ಏಷ್ಯಾಕಪ್ ಟೂರ್ನಿಯಲ್ಲಿ ಇಂದು ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು ಭರ್ಜರಿ ಹೋರಾಟ ನಡೆದಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಬಾಂಗ್ಲಾದೇಶ ಭರ್ಜರಿ 89 ರನ್‌ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಸೂಪರ್ 4 ಹಂತಕ್ಕೇರುವ ಸ್ಪರ್ಧೆಯಲ್ಲಿ ಬಾಂಗ್ಲಾದೇಶ ಉಳಿದುಕೊಂಡಿದೆ.
ಬಾಂಗ್ಲಾದೇಶ ನೀಡಿದ 335 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ಮೊದಲ ವಿಕೆಟನ್ನು ಶೀಘ್ರದಲ್ಲಿಯೇ ಕಳೆದುಕೊಂಡರೂ ಬಳಿಕ ಉತ್ತಮ ಹೋರಾಟವನ್ನು ಪ್ರದರ್ಶಿಸಿತು. ಇಬ್ರಾಹಿಮ್ ಜದ್ರಾನ್, ರಹ್ಮತ್ ಶಾ ಹಾಗೂ ನಾಯಕ ಹಶ್ಮತುಲ್ಲಾ ಶಾಹಿದಿ ಪೈಪೊಟಿ ನೀಡಿದ. ಆದರೆ ನಂತರದ ಬ್ಯಾಟರ್‌ಗಳಿಮದ ನೆರವು ದೊರೆಯಲಿಲ್ಲ. ಹೀಗಾಗಿ 245 ರನ್‌ಗಳಿಗೆ ಅಫ್ಘಾನಿಸ್ತಾನ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 89 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಈ ಸೋಲಿನಿಂದಾಗಿ ಅಫ್ಘಾನಿಸ್ತಾನ ತಂಡ ಮುಂದಿನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಅಂತರದಿಂದ ಗೆದ್ದರೆ ಮಾತ್ರವೇ ಸೂಪರ್ 4 ಹಂತಕ್ಕೆ ಪ್ರವೇಶ ಪಡೆಯಲು ಸಾಧ್ಯವಾಗಲಿದೆ. ಇಲ್ಲವಾದಲ್ಲಿ ತನ್ನ ಹೋರಾಟವನ್ನು ಲೀಗ್ ಹಂತಕ್ಕೆ ಅಂತ್ಯಗೊಳಸಬೇಕಾಗುತ್ತದೆ.
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಅದ್ಭುತ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ 60 ರನ್‌ಗಳ ಜೊತೆಯಾಟ ಬಂದಿತ್ತು. ಆದರೆ ತೌಹಿದ್ ಹೃದೊಯ್ ಶೂನ್ಯಕ್ಕೆ ಔಟಾಗುವ ಮೂಲಕ 63 ರನ್‌ಗಳಿಗೆ ಬಾಂಗ್ಲಾ ಎರಡನೇ ವಿಕೆಟ್ ಕಳೆದುಕೊಂಡಂತಾಯಿತು. ಆದರೆ ನಂತರ ಮೆಹದಿ ಹಸನ್‌ಗೆ ಜೊತೆಯಾದ ಶಂಟೋ ಬೃಹತ್ ಜೊತೆಯಾಟವನ್ನು ನೀಡಿದರು. ಬರೊಬ್ಬರಿ ಶತಕದ ಜೊತೆತೆಯಾಟ ನೀಡಿದ ಈ ಇಬ್ಬರು ಆಟಗಾರರು ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾ ತಂಡದ ಮೇಲುಗೈಗೆ ಕಾರಣವಾದರು.
ಮೆಹದಿ ಹಸನ್ ಮಿರಾಜ್ ಈ ಪಂದ್ಯದಲ್ಲಿ ಗಾಯಗೊಂಡು ನಿವೃತ್ತರಾಗುವ ಮುನ್ನ 119 ಎಸೆತಗಳನ್ನು ಎದುರಿಸಿ 112 ರನ್‌ಗಳನ್ನು ಗಳಿಸಿದರು. ಇನ್ನು ಶಂಟೋ 104 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ನಂತರ ಕೊನೆಯಲ್ಲಿ ನಾಯಕ ಶಕೀಬ್ ಅಲ್ ಹಸನ್ ಕೂಡ ಸ್ಪೋಟಕ ಆಟವನ್ನು ಪ್ರದರ್ಶಿಸಿದರು. ಹೀಗಾಗಿ ಬಾಂಗ್ಲಾದೇಶ ಈ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಗಳಿಸಲು ಸಾಧ್ಯವಾಗಿದೆ.
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನೈಮ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್
ಬೆಂಚ್: ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಅನಾಮುಲ್ ಹಕ್, ಮಹೇದಿ ಹಸನ್, ಮುಸ್ತಾಫಿಜುರ್ ರೆಹಮಾನ್, ತಂಝೀದ್ ಹಸನ್
ಅಫ್ಘಾನಿಸ್ತಾನ ಆಡುವಬಳಗ: ರಹಮಾನುಲ್ಲಾ ಗುರ್ಬಾಜ್ (ವಾಕ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ಸಿ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ಮುಜೀಬ್ ಉರ್ ರೆಹಮಾನ್
ಬೆಂಚ್: ರಿಯಾಜ್ ಹಸನ್, ಇಕ್ರಮ್ ಅಲಿಖಿಲ್, ಅಬ್ದುಲ್ ರೆಹಮಾನ್, ಶರಫುದ್ದೀನ್ ಅಶ್ರಫ್, ನೂರ್ ಅಹ್ಮದ್, ಸುಲಿಮಾನ್ ಸಫಿ