Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಷ್ಯಾಕಪ್: ಮತ್ತೆ ಭಾರತ ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಆತಂಕ: ಪರಿಹಾರ ಕಂಡುಕೊಂಡ ACC

ಏಷ್ಯಾಕಪ್ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಸೆಣೆಸಾಟ ಮಳೆಗೆ ಆಹುತಿಯಾಗಿತ್ತು. ಸೂಪರ್ 4 ಹಂತದಲ್ಲಿ ಮತ್ತೆ ಈ ಎರಡು ತಂಡಗಳು ಮುಂದಿನ ಬಾನುವಾರ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮಳೆಯ ಕಾಟ ತ್ಪಪಿದ್ದಲ್ಲ ಎನ್ನಲಾಗುತ್ತಿದೆ. ಇದಕ್ಕಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪರಿಹಾರವನ್ನು ಕಂಡುಕೊಂಡಿದ್ದು ಮೀಸಲು ದಿನವನ್ನು ನಿಗದಿಪಡಿಸಿದೆ.

ಭಾನುವಾರ ನಡೆಯಲಿರುವ ಭಾರತ ಹಾಗೂ ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಹೀಗಾಗಿ ನಿಗದಿತ ದಿನದಂದು ಪಂದ್ಯ ಮಳೆಗೆ ಆಹುತಿಯಾದರೂ ಮೀಸಲು ದಿನದಂದು ಪಂದ್ಯವನ್ನು ಮುಂದುವರಿಲಿದ್ದು ಫಲಿತಾಂಶ ಕಂಡುಕೊಳ್ಳಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.

Asia cup 2023: reserve day announced for India vs Pakistan super 4 match

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಭಾರತ ಹಾಗೂ ಪಾಕಿಸ್ತಾನದ ವಿರುದ್ಧದ ಭಾರತದ ಸೂಪರ್ -4 ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದ್ದು ಸೆಪ್ಟೆಂಬರ್ 11 ಮೀಸಲು ದಿನವಾಗಿರಲಿದೆ. ಸೆಪ್ಟೆಂಬರ್ 10 ರಂದು ಮಳೆ ಪಂದ್ಯ ನಡೆಯಲು ಅವಕಾಶ ನೀಡದಿದ್ದಲ್ಲಿ ಸೋಮವಾರ ಆಯೋಜಿಸಲಾಗುತ್ತದೆ.

"ಸೆಪ್ಟೆಂಬರ್ 10, 2023ರಂದು ಕೊಲಂಬೊದ ಆರ್. ಪ್ರೇಮದಾಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಸೂಪರ್ 4 ಪಂದ್ಯಕ್ಕಾಗಿ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪ್ರತಿಕೂಲ ವಾತಾವರಣದಿಂದಾಗಿ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಪಂದ್ಯವನ್ನು ಸೆಪ್ಟೆಂಬರ್ 11 2023ರಂದು ಮುಂದುವರಿಸಲಾಗುತ್ತದೆ. ಅಂಥಾ ಸಂದರ್ಭದಲ್ಲಿ ಟಿಕೆಟ್ ಹೊಂದಿದವರು ಅದ್ನು ಜೋಪಾನವಾಗಿಸಿಕೊಳ್ಳಬೇಕು ಮೀಸಲು ದಿನದಂತು ಆ ಟಿಕೆಟ್ ಮಾನ್ಯವಾಗಿರಲಿದೆ" ಎಂದು ಪ್ರಕಟಣೆಯಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾಹಿತಿ ನೀಡಿದೆ.

ಇನ್ನು ಕೊಲಂಬೋದ ಹವಾಮಾನ ವರದಿಗಳ ಪ್ರಕಾರ 10 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ 60%-100 ಶೇಕಡಾವರೆಗೆ ಮಳೆಯ ಸಾಧ್ಯತೆಯಿದೆ. ಇನ್ನು ವಾತಾವರಣದ ಆರ್ದ್ರತಎ ಕೂಡ ಹೆಚ್ಚಾಗಿರುವ ಸಂಭವವಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ವಿರಾಟ್ ಕೊಹ್ಲಿ

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾದಾಬ್ ಖಾನ್, ಅಘಾ ಸಲ್ಮಾನ್, ಫಹೀಮ್ ಅಶ್ರಫ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಹಾರಿಸ್ ರೌಫ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಸೌದ್ ಶಕೀಲ್

Story first published: Friday, September 8, 2023, 17:07 [IST]
Other articles published on Sep 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+