For Quick Alerts
ALLOW NOTIFICATIONS  
For Daily Alerts
 

ಏಷ್ಯಾ ಕಪ್‌ಗೆ 17 ಆಟಗಾರರ ಬಳಗವನ್ನು ಘೋಷಣೆ ಮಾಡಿದ ಅಫ್ಘಾನಿಸ್ತಾನ

ಏಷ್ಯಾಕಪ್ ಟೂರ್ನಿಯ ಆರಂಭಕ್ಕೆ ಎರಡು ದಿನಗಳು ಮಾತ್ರವೇ ಬಾಕಿಯಿರುವಾಗ ಅಫ್ಘಾನಿಸ್ತಾನ 17 ಆಟಗಾರರ ಬಲಿಷ್ಠ ಸ್ಕ್ವಾಡ್ ಪ್ರಕಟಿಸಿದೆ. ಈ ತಂಡಕ್ಕೆ ರಾಷ್ಟ್ರೀಯ ಟಿ20 ತಂಡದ ಪ್ರಮುಖ ಸದಸ್ಯ ಕರೀಮ್ ಜನತ್ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. 2017ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಕರೀಮ್ ಅದಾದ ಬಳಿಕ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರಲಿಲ್ಲ.

ಇದೀಗ ಸುದೀರ್ಘ ಕಾಲದ ಬಳಿಕ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಜನ್ನತ್ಒಂದು ಟೆಸ್ಟ್ ಪಂದ್ಯದಲ್ಲಿ ಆಡಿದ್ದು 49 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ.

Asia Cup 2023: Afghanistan announced 17-member squad for Asia Cup 2023

ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡವನ್ನು ಎಡಗೈ ಬ್ಯಾಟರ್ ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಶ್ರೀಲಂಕಾ ಮತ್ತು ಪಾಕಿಸ್ತಾನದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸ್ಪಿನ್ನರ್‌ಗಳನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ಮತ್ತು ಶರಫುದ್ದೀನ್ ಅಶ್ರಫ್ ಸ್ಪಿನ್ನರ್‌ಗಳಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರವಾಗಿ ಆರಂಭಿಕ ಆಟಗಾರರಾದ ರಹ್ಮನುಲ್ಲಾಹ್ ಗುರ್ಬಾಜ್ ಹಾಗೂ ಇಬ್ರಾಹಿಮ್ ಜದ್ರಾನ್ ಇಬ್ಬರು ಕೂಡ ಅದ್ಭುತ ಫಾರ್ಮ್‌ನಲ್ಲಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ಏಷ್ಯಾಕಪ್‌ನಲ್ಲಿ ಈ ಇಬ್ಬರು ಆಟಗಾರರ ಪ್ರದರ್ಶನ ಅಫ್ಘಾನಿಸ್ತಾನ ತಂಡಕ್ಕೆ ನಿರ್ಣಾಯಕವಾಗಲಿದೆ.

ಇನ್ನು ಅಫ್ಘಾನಿಸ್ತಾನ ತಂಡ ಏಷ್ಯಾಕಪ್ ಸರಣಿಗೂ ಮುನ್ನ ಪಾಕಿಸ್ತಾನ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಸಾಕಷ್ಟು ಪೈಪೊಟಿಯನ್ನು ನೀಡಿದ್ದರೂ ಅಫ್ಘಾನಿಸ್ತಾನ ತಂಡ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನದ ಏಕದಿನ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡಿದ್ದು ಸೋಲಿನ ಮೂಲಕ ಏಷ್ಯಾಕಪ್ ಟೂರ್ನಿಗೆ ಸಿದ್ಧವಾಗುತ್ತಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನದ ಮೊದಲ ಪಂದ್ಯವನ್ನು ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶದ ವಿರುದ್ಧ ಸೆಪ್ಟೆಂಬರ್ 3ರಂದು ಆಡಲಿದ್ದು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಅಫ್ಘಾನಿಸ್ತಾನ ತಂಡ ಹೀಗಿದೆ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ನಜೀಬುಲ್ಲಾ ಝದ್ರಾನ್, ರಶೀದ್ ಖಾನ್, ಇಕ್ರಮ್ ಅಲಿ ಖಿಲ್, ಕರೀಂ ಜನತ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ಮುಜೀಬ್ ಉರ್ ರಹಮಾನ್, ಫಜಲ್ಹಾಕ್ ಶರಫ್, ನೂರಫ್, ನೂಕಿ, ಅಬ್ದುಲ್ ರೆಹಮಾನ್, ಮೊಹಮ್ಮದ್ ಸಲೀಂ

Story first published: Sunday, August 27, 2023, 21:43 [IST]
Other articles published on Aug 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+