ಏಷ್ಯಾಕಪ್ 2023: ಪಾಕಿಸ್ತಾನ vs ನೇಪಾಳ, ಉದ್ಘಾಟನಾ ಪಂದ್ಯ ಆರಂಭ, ಟಾಸ್ ರಿಪೋರ್ಟ್ Live ಸ್ಕೋರ್
ಏಷ್ಯಾಕಪ್ ಟೂರ್ನಿಗೆ ಇಂದು ಚಾಲನೆ ದೊರೆತಿದ್ದು ಮೊದಲ ಪಂದ್ಯದಲ್ಲಿ ಪಾಕಿಸ್ಥಾನ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದೆ. ಮುಲ್ತಾನ್‌ನ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಆತಿಥೇಯ ಪಾಕಿಸ್ತಾನ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಪಾಕಿಸ್ತಾನ ತಂಡ ಈ ಟೂರ್ನಿಗೆ ಏಕದಿನ ಕ್ರಿಕೆಟ್ ಮಾದರಿಯಲ್ಲಿ ನಂಬರ್ 1 ತಂಡವಾಗಿ ಕಣಕ್ಕಿಳಿಯುತ್ತಿದೆ. ಕಳೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಪಾಕಿಸ್ತಾನ ಮೂರು ಪಂದ್ಯಗಳ ಸರಣಿಯನ್ನು ವೈಟ್‌ವಾಶ್ ಮಾಡುವ ಮೂಲಕ ತನ್ನ ವಶಕ್ಕೆ ಪಡೆದುಕೊಂಡಿತ್ತು. ಆ ಆತ್ಮವಿಶ್ವಾಸದಲ್ಲಿಯೇ ಈಗ ಪ್ರತಿಷ್ಠಿತ ಟೂರ್ನಿಯಲ್ಲಿ ಆಡಲಿಳಿದಿದೆ.

ಇನ್ನು ನೇಪಾಳ ತಂಡ ಇದೇ ಮೊದಲ ಬಾರಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದೆ. ಹಲವು ಪ್ರತಿಭಾವಂತ ಆಟಗಾರರ ಪಡೆಯನ್ನು ಹೊಂದಿರುವ ನೇಪಾಳ ಈ ಟೂರ್ನಿಯಲ್ಲಿ ಬಲಿಷ್ಠ ತಂಡಗಳ ಮಧ್ಯೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ನೇಪಾಳ (ಪ್ಲೇಯಿಂಗ್ XI): ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ಸಿ), ಆರಿಫ್ ಶೇಖ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಗುಲ್ಸನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಮಿಚಾನೆ, ಲಲಿತ್ ರಾಜಬನ್ಶಿ
ಪಾಕಿಸ್ತಾನ (ಪ್ಲೇಯಿಂಗ್ XI): ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ಸಿ), ಮೊಹಮ್ಮದ್ ರಿಜ್ವಾನ್(ಡಬ್ಲ್ಯೂ), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications