Asia Cup 2023: ಶ್ರೀಲಂಕಾ vs ಬಾಂಗ್ಲಾದೇಶ ಪಂದ್ಯದ ವಿವರ; ಸಂಭಾವ್ಯ ಆಡುವ 11ರ ಬಳಗ, ಟಿವಿ, ಲೈವ್ ಸ್ಟ್ರೀಮ್
ಗುರುವಾರ, ಆಗಸ್ಟ್ 31ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ 2023ರ ಏಷ್ಯಾ ಕಪ್ ಪಂದ್ಯಾವಳಿಯ 2ನೆ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ ತಂಡವು ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ.
2023ರ ಏಷ್ಯಾ ಕಪ್ ಪಂದ್ಯಾವಳಿಯನ್ನು 'ಹೈಬ್ರಿಡ್ ಮಾದರಿಯಲ್ಲಿ' ಆಡಲಾಗುತ್ತಿರುವುದರಿಂದ ಶ್ರೀಲಂಕಾ ಪಂದ್ಯಾವಳಿಯ ಸಹ-ಆತಿಥ್ಯ ವಹಿಸಿದೆ.

ಶ್ರೀಲಂಕಾ ತಂಡದ ಪ್ರಮುಖ ಬೌಲರ್‌ಗಳಾದ ವನಿಂದು ಹಸರಂಗ, ದುಷ್ಮಂತ ಚಮೀರ, ಲಹಿರು ಕುಮಾರ ಮತ್ತು ದಿಲ್ಶನ್ ಮಧುಶಂಕ ಅವರ ಅನುಪಸ್ಥಿತಿಯಲ್ಲಿ ದಸುನ್ ಶನಕ ನಾಯಕತ್ವದ ತಂಡವು ಕಣಕ್ಕಿಳಿಯುತ್ತಿದೆ.
ಶ್ರೀಲಂಕಾ ತನ್ನ ಕೊನೆಯ 5 ಏಕದಿನ ಪಂದ್ಯಗಳನ್ನು ಸತತವಾಗಿ ಗೆದ್ದಿದೆ ಮತ್ತು ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಮುಖ್ಯ ಪಂದ್ಯಾವಳಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಮಾರ್ಗದಲ್ಲಿ ಜಿಂಬಾಬ್ವೆಯಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರ ಕ್ವಾಲಿಫೈಯರ್ ಪಂದ್ಯಾವಳಿಯಲ್ಲಿ ಅಜೇಯವಾಗಿ ಉಳಿದಿತ್ತು.
ಮತ್ತೊಂದೆಡೆ, ಬಾಂಗ್ಲಾದೇಶ ತಂಡದ ಪ್ರಮುಖ ಬ್ಯಾಟರ್‌ಗಳಾದ ತಮೀಮ್ ಇಕ್ಬಾಲ್ ಮತ್ತು ಲಿಟ್ಟನ್ ದಾಸ್ ಅವರು ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ತಮೀಮ್ ಇಕ್ಬಾಲ್ ನಾಯಕತ್ವ ತ್ಯಜಿಸಿದ ನಂತರ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮತ್ತೆ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಕೆಲವು ವರ್ಷಗಳ ಹಿಂದೆ ಇದೇ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶದ ಐತಿಹಾಸಿಕ ಗೆಲುವಿನ ನಂತರ ಈ ಪಂದ್ಯವನ್ನು 'ನಾಗಿನ್' ಡರ್ಬಿ ಎಂದು ಕರೆಯಲಾಗುತ್ತದೆ.
ಏಷ್ಯಾ ಕಪ್ 2023: ಶ್ರೀಲಂಕಾ vs ಬಾಂಗ್ಲಾದೇಶ ಪಂದ್ಯದ ವಿವರ
ಪಂದ್ಯದ ಸ್ಥಳ ಮತ್ತು ದಿನಾಂಕ: 2023ರ ಏಷ್ಯಾ ಕಪ್ ಪಂದ್ಯಾವಳಿಯ ಶ್ರೀಲಂಕಾ vs ಬಾಂಗ್ಲಾದೇಶ ಪಂದ್ಯವು ಗುರುವಾರ, ಆಗಸ್ಟ್ 31ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಶ್ರೀಲಂಕಾ vs ಬಾಂಗ್ಲಾದೇಶ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ ಮತ್ತು 2.30ಕ್ಕೆ ಟಾಸ್ ನಡೆಯಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಶ್ರೀಲಂಕಾ vs ಬಾಂಗ್ಲಾದೇಶ ನಡುವಿನ 2023ರ ಏಷ್ಯಾ ಕಪ್‌ನ 2ನೇ ಪಂದ್ಯವು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.
ಏಷ್ಯಾ ಕಪ್ 2023: ಶ್ರೀಲಂಕಾ vs ಬಾಂಗ್ಲಾದೇಶ ಸಂಭಾವ್ಯ ಆಡುವ 11ರ ಬಳಗ
ಬಾಂಗ್ಲಾದೇಶ: ಮೊಹಮ್ಮದ್ ನಯಿಮ್, ತಂಜೀದ್ ಹಸನ್/ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕಿಬ್ ಅಲ್ ಹಸನ್ (ನಾಯಕ), ತೌಹಿದ್ ಹೃದೋಯ್, ಮುಶ್ಫಿಕುರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ.
ಶ್ರೀಲಂಕಾ: ದಿಮುತ್ ಕರುಣಾರತ್ನೆ, ಪಾಥುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುಶನ್ ಹೇಮಂತ/ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಬಿನೂರ ಫೆರ್ನಾಂಡೋ, ಕಸುನ್ ರಜಿತ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications