For Quick Alerts
ALLOW NOTIFICATIONS  
For Daily Alerts
 

India vs Bangladesh: ಗಿಲ್, ಅಕ್ಷರ್ ಹೋರಾಟ ವ್ಯರ್ಥ; ಭಾರತವನ್ನು ಸೋಲಿಸಿ ಪಂದ್ಯಾವಳಿ ಮುಗಿಸಿದ ಬಾಂಗ್ಲಾದೇಶ

ಶುಕ್ರವಾರ, ಸೆಪ್ಟೆಂಬರ್ 14ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ 2023ರ ಏಷ್ಯಾ ಕಪ್ ಪಂದ್ಯಾವಳಿಯ ಕೊನೆಯ ಸೂಪರ್ 4 ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಬಾಂಗ್ಲಾದೇಶ ತಂಡ 6 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಆದರೂ, ಈ ಗೆಲುವಿನ ಮೂಲಕ ಬಾಂಗ್ಲಾದೇಶ ತಂಡ 2023ರ ಏಷ್ಯಾ ಕಪ್ ಪಂದ್ಯಾವಳಿ ಮುಗಿಸಿದರೆ, ಭಾರತ ಕೊನೆಯ ಎರಡು ಪಂದ್ಯಗಳನ್ನು ಗೆದ್ದಿದ್ದ ಕಾರಣ, ಈಗಾಗಲೇ ಫೈನಲ್ ತಲುಪಿದೆ.

Asia Cup 2023: Bangladesh Beat Team India By 6 Runs In Super 4 Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ ನಾಯಕ ಶಕೀಬ್ ಅಲ್ ಹಸನ್ ಅವರ ಭರ್ಜರಿ ಆರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್‌ಗಳನ್ನು ಕಲೆಹಾಕಿತ್ತು.

266 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ ಶುಭ್ಮನ್ ಗಿಲ್ ಅವರ ಭರ್ಜರಿ ಶತಕ ಮತ್ತು ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರ ಹೋರಾಟದ ಹೊರತಾಗಿಯೂ 49.5 ಓವರ್‌ಗಳಲ್ಲಿ 259 ರನ್‌ಗಳಿಗೆ ಸರ್ವಪತನ ಕಂಡಿತು. ಕೊನೆಯ ಓವರ್‌ನಲ್ಲಿ 12 ರನ್ ಬೇಕಿದ್ದಾಗ ಮೊಹಮ್ಮದ್ ಶಮಿ ಒಂದು ಬೌಂಡರಿ ಮತ್ತು ಒಂದು ರನ್ ಮಾತ್ರ ಗಳಿಸಿ 6 ರನ್‌ಗಳಿಂದ ಸೋಲು ಕಂಡಿತು.

ಚೇಸಿಂಗ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ನಾಯಕ ರೋಹಿತ್ ಶರ್ಮಾ ಸೊನ್ನೆ ಸುತ್ತಿ ನಿರಾಶೆ ಮೂಡಿಸಿದರು. ನಂತರ ಬಂದ ಚೊಚ್ಚಲ ಏಕದಿನ ಆಟಗಾರ ತಿಲಕ್ ವರ್ಮಾ 5 ರನ್ ಗಳಿಸಿದರೆ, ಕೆಎಲ್ ರಾಹುಲ್ 19 ರನ್, ಇಶಾನ್ ಕಿಶನ್ 5 ರನ್ ಮಾತ್ರ ಗಳಿಸಿದರು.

Asia Cup 2023: Bangladesh Beat Team India By 6 Runs In Super 4 Match

ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ 34 ಎಸೆತಗಳಲ್ಲಿ 3 ಬೌಂಡರಿ ಸಮೇತ 26 ರನ್ ಗಳಿಸಿದರೆ, ರವೀಂದ್ರ ಜಡೇಜಾ 7 ರನ್ ಗಳಿಸಿದರೆ, ಶಾರ್ದೂಲ್ ಠಾಕೂರ್ 11 ರನ್, ಮೊಹಮ್ಮದ್ ಶಮಿ 6 ರನ್ ಗಳಿಸಿದರು.

ಆದರೆ, ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 5ನೇ ಶತಕ ಬಾರಿಸಿದರು. ಔಟಾಗುವ ಮುನ್ನ ಶುಭ್ಮನ್ ಗಿಲ್ 133 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್ ಮೂಲಕ 121 ರನ್‌ಗಳನ್ನು ಬಾರಿಸಿದರು. ಇವರಿಗೆ ಸಾಥ್ ನೀಡಿದ ಅಕ್ಷರ್ ಪಟೇಲ್ 34 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 42 ರನ್ ಗಳಿಸಿದರು. ಆದರೆ ಭಾರತ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ಮುಸ್ತಫಿಜುರ್ ರಹಮನ್ 8 ಓವರ್‌ಗಳಲ್ಲಿ 50 ರನ್ ನೀಡಿ 3 ವಿಕೆಟ್ ಪಡೆದರೆ, ತಂಜಿಮ್ ಹಸನ್ ಶಕೀಬ್ 7.5 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. ಮೆಹೆದಿ ಹಸನ್ 9 ಓವರ್‌ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಶಕೀಬ್ ಅಲ್ ಹಸನ್ ಮತ್ತು ಮೆಹಿದಿ ಹಸನ್ ಮಿರಾಜ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

Asia Cup 2023: Bangladesh Beat Team India By 6 Runs In Super 4 Match

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡದ ಪರ ತಂಜಿದ್ ಹಸನ್ 13 ರನ್ ಗಳಿಸಿ ಔಟಾದರೆ, ಲಿಟ್ಟನ್ ದಾಸ್ ಸೊನ್ನೆ ಸುತ್ತಿದರು. ನಂತರ ಬಂದ ಅನಾಮುಲ್ ಹಕ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಆ ಬಳಿಕ ನಾಯಕ ಶಕೀಬ್ ಅಲ್ ಹಸನ್ 85 ಎಸೆತಗಳನ್ನು ಎದುರಿಸಿ 6 ಬೌಂಡರಿ ಮತ್ತು 3 ಸಿಕ್ಸರ್ ಮೂಲಕ 80 ರನ್ ಬಾರಿಸಿದರು. ಮೆಹಿದಿ ಹಸನ್ ಮಿರಾಜ್ 28 ಎಸೆತಗಳಲ್ಲಿ 13 ರನ್ ಗಳಿಸಿದರು. ತೌಹಿದ್ ಹೃದೋಯ್ 81 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 54 ರನ್ ಬಾರಿಸಿದರು.

ಶಮೀಮ್ ಹೊಸೈನ್ 1 ರನ್‌ಗಳಿಗೆ ಪೆವಿಲಿಯನ್ ಸೇರಿದರೆ, ನಸುಮ್ ಅಹ್ಮದ್ 45 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 44 ರನ್ ಗಳಿಸಿದರು, ಮೆಹೆದಿ ಹಸನ್ 23 ಎಸೆತಗಳಲ್ಲಿ 29 ರನ್‌ಗಳ ಗಳಿಸಿದರೆ, ತಂಜೀಮ್ ಹಸನ್ ಶಕೀಬ್ 14 ರನ್ ಗಳಿಸಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

ಭಾರತ ತಂಡದ ಪರ ಬೌಲಿಂಗ್‌ನಲ್ಲಿ ಶಾರ್ದೂಲ್ ಠಾಕೂರ್ 10 ಓವರ್‌ಗಳಲ್ಲಿ 65 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ 8 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಪ್ರಸಿದ್ಧ್ ಕೃಷ್ಣ, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.

Story first published: Friday, September 15, 2023, 23:21 [IST]
Other articles published on Sep 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+