India vs Pakistan: ಎಷ್ಟು ಗಂಟೆಗೆ ಆರಂಭವಾಗಲಿದೆ ಭಾರತ vs ಪಂದ್ಯ? ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ
ಭಾರತ ಹಾಗೂ ಪಾಕಿಸ್ತಾನ ತಂಡಗಳು ಶನಿವಾರ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಏಷ್ಯಾಕಪ್ ಟೂರ್ನಿಯ ಈ ಪಂದ್ಯ ಬಹುನಿರೀಕ್ಷಿತ ಸೆಣೆಸಾಟವಾಗಿದ್ದು ಎರಡು ತಂಡಗಳಿಗೂ ಅತ್ಯಂತ ಮಹತ್ವದ ಪಂದ್ಯವೂ ಆಗಿದೆ. ಸುದೀರ್ಘ ಕಾಲದ ಬಳಿಕ ಈ ಎರಡು ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಪಂದ್ಯದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಎರಡು ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯುತ್ತಿದ್ದು ತೀವ್ರಜಿದ್ದಾಜಿದ್ದಿನ ಕದನ ನಡೆಯುವ ನಿರೀಕ್ಷೆಯಿದೆ. ಪಾಕಿಸ್ತಾನ ಏಕದಿನ ಕ್ರಿಕೆಟ್ ಮಾದರಿಯಲ್ಲಿ ನಂಬರ್ 1 ಸ್ಥಾನಕ್ಕೇರಿರುವ ಆತ್ಮವಿಶ್ವಾಸದಲ್ಲಿದೆ. ಆದರೆ ಭಾರತ ಈ ಸರಣಿಗೂ ಇಂದಿನ ಐದು ಪಂದ್ಯಗಳಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧಿಸಿಲೊ್ಲ ಎನ್ನುವುದು ಗಮನಾರ್ಹ. ಕಳೆದ ಐದು ಏಕದಿನ ಪಂದ್ಯಗಳಲ್ಲಿ ಭಾರತ ಎರಡು ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತ್ತು. ಆದರೆ ತಂಡದ ಕೆಲ ಪ್ರಮುಖ ಆಟಗಾರರು ಕಮ್‌ಬ್ಯಾಕ್ ಮಾಡಿದ್ದಾರೆ ಎನ್ನುವುದು ಪ್ರಮುಖ ಅಂಶ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಶನಿವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರದ ಹಕ್ಕನ್ನು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವಿದೆ. ಹಾಟ್‌ಸ್ಟಾರ್ ಮೊಬೈಲ್ ವರ್ಶನ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವೂ ಇದೆ.
ಪಿಚ್ ರಿಪೋರ್ಟ್
ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಡಾಂಗಣದ ಪಿಚ್ ಬ್ಯಾಟ್ ಹಾಗೂ ಬೌಲಿಂಗ್ ಮಧ್ಯೆ ಸಮಾನವಾದ ಹೋರಾಟಕ್ಕೆ ಅವಕಾಶ ನೀಡುವ ಗುಣಹೊಂದಿದೆ. ಪಿಚ್‌ನಲ್ಲಿ ತಿರುವು ಹಾಗೂ ಬೌನ್ಸ್ ಇರುವ ಕಾರಣ ಸ್ಪಿನ್ನರ್‌ಗಳಿಗೆ ಸ್ವಲ್ಪ ಹೆಚ್ಚಿನ ಪ್ರಮಾಣದ ನೆರವು ದೊರೆಯುವ ಸಾಧ್ಯತೆಯಿದೆ. ಸ್ಟ್ರೂಕ್‌ರೊಟೆಟ್ ಚೆನ್ನಾಗಿ ಮಾಡುವ ಬ್ಯಾಟರ್‌ಗಳು ಇಲ್ಲಿ ಹೆಚ್ಚು ಯಶಸ್ಸು ಪಡೆಯಲಿದ್ದಾರೆ. ಇಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 195 ರನ್ ಆಗಿರುವ ಕಾರಣ ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಬೌಲಿಂಗ್ ನಡೆಸುವ ಸಾಧ್ಯತೆಯಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಎಸ್ ಅಯ್ಯರ್, ಕೆಎಲ್ ರಾಹುಲ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ
ಪಾಕಿಸ್ಥಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶದಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications