ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಕಳೆದ ಪಂದ್ಯಕ್ಕಿಂತ ಭಾರೀ ಬದಲಾವಣೆಯಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಿಮದ ಹೊರಗುಳಿದಿದ್ದ ಎಲ್ಲಾ ಆಟಗಾರರು ಕೂಡ ತಂಡಕ್ಕೆ ಮರಳಿದ್ದಾರೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಜಸ್ಪ್ರೀತ್ ಬೂಮ್ರಾ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ ಈ ಪಂದ್ಯದಲ್ಲಿ ವಾಶಿಂಗ್ಟನ್ ಸುಂದರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನು ಶ್ರೀಲಂಕಾ ತಂಡದಲ್ಲಿ ಕೂಡ ಒಂದು ಬದಲಾವಣೆ ಮಾಡಿಕೊಂಡಿದೆ. ಗಾಯಗೊಂಡ ಮಥೀಶ ತೀಕ್ಷಣ ಬದಲಿಗೆ ದುಶಾನ್ ಹೇಮಂತ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಸಂಪೂರ್ಣ ಬಳಗದೊಂದಿಗೆ ಕಣಕ್ಕಿಳಿಯುತ್ತಿದೆ ಶ್ರೀಲಂಕಾ.
ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯಲು ಸರ್ವಸನ್ನಧವಾಗಿದೆ. ಎರಡು ತಂಡಗಳು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಅರ್ಹವಾಗಿಯೇ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿದೆ. ಈ ಮಹತ್ವದ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಆಟಗಾರರ ಪಡೆಯೊಂದಿಗೆ ಎರಡು ತಮಡಗಳು ಕೂಡ ಕಣಕ್ಕಿಳಿಯುತ್ತಿದ್ದು ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಗೆ, ದುಶನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ
ಬೆಂಚ್: ಕಸುನ್ ರಜಿತಾ, ಬಿನೂರ ಫೆರ್ನಾಂಡೋ, ದಿಮುತ್ ಕರುಣಾರತ್ನೆ, ಸಹನ್ ಅರಚ್ಚಿಗೆ