Asia Cup 2023: ಬಾಂಗ್ಲಾದೇಶ vs ಅಫ್ಘಾನಿಸ್ತಾನ ರೋಚಕ ಪಂದ್ಯದ ವಿವರ; ಸಂಭಾವ್ಯ ಆಡುವ 11ರ ಬಳಗ
ಭಾನುವಾರ, ಸೆಪ್ಟೆಂಬರ್ 3ರಂದು ಲಾಹೋರ್‌ನಲ್ಲಿ ನಡೆಯುವ 2023ರ ಏಷ್ಯಾ ಕಪ್ ಪಂದ್ಯಾವಳಿಯ 4ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಅಫ್ಘಾನಿಸ್ತಾನ ಇಂದು ತನ್ನ ಮೊದಲ ಪಂದ್ಯವನ್ನು ಆಡುತ್ತಿದ್ದರೆ, ಬಾಂಗ್ಲಾದೇಶಕ್ಕೆ ಇದು ಎರಡನೇ ಪಂದ್ಯವಾಗಿದೆ.

ಏಷ್ಯಾ ಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳಿಂದ ಸೋತ ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡ ಪುಟಿದೇಳಲು ಎದುರು ನೋಡುತ್ತಿದೆ. ಅಫ್ಘಾನಿಸ್ತಾನ ವಿರುದ್ಧ ಅದ್ಭುತವಾಗಿ ಪುನರಾಗಮನ ಮಾಡುವ ಗುರಿಯನ್ನು ಹೊಂದಿದ್ದರೆ, ಅಫ್ಘಾನಿಸ್ತಾನ ತಂಡವೂ ಕೂಡ ಕಠಿಣ ಸವಾಲು ಒಡ್ಡಲಿದೆ.
ಅಫ್ಘಾನಿಸ್ತಾನ ತಂಡದ ಪ್ರಮುಖ ಆಟಗಾರರೆಂದರೆ, ರಹಮಾನುಲ್ಲಾ ಗುರ್ಬಾಜ್, ನಾಯಕ ಹಶ್ಮತುಲ್ಲಾ ಶಾಹಿದಿ, ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಮತ್ತು ಅವರ ಅನುಭವಿ ಆಲ್‌ರೌಂಡರ್ ಮೊಹಮ್ಮದ್ ನಬಿ ಇದ್ದಾರೆ.

ವಿಶೇಷವಾಗಿ, ರಹಮಾನುಲ್ಲಾ ಗುರ್ಬಾಜ್ ಪ್ರಚಂಡ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗಷ್ಟೇ ಪಾಕಿಸ್ತಾನದ ವಿರುದ್ಧ ಏಕದಿನ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು. ಜೂನ್ ಮತ್ತು ಜುಲೈನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಫ್ಘಾನಿಸ್ತಾನ ತಂಡವು ಬಾಂಗ್ಲಾದೇಶವನ್ನು ಸೋಲಿಸಿತ್ತು ಎಂಬುದನ್ನು ಮರೆಯುವಂತಿಲ್ಲ. ಹಾಗಾಗಿ ಇಂದಿನ ಪಂದ್ಯವು ರೋಚಕತೆಯಿಂದ ಕೂಡಿರಲಿದೆ.
ಮತ್ತೊಂದೆಡೆ, ಬಾಂಗ್ಲಾದೇಶ ತಂಡವು ಗಾಯಾಳುಗಳಾದ ಲಿಟ್ಟನ್ ದಾಸ್ ಮತ್ತು ತಮೀಮ್ ಇಕ್ಬಾಲ್ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಅನುಭವಿ ಆಟಗಾರರ ಇಲ್ಲದೆಯೂ ಗೆದ್ದು ತೋರಿಸಲು ಇದು ಉತ್ತಮ ಅವಕಾಶವಾಗಿದೆ.
ಶ್ರೀಲಂಕಾ ವಿರುದ್ಧದ ಚೊಚ್ಚಲ ಪಂದ್ಯದಲ್ಲೇ ಸೊನ್ನೆ ಸುತ್ತಿದ ತಂಜಿದ್ ಹಸನ್ ಬದಲಿಗೆ ಬಾಂಗ್ಲಾದೇಶ ತಂಡವು ಅನಾಮುಲ್ ಹಕ್‌ಗೆ ಅವಕಾಶ ನೀಡಬಹುದು.
2023ರಲ್ಲಿ ವಿಕೆಟ್‌ಗಳನ್ನು ಪಡೆಯುತ್ತಲೇ ಇರುವ ವೇಗಿಗಳಾದ ಫಜಲ್‌ಹಕ್ ಫಾರೂಕಿ ಮತ್ತು ತಸ್ಕಿನ್ ಅಹ್ಮದ್ ಬಾಂಗ್ಲಾದೇಶ ತಂಡದ ಪ್ರಮುಖ ಬೌಲರ್‌ಗಳಾಗಿದ್ದಾರೆ. ಫಾರೂಕಿ ಬಾಂಗ್ಲಾದೇಶ ವಿರುದ್ಧ 6 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದರೆ, 2023ರಲ್ಲಿ ಇದುವರೆಗೆ ತಸ್ಕಿನ್ ಅಹ್ಮದ್ 8 ಪಂದ್ಯಗಳಲ್ಲಿ 13 ವಿಕೆಟ್‌ಗಳನ್ನು ಪಡೆದಿದ್ದಾರೆ.
2023ರ ಏಷ್ಯಾ ಕಪ್‌ನ ಬಾಂಗ್ಲಾದೇಶ vs ಅಫ್ಘಾನಿಸ್ತಾನ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಬಾಂಗ್ಲಾದೇಶ vs ಅಫ್ಘಾನಿಸ್ತಾನ ನಡುವಿನ ಪಂದ್ಯವು ಭಾನುವಾರ, ಸೆಪ್ಟೆಂಬರ್ 3ರಂದು ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಬಾಂಗ್ಲಾದೇಶ vs ಅಫ್ಘಾನಿಸ್ತಾನ ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು, 2.30ಕ್ಕೆ ಟಾಸ್ ನಡೆಯಲಿದೆ.
ಬಾಂಗ್ಲಾದೇಶ vs ಅಫ್ಘಾನಿಸ್ತಾನದ ಪಂದ್ಯ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್
2023ರ ಏಷ್ಯಾ ಕಪ್‌ನ ಬಾಂಗ್ಲಾದೇಶ vs ಅಫ್ಘಾನಿಸ್ತಾನ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು ಡಿಸ್ನಿ+ಹಾಟ್ ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಬಾಂಗ್ಲಾದೇಶ vs ಅಫ್ಘಾನಿಸ್ತಾನ ತಂಡಗಳ ಸಂಭಾವ್ಯ ಆಡುವ 11ರ ಬಳಗ
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ಫಜಲ್‌ಹಕ್ ಫಾರೂಕಿ, ಮುಜೀಬ್ ಉರ್ ರೆಹಮಾನ್, ಗುಲ್ಬದಿನ್ ನೈಬ್/ಕರೀಂ ಜನತ್, ಮೊಹಮ್ಮದ್ ಸಲೀಮ್ ಸಫಿ.
ಬಾಂಗ್ಲಾದೇಶ: ಮೊಹಮ್ಮದ್ ನಯಿಮ್, ತಂಝೀದ್ ಹಸನ್/ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದೋಯ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications