For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ 2023: ಪಾಕಿಸ್ತಾನದಲ್ಲಿ ಪಂದ್ಯಗಳನ್ನು ವೀಕ್ಷಿಸಲಿದ್ದಾರೆ ಬಿಸಿಸಿಐ ಅಧ್ಯಕ್ಷ ಹಾಗೂ ಉಪಾಧ್ಯಕ್ಷ

ಏಷ್ಯಾಕಪ್ ಟೂರ್ನಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಬುಧವಾರ ಆಗಸ್ಟ್ 30ರಂದು ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗುವ ಮೂಲಕ ಈ ಟೂರ್ನಿಗೆ ಚಾಲನೆ ದೊರೆಯಲಿದೆ. ಪಾಕಿಸ್ತಾನ ಹಾಗೂ ಶ್ರೀಲಂಕಾದ ಜಂಟಿ ಆಯೋಜನೆಯಲ್ಲಿ ಈ ಟೂರ್ನಿ ನಡೆಯಲಿದೆ. ಪಾಕಿಸ್ತಾನ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ ಮಂಡಳಿಗಳ ಪ್ರತಿನಿಧಿಗಳಿಗೆ ಔತಣಕೂಟವನ್ನು ಆಯೋಜನೆ ಮಾಡಲಾಗಿದ್ದು ಬಿಸಿಸಿಐ ಅಧ್ಯಕ್ಷ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಉಪಾಧ್ಯಕ್ಷ ರಾಜೀವ್ ಶುಕ್ಲ ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ.

ಈ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಪಾಕಿಸ್ತಾನದಲ್ಲಿ ನಡೆಯಲಿರುವ ಆರಂಭಿಕ ಕೆಲ ಪಂದ್ಯಗಳಿಗೆ ಸಾಕ್ಷಿಯಾಗಲಿದ್ದಾರೆ ಎಂದು ಕೂಡ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸ್ವತಃ ರೋಜರ್ ಬಿನ್ನಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

Asia cup 2023: BCCI president Roger Binny and VP Rajeev Shukla set to attend matches in Pakistan

ರೋಜರ್ ಬಿನ್ನಿ ಪ್ರತಿಕ್ರಿಯೆ

"ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹಾಗೂ ನಾನು ವಾಘಾ ಗಡಿ ಮೂಲಕ ಸೆಪ್ಟೆಂಬರ್ 4ರಂದು ಪಾಕಿಸ್ಥಾನಕ್ಕೆ ತೆರಳಲಿದ್ದೇವೆ. ಅಧಿಕೃತವಾದ ಔತಣಕೂಟ ಮಾತ್ರವಲ್ಲದೆ ಒಂದೆರಡು ಪಂದ್ಯಗಳನ್ನು ಕೂಡ ನಾವು ವೀಕ್ಷಿಸಲಿದ್ದೇವೆ" ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹೇಳಿಕೆಯನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

2008ರ ಬಳಿಕ ಇದೇ ಮೊದಲು

ಸೆಪ್ಟೆಂಬರ್ 7 ರಂದು ಬಿಸಿಸಿಐನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಭಾರತಕ್ಕೆ ಮರಳಲಿದೆ. 2008ರಲ್ಲಿ ಮುಂಬೈ ಭಯೋತ್ಪಾದನಾ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ತಮ್ಮ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧವನ್ನು ಮುರಿದುಕೊಂಡಿತ್ತು. ಅದಾದ ಬಳಿಕ ನೆರೆಯ ರಾಷ್ಟ್ರಕ್ಕೆ ಬಿಸಿಸಿಐ ಅಧ್ಯಕ್ಷರೊಬ್ಬರು ಮಾಡಲಿರುವ ಮೊದಲ ಪ್ರವಾಸ ಇದಾಗಿದೆ.

ಕಳೆದ ಆಗಸ್ಟ್ 15 ರಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿತ ವ್ಯವಸ್ಥಾಪಕ ಸಮಿತಿಯ ಪ್ರಸ್ತುತ ಅಧ್ಯಕ್ಷ ಝಕಾ ಅಶ್ರಫ್ ಬಿಸಿಸಿಐ ಉನ್ನತ ಅಧಿಕಾರಿಗಳಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದ್ದರು. ಈ ಹಿನನ್ಎಲೆಯಲ್ಲಿ ಬಿಸಿಸಿಐ ಸೇರಿದಂತೆ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಎಲ್ಲಾ ರಾಷ್ಟ್ರಗಳ ಮಂಡಳಿಗಳ ಪ್ರತಿನಿಧಿಗಳು ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ಶ್ರೀಲಂಕಾದಲ್ಲಿ ಭಾರತ ಪಾಕ್ ಮುಖಾಮುಖಿ

ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 2ರಂದು ಪಲ್ಲೆಕೆಲೆಯಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನು ಶ್ರೀಲಂಕಾಗೆ ತೆರಳಿ ವಿಕ್ಷಿಸಲಿದ್ದಾರೆ. ಅದಾದ ಬಳಿಕ ಭಾರತಕ್ಕೆ ವಾಪಸಾಗಿ ನಂತರ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಎನ್‌ಸಿಎನಲ್ಲಿ ಅಭ್ಯಾಸ ನಡೆಸುತ್ತಿರುವ ಟೀಮ್ ಇಂಡಿಯಾ

ಇನ್ನು ಇತ್ತ ಟೀಮ್ ಇಂಡಿಯಾ ಬೆಂಗಳೂರಿನ ಎನ್‌ಸಿಎನಲ್ಲಿ ಏಷ್ಯಾಕಪ್ ಟೂರ್ನಿಗೆಕೊನೆಯ ಹಂತದ ಸಿದ್ಧತೆ ನಡೆಸುತ್ತಿದೆ. ಆರು ದಿನಗಳ ಶಿಬಿರದಲ್ಲಿ ಭಾರತದ ಆಟಗಾರರು ಭಾಗಿಯಾಗಿದ್ದು ನಂತರ ಶ್ರೀಲಂಕಾಗೆ ಪ್ರಯಾಣಿಸಲಿದ್ದಾರೆ. ಇನ್ನು ಟೀಮ್ ಇಂಡಿಯಾದ ಬಹುತೇಕ ಆಟಗಾರರು ಯೊ ಯೋ ಪರೀಕ್ಷೆಯಲ್ಲಿ ಭಾಗಿಯಾಗಿ ಉತ್ತೀರ್ಣರಾಗಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧ ಸರಣಿ ಗೆದ್ದ ಪಾಕಿಸ್ಥಾನ

ಇತ್ತ ಪಾಕಿಸ್ತಾನ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಭಾಗಿಯಾಗಲಿರುವ ಮತ್ತೊಂದು ತಂಡವಾದ ಅಫ್ಘಾನಿಸ್ತಾನದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಿತ್ತು. ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿಯೂ ಪಾಕ್ ಗೆಲುವು ಸಾಧಿಸಿದ್ದು ಸರಣಿಯನ್ನು ವೈಟ್‌ವಾಶ್ ಮಾಡಿದೆ. ಈ ಮೂಲಕ ಏಷ್ಯಾಕಪ್ ಟೂರ್ನಿಗೆ ಭರ್ಜರಿಯಾಗಿ ಸಿದ್ದವಾಗಿರುವುದಾಗಿ ಘೋಷಣೆ ಮಾಡಿದೆ. ಇನ್ನು ಇದೇ ಸಂದರ್ಭದಲ್ಲಿ ಪಾಕಿಸ್ತಾನ ಏಕದಿನ ಮಾದರಿಯ ಐಸಿಸಿ ಶ್ರೇಯಾಂಕದಲ್ಲಿಯೂ ನಂಬರ್ 1 ಸ್ಥಾನಕ್ಕೇರಿದೆ.

Story first published: Sunday, August 27, 2023, 13:45 [IST]
Other articles published on Aug 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+