Asia Cup 2022: ಭಾರತ ಮತ್ತು ಪಾಕ್ ನಡುವಿನ ಟಿ20 ಪಂದ್ಯಗಳಲ್ಲಿ ಹೆಚ್ಚು ಗೆದ್ದ ಬಲಿಷ್ಠ ತಂಡ ಯಾವುದು?

ಬಹು ನಿರೀಕ್ಷಿತ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ ಇದೇ ತಿಂಗಳ 27ರಿಂದ ಆರಂಭವಾಗಲಿದ್ದು, ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ಹಾಂಗ್ ಕಾಂಗ್ ತಂಡಗಳು ಟ್ರೋಫಿಗಾಗಿ ಸೆಣಸಾಟ ನಡೆಸಲಿವೆ. ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಟೀಮ್ ಇಂಡಿಯಾ ಈ ಬಾರಿಯೂ ಸಹ ಗೆದ್ದು ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದು, ಈಗಾಗಲೇ ಕಣಕ್ಕಿಳಿದು ಅಭ್ಯಾಸವನ್ನು ನಡೆಸುತ್ತಿದೆ.
ಇನ್ನು ಟೀಮ್ ಇಂಡಿಯಾ ಟೂರ್ನಿಯಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದ್ದು ಈ ಪಂದ್ಯ ಆಗಸ್ಟ್ 28ರ ಭಾನುವಾರದಂದು ನಡೆಯಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಸರಣಿಗಳಲ್ಲಿ ಆಡುವುದನ್ನು ನಿಲ್ಲಿಸಿರುವ ಕಾರಣ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಕಣಕ್ಕಿಳಿಯುತ್ತಿದ್ದವು. ಐಸಿಸಿ ಟೂರ್ನಿಗಳನ್ನು ಹೊರತುಪಡಿಸಿ ಉಭಯ ತಂಡಗಳು ಮುಖಾಮುಖಿಯಾಗುವ ಏಕೈಕ ಟೂರ್ನಿ ಈ ಏಷ್ಯಾಕಪ್ ಆಗಿದ್ದು, ಸದ್ಯ ಈ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆ ಹಾಗೂ ಕುತೂಹಲವನ್ನು ಹುಟ್ಟುಹಾಕಿದೆ.
ಕಳೆದ ಬಾರಿ 2018ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದಾಗ ಟೀಮ್ ಇಂಡಿಯಾ ಪಾಕ್ ವಿರುದ್ಧ ಗೆದ್ದು ಬೀಗಿತ್ತು. ಹಾಗೂ 2016ರ ಏಷ್ಯಾಕಪ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿಯೂ ಸಹ ಭಾರತ ಪಾಕ್ ವಿರುದ್ಧ ಜಯ ಸಾಧಿಸಿತ್ತು. ಇನ್ನು 2018ರ ಏಷ್ಯಾಕಪ್ ಟೂರ್ನಿ ಏಕದಿನ ಮಾದರಿಯಲ್ಲಿ ಹಾಗೂ 2016ರ ಏಷ್ಯಾಕಪ್ ಆವೃತ್ತಿ ಟಿ ಟ್ವೆಂಟಿ ಮಾದರಿಯಲ್ಲಿ ನಡೆದಿತ್ತು ಮತ್ತು ಈ ಬಾರಿಯ ಟೂರ್ನಿ ಟಿ ಟ್ವೆಂಟಿ ಮಾದರಿಯಲ್ಲಿಯೇ ನಡೆಯಲಿದ್ದು ಉಭಯ ತಂಡಗಳ ನಡುವೆ ಒಟ್ಟಾರೆ ಎಷ್ಟು ಟಿ ಟ್ವೆಂಟಿ ಪಂದ್ಯಗಳು ನಡೆದಿವೆ ಹಾಗೂ ಈ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
{photo-feature}
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications