ಏಷ್ಯಾಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾದ ಯುವ ಆಟಗಾರ ಮತೀಶ ಪತಿರಣ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಮ್ಯಾಚ್ ವಿನ್ನಿಂಗ್ ಬೌಲಿಂಗ್ ನಡೆಸಿದ ಯುವ ಆಟಗಾರ ಬಾಂಗ್ಲಾದೇಶ ತಂಡದ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಅಂತಾರಾಷ್ಟ್ರೀಯ ಏಕದಿನ ಮಾದರಿಯಲ್ಲಿ ಪ್ರಪ್ರಥಮ ಪಂದ್ಯಶ್ರೇಷ್ಠ ಪ್ರಶಸ್ಸತಿ ಪಡೆದುಕೊಂಡಿದ್ದಾರೆ.
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಪತಿರಣ ಈ ಪಂದ್ಯದಲ್ಲಿ 7.4 ಓವರ್‌ಗಳ ಬೌಲಿಂಗ್ ನಡೆಸಿದ್ದು ಕೇವಲ 32 ರನ್‌ಗಳನ್ನು ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಇದು ಅವರ ಅತ್ಯುತ್ತಮ ಬೌಲಿಂಗ್ ಅಂಕಿಅಂಶವಾಗಿದೆ. ಈ ಭರ್ಜರಿ ಬೌಲಿಂಗ್ ಪ್ರದರ್ಶನದ ಕಾರಣದಿಂದಾಗಿ ಇ ಪಂದ್ಯದಲ್ಲಿ ಬಾಂಗ್ಲಾದೇಶ ಕೇವಲ 164 ರನ್‌ಗಳಿಗೆ ಆಲವಟ್ ಆಗಿತ್ತು.

ಬಾಂಗ್ಲಾದೇಶ ನೀಡಿದ್ದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ ಶ್ರೀಲಂಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿತ್ತು. 15 ರನ್‌ಗಳಾಗುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ ಲಂಕಾ 43 ರನ್‌ಗಳಾಗಿದ್ದಾಗ 3ನೇ ವಿಕೆಟ್ ಕಳೆದುಕೊಂಡಿತ್ತು. ಹೀಗಾಗಿ ಬಾಂಗ್ಲಾ ಪಡೆ ಬೌಲಿಂಗ್‌ನಲ್ಲಿ ತಿರುಗಿಬೀಳುವ ಸೂಚನೆ ನೀಡಿತ್ತು. ಆದರೆ ಲಂಕಾ ತಂಡಕ್ಕೆ ಈ ಸಂದರ್ಭದಲ್ಲಿ ಆಸರೆಯಾಗಿದ್ದು ಸದೀರ ಸಮತವಿಕ್ರಮ ಹಾಗೂ ಚರಿತ ಅಸಲಂಕಾ.
ಈ ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕವನ್ನು ಗಳಿಸಿ ಮಿಂಚಿದರು. ಸಮರವಿಕ್ರಮ 54 ರನ್‌ಗಳಿಸಿದರೆ ಚರಿತ ಅಸಲಂಕಾ 62 ರನ್‌ಗಳನ್ನು ಗಳಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡ ಇನ್ನೂ 11 ಓವರ್‌ಗಳು ಬಾಕಿಯಿರುವಂತೆಯೇ 5 ವಿಕೆಟ್‌ಗಳ ಅಂತರದಿಂದ ಗೆದ್ದುಬೀಗಿದೆ.
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ನಾಯಕ ಶಕೀಬ್ ಅಲ್ ಹಸನ್ ನಿರ್ಧಾರವನ್ನು ಸಮರ್ಥನೆ ಮಾಡಿಕೊಳ್ಳುವಂತೆ ಪ್ರದರ್ಶನ ನೀಡಲು ವಿಫಲವಾಯಿತು. ನಜ್ಮುಲ್ ಹುಸೇನ್ ಶಂಟೋ ಮಾತ್ರವೇ ಲಂಕಾ ದಾಳಿಗೆ ಪ್ರತ್ಯುತ್ತರ ನೀಡಲು ಸಮರ್ಥವಾಗಿದ್ದರು.
ಆರಂಭದಿಂದಲೇ ಹಿನ್ನಡೆ ಅನುಭವಿಸಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್‌ನಲ್ಲಿ ಹಿನ್ನಡೆ ಕಂಡಿತ್ತು. ಆದರೆ ಮೂರನೇ ಕ್ರಮಾಂಕದ ಆಟಗಾರ ನಜ್ಮುಲ್ ಹುಸೇನ್ ಶಂಟೋ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದರು. ಉಳಿದಂತೆ ಯಾವ ಬ್ಯಾಟರ್ ಕೂಡ ಉತ್ತಮ ಪ್ರದರ್ಶನ ನೀಡಲು ಸಫಲವಾಗಲಿಲ್ಲ. 122 ಎಸೆತಗಳನ್ನು ಎದುರಿಸಿದ ಶಂಟೋ 89 ರನ್‌ಗಳನ್ನು ಗಳಿಸಿದರು. ಹೀಗಾಗಿ 164 ರನ್‌ಗಳಿಸಿ ಬಾಂಗ್ಲಾದೇಶ ಆಲೌಟ್ ಆಯಿತು.
ಶ್ರೀಲಂಕಾ ತಂಡದ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ್ದು ಮತೀಶ ಪತಿರಣ. ಬಾಂಗ್ಲಾ ಪಡೆಗೆ ನಾಲ್ಕು ವಿಕೆಟ್ ಕಬಳಿಸಿ ಆಘಾತ ನೀಡಿದ್ದರು. ಉಳಿದಂತೆ ಮತೀಶ ಪತಿರಣ ಎರಡು ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಬಾಂಗ್ಲಾದೇಶ ತಂಡವನ್ನು 42.2 ಓವರ್‌ಗಳಲ್ಲಿ ಕಟ್ಟಿಹಾಕಲು ಶ್ರೀಲಂಕಾ ಯಶಸ್ವಿಯಾಗಿದೆ.
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ಹಸನ್ ಮಹಮೂದ್, ಅಫೀಫ್ ಹೊಸೈನ್, ಅನಾಮುಲ್ ಹಕ್, ನಸುಮ್ ಅಹ್ಮದ್, ಶಮೀಮ್ ಹೊಸೈನ್, ತಂಝಿಮ್ ಹಸನ್ ಸಾಕಿಬ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ
ಬೆಂಚ್: ದುಶನ್ ಹೇಮಂತ, ಕುಸಲ್ ಪೆರೇರಾ, ಪ್ರಮೋದ್ ಮದುಶನ್, ಬಿನೂರ ಫೆರ್ನಾಂಡೋ