For Quick Alerts
ALLOW NOTIFICATIONS  
For Daily Alerts
 

Asia Cup 2023: ಭಾರತದ ಈ ಸ್ಟಾರ್ ಬ್ಯಾಟ್ಸ್‌ಮನ್ 2023ರ ಏಷ್ಯಾ ಕಪ್ ಆಡುವುದು ಅನುಮಾನ!

ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ 2023ರ ಏಷ್ಯಾ ಕಪ್ ಪಂದ್ಯಾವಳಿ ಆರಂಭವಾಗಲಿದೆ. ಇದರಲ್ಲಿ ಏಷ್ಯಾದ 6 ತಂಡಗಳು ಭಾಗವಹಿಸಲಿದ್ದು, ಎಲ್ಲ ಸಿದ್ಧತೆಗಳು ನಡೆಯುತ್ತಿವೆ.

ಇದೇ ವೇಳೆ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು 2023ರ ಏಷ್ಯಾ ಕಪ್‌ನಲ್ಲಿ ಆಡುವುದು ಅನುಮಾನವೆನಿಸಿದೆ. 28 ವರ್ಷದ ಬಲಗೈ ಬ್ಯಾಟರ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ನಲ್ಲಿ ಪುನರ್ವಸತಿ ಪಡೆಯುತ್ತಿದ್ದಾರೆ.

Asia Cup 2023: Indias Batter Shreyas Iyer Is Doubtful To Play In Asia Cup 2023

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಖಾಯಂ ನಾಯಕ ಶ್ರೇಯಸ್ ಅಯ್ಯರ್ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ತವರಿನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ವೇಳೆ ಬೆನ್ನು ನೋವಿಗೆ ತುತ್ತಾದರು.

ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಬೆನ್ನಿನ ನೋವು ಪುನರಾವರ್ತನೆಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಉಳಿದ ಭಾಗ ಮತ್ತು ಸಂಪೂರ್ಣ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯಿಂದ ಹೊರಗುಳಿಯಬೇಕಾಯಿತು.

Asia Cup 2023: Indias Batter Shreyas Iyer Is Doubtful To Play In Asia Cup 2023

ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ವಿರುದ್ಧ ಲಂಡನ್‌ನ ಓವಲ್‌ನಲ್ಲಿ ನಡೆದ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ನಲ್ಲಿ ಭಾರತ ತಂಡ 209 ರನ್‌ಗಳ ಹೀನಾಯ ಸೋಲು ಕಂಡಿತು. ಈ ಮಹತ್ವದ ಪಂದ್ಯವನ್ನೂ ಶ್ರೇಯಸ್ ಅಯ್ಯರ್ ತಪ್ಪಿಸಿಕೊಂಡರು. ಅವರು ಇತ್ತೀಚೆಗೆ ಲಂಡನ್‌ನಲ್ಲಿ ಯಶಸ್ವಿ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಕೆಲವು ವರದಿಯ ಪ್ರಕಾರ, ಶ್ರೇಯಸ್ ಅಯ್ಯರ್ ಅವರು ಏಷ್ಯಾ ಕಪ್ ಪಂದ್ಯಾವಳಿ ಸಮಯದಲ್ಲಿ ಸಂಪೂರ್ಣ ಫಿಟ್‌ನೆಸ್ ಅನ್ನು ಮರಳಿ ಪಡೆಯುವ ಸಾಧ್ಯತೆ ಕಡಿಮೆ ಇದೆ. 28 ವರ್ಷದ ಯುವ ಆಟಗಾರ ಎನ್‌ಸಿಎಯಲ್ಲಿ ಬೆನ್ನುನೋವಿಗೆ ಚುಚ್ಚುಮದ್ದನ್ನು ಪಡೆಯುತ್ತಿದ್ದಾನೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

"ಶ್ರೇಯಸ್ ಅಯ್ಯರ್ ಅವರು ಇತ್ತೀಚೆಗೆ ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಬೆನ್ನುನೋವಿಗೆ ಇಂಜೆಕ್ಷನ್ ತೆಗೆದುಕೊಂಡರು. ಅವನ ಬೆನ್ನು ನೋವು ಇನ್ನೂ ತೊಂದರೆ ನೀಡುತ್ತಿದೆ," ಎಂದು ಮೂಲವೊಂದು ತಿಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವೆಸ್ಟ್ ಇಂಡೀಸ್ ಪ್ರವಾಸದಿಂದಲೂ ಹೊರಗುಳಿದಿರುವ ಶ್ರೇಯಸ್ ಅಯ್ಯರ್

ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಹಿಂದೆ 2023ರ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನ ಏಕದಿನ ಸರಣಿಯಿಂದ ಬೆನ್ನಿನ ನೋವಿನಿಂದಾಗಿ ಹೊರಗುಳಿದಿದ್ದರು. ಈ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯ ಅಂತಿಮ ಪಂದ್ಯದ ನಂತರ, ಅವರು ಬೆನ್ನಿನ ಬಿಗಿತದ ಬಗ್ಗೆ ದೂರಿದರು.

ಇದೀಗ ಜುಲೈ 12ರಿಂದ ಪ್ರಾರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸದಿಂದಲೂ ಶ್ರೇಯಸ್ ಅಯ್ಯರ್ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಬೆಂಗಳೂರಿನ ಎನ್‌ಸಿಎನಲ್ಲಿ ತಮ್ಮ ಪುನರ್ವಸತಿ ಮುಂದುವರೆಸಲಿದ್ದಾರೆ.

ಶ್ರೇಯಸ್ ಅಯ್ಯರ್ ಇದುವರೆಗೆ ಭಾರತ ತಂಡದ ಪರ 10 ಟೆಸ್ಟ್, 42 ಏಕದಿನ ಮತ್ತು 49 ಟಿ20 ಪಂದ್ಯಗಳನ್ನು ಆಡಿದ್ದಾರೆ. ಮುಂಬೈನ ಈ ಬ್ಯಾಟರ್ 2017ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಏಕದಿನ ಕ್ರಿಕೆಟ್ ಮಾದರಿಯಲ್ಲಿ ಅವರು 46.6ರ ಸರಾಸರಿಯಲ್ಲಿ 1631 ರನ್ ಬಾರಿಸಿದ್ದಾರೆ.

Story first published: Monday, June 26, 2023, 8:36 [IST]
Other articles published on Jun 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+