ಏಷ್ಯಾ ಕಪ್ 2023: ಪಾಕಿಸ್ತಾನದ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್?
2023ರ ಏಷ್ಯಾಕಪ್ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಜಂಟಿಯಾಗಿ ಆರಂಭವಾಗಿದೆ. ಆದರೆ, ಎಲ್ಲರ ಚಿತ್ತ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಮೇಲೆ ನೆಟ್ಟಿದೆ. ಸೆಪ್ಟೆಂಬರ್ 2 ರಂದು ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಯಾವೆಲ್ಲಾ ಪ್ಲೇಯಯರ್ ಗಳಿಗೆ ಮಣೆ ಹಾಕಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.
ಐಪಿಎಲ್ 2023ರ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್, ಬಹಳ ಸಮಯದಿಂದ ಮೈದಾನಕ್ಕೆ ಎಂಟ್ರಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಗಾಯದಿಂದ ಇನ್ನೂ ಸಂಪೂರ್ಣ ಚೇತರಿಕೆ ಆಗದ ಕಾರಣ ಅವರು ಏಷ್ಯಾ ಕಪ್ ನ ಮೊದಲೆರೆಡು ಪಂದ್ಯಗಳಲ್ಲಿ ಕಣಕ್ಕೆ ಇಳಿಯುವುದಿಲ್ಲ. ಹೀಗಾಗಿ ಇವರ ಅನುಪಸ್ಥಿತಿಯ ಲಾಭವನ್ನು ಪಡೆಯಲು ಇಶಾನ್ ಕಿಶನ್ ರೆಡಿಯಾಗಿದ್ದಾರೆ.

ಇಶಾನ್ ಯಾವ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಯುತ್ತಾರೆ ಎಂಬುದೇ ಕುತೂಹಲ ಮೂಡಿಸಿದೆ. ಇಶಾನ್ ಕಿಶನ್, ವೆಸ್ಟ್ ಇಂಡೀಸ್ ವಿರುದ್ಧದ ODI ಸರಣಿಯಲ್ಲಿ ಸತತ ಮೂರು ಅರ್ಧಶತಕ ಬಾರಿಸಿ ಭರವಸೆ ಮೂಡಿಸಿದ್ದರು. ಸದ್ಯ ಇಶಾನ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಇವರ ಬ್ಯಾಟಿಂಗ್ ನಿಂದ ಈ ಸಲವೂ ಬಿಗ್ ಇನಿಂಗ್ಸ್ ಹೊರ ಹೊಮ್ಮಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡಲಿದ್ದಾರೆ ಎಂಬ ಪ್ರಶ್ನೆ ಇನ್ನು ಕಗ್ಗಂಟ್ಟಾಗಿ ಉಳಿದಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನಾಲ್ಕನೇ ಕ್ರಮಾಂದಲ್ಲಿ ಬ್ಯಾಟ್ ಮಾಡಲು ಟೀಮ್ ಮ್ಯಾನೇಜ್ಮೆಂಟ್ ಸೂಚಿಸಬಹುದಾ ಎಂಬ ಪ್ರಶ್ನೆಗಳು ಕಾಡುತ್ತಿವೆ. ಭಾರತ ಆಡುವ ಹನ್ನೊಂದರ ಬಳಗದ ಬಗ್ಗೆ ಮಾತನಾಡುವುದಾದರೆ, ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳು ಮತ್ತು ಮೂವರು ವೇಗದ ಬೌಲರ್‌ಗಳು ಇರಬಹುದು.
ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್
ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಮೈದಾನದಲ್ಲಿ ಕಾಣಿಸಿಕೊಳ್ಳಬಹುದು. ಇದೇ ವೇಳೆ ಸ್ಪಿನ್ ವಿಭಾಗದ ಜವಾಬ್ದಾರಿ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಹೆಗಲ ಮೇಲಿದೆ. ಟೀಂ ಇಂಡಿಯಾದಲ್ಲಿ ಹಲವು ಆಟಗಾರರು ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಏಕದಿನ ಪಂದ್ಯವನ್ನು ಆಡಲಿದ್ದಾರೆ.
ಆರಂಭಿಕ ಆಟಗಾರ ಶುಭಮನ್ ಗಿಲ್
ಇದರಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಮತ್ತು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸೇರಿದ್ದಾರೆ. ಇವರೆಲ್ಲ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವುದು ಖಚಿತ. ಆದರೆ, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದರೆ, ಅವರು ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧವೂ ಆಡಲಿದ್ದಾರೆ.
ಪಾಕಿಸ್ತಾನದ ವಿರುದ್ಧ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications