Asia Cup 2023: ಭಾರತ vs ನೇಪಾಳ ನಿರ್ಣಾಯಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ಸೋಮವಾರ, ಸೆಪ್ಟೆಂಬರ್ 4ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ಹೀಗಾಗಿ ರೋಹಿತ್ ಪೌಡೆಲ್ ನಾಯಕತ್ವದ ನೇಪಾಳ ತಂಡ ಮೊದಲ ಬ್ಯಾಟಿಂಗ್ ಮಾಡಲಿದೆ.

ಈ ಪಂದ್ಯವು ಭಾರತ ಮತ್ತು ನೇಪಾಳ ತಂಡಗಳ ನಡುವಿನ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಇಲ್ಲಿ ಗೆಲ್ಲುವ ತಂಡ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಹಂತಕ್ಕೆ ಅರ್ಹತೆ ಪಡೆಯಲಿದೆ.
ಈ ಪಂದ್ಯವು ಭಾರತ ಮತ್ತು ನೇಪಾಳ ತಂಡಗಳ ನಡುವಿನ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಇಲ್ಲಿ ಗೆಲ್ಲುವ ತಂಡ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಹಂತಕ್ಕೆ ಅರ್ಹತೆ ಪಡೆಯಲಿದೆ.
ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ರೋಹಿತ್ ಪೌಡೆಲ್ ನೇಪಾಳ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತದ ನಾಯಕ ಕೂಡ ರೋಹಿತ್ ಆಗಿದ್ದು, ಎರಡೂ ತಂಡಗಳ ನಾಯಕರ ಹೆಸರು ಒಂದೇ ಆಗಿರುವ ಅಪರೂಪದ ಪಂದ್ಯ ಬಹುಶಃ ಮೊದಲ ಬಾರಿಗೆ ಸಂಭವಿಸಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಆಡುವ 11ರಲ್ಲಿ ಸ್ಥಾನ ಪಡೆದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಸಂಜನಾ ಗಣೇಶನ್ ಇಂದು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದರು. ಈ ವೇಳೆ ಕುಟುಂಬದ ಜೊತೆಗಿರಲು ಬುಮ್ರಾ ತವರಿಗೆ ಮರಳಿದ್ದಾರೆ.
ಮತ್ತೊಂದೆಡೆ, ನೇಪಾಳ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆರಿಫ್ ಶೇಖ್ ಬದಲಾಗಿ ಭೀಮ್ ಶಾರ್ಕಿ ಅವರಿಗೆ ಅವಕಾಶ ನೀಡಲಾಗಿದೆ.
ಮುಲ್ತಾನ್‌ನಲ್ಲಿ ನಡೆದ 2023ರ ಏಷ್ಯಾ ಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ನೇಪಾಳ 238 ರನ್‌ಗಳಿಂದ ಸೋತಿದ್ದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಮಳೆಯಿಂದ ರದ್ದುಗೊಂಡಿತ್ತು.
ಭಾರತ ಮತ್ತು ನೇಪಾಳ ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನೇಪಾಳ: ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಭೀಮ್ ಶಾರ್ಕಿ, ಸೋಂಪಾಲ್ ಕಾಮಿ, ದೀಪೇಂದ್ರ ಸಿಂಗ್ ಐರಿ, ಗುಲ್ಸನ್ ಝಾ, ಕುಶಾಲ್ ಮಲ್ಲಾ, ಕರಣ್ ಕೆಸಿ, ಸಂದೀಪ್ ಲುಮಿಶ್ಚಾನೆ, ಲಲಿತ್ ರಾಜಬನ್ಶಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications