರೆ ಲಕ್ಷ್ಮಣ್ ಅಧಿಕೃತವಾಗಿ ಕೋಚ್ ಆಗಿ ಆಯ್ಕೆಯಾಗಲಿದ್ದಾರೆ.

ಏಷ್ಯಾಕಪ್ ಟೂರ್ನಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.
ಏಷ್ಯಾಕಪ್ ವೇಳಾಪಟ್ಟಿ
27 ಆಗಸ್ಟ್: ಶ್ರೀಲಂಕಾ ವರ್ಸಸ್ ಅಫ್ಘಾನಿಸ್ತಾನ (ದುಬೈ)
28 ಆಗಸ್ಟ್: ಭಾರತ ವರ್ಸಸ್ ಪಾಕಿಸ್ತಾನ (ದುಬೈ)
30 ಆಗಸ್ಟ್: ಬಾಂಗ್ಲಾದೇಶ ವರ್ಸಸ್ ಅಫ್ಘಾನಿಸ್ತಾನ (ದುಬೈ)
31 ಆಗಸ್ಟ್: ಭಾರತ ವರ್ಸಸ್ ಕ್ವಾಲಿಫೈಯರ್ (ದುಬೈ)
1 ಸೆಪ್ಟೆಂಬರ್: ಶ್ರೀಲಂಕಾ ವರ್ಸಸ್ ಬಾಂಗ್ಲಾದೇಶ (ದುಬೈ)
2 ಸೆಪ್ಟೆಂಬರ್: ಪಾಕಿಸ್ತಾನ ವರ್ಸಸ್ ಕ್ವಾಲಿಫೈಯರ್ (ಶಾರ್ಜಾ)
3 ಸೆಪ್ಟೆಂಬರ್: B1 vs B2 (ಶಾರ್ಜಾ)
4 ಸೆಪ್ಟೆಂಬರ್: A1 vs A2 (ದುಬೈ)
6 ಸೆಪ್ಟೆಂಬರ್: A1 vs B1 (ದುಬೈ)
7 ಸೆಪ್ಟೆಂಬರ್: A2 vs B2 (ದುಬೈ)
8 ಸೆಪ್ಟೆಂಬರ್: A1 vs B2 (ದುಬೈ)
9 ಸೆಪ್ಟೆಂಬರ್: B1 vs A2 (ದುಬೈ)
11 ಸೆಪ್ಟೆಂಬರ್: ಫೈನಲ್ (ದುಬೈ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications