For Quick Alerts
ALLOW NOTIFICATIONS  
For Daily Alerts
 

ಸುದೀರ್ಘ ಕಾಯುವಿಕೆ ಅಂತ್ಯ; 2023ರ ಏಷ್ಯಾ ಕಪ್ ವೇಳಾಪಟ್ಟಿ ಬಿಡುಗಡೆಗೆ ದಿನಾಂಕ ಪ್ರಕಟ

2023ರ ಏಷ್ಯಾ ಕಪ್ ಪಂದ್ಯಾವಳಿಯ ವೇಳಾಪಟ್ಟಿ ಬಿಡುಗಡೆಯ ಕಾಯುವಿಕೆ ಕೊನೆಗೂ ಅಂತ್ಯಗೊಂಡಿದ್ದು, ಒಂದು ತಿಂಗಳ ಸುದೀರ್ಘ ಚರ್ಚೆಯ ನಂತರ ಅಂತಿಮವಾಗಿ ವೇಳಾಪಟ್ಟಿ ಬಿಡುಗಡೆಗೆ ಕಾಲ ಕೂಡಿಬಂದಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಪಿಸಿಬಿ ನಿರ್ವಹಣಾ ಸಮಿತಿಯ ಅಧ್ಯಕ್ಷ ಝಾಕಾ ಅಶ್ರಫ್ ಅವರು ಲಾಹೋರ್‌ನಲ್ಲಿ ಬುಧವಾರ, ಜುಲೈ 19ರಂದು ಎಸಿಸಿ ಏಷ್ಯಾ ಕಪ್ 2023ರ ವೇಳಾಪಟ್ಟಿಯನ್ನು ಅನಾವರಣಗೊಳಿಸಲಿದ್ದಾರೆ. ಈ ಸಮಾರಂಭ ಸಾಯಂಕಾಲ 7:45ಕ್ಕೆ ಪ್ರಾರಂಭವಾಗಲಿದೆ.

ಪಿಸಿಬಿ ಮತ್ತು ಬಿಸಿಸಿಐ ಸೇರಿದಂತೆ ಎಲ್ಲಾ ಸದಸ್ಯ ತಂಡಗಳು ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಾಲ್ಕು ಮತ್ತು ಶ್ರೀಲಂಕಾದಲ್ಲಿ ಒಂಬತ್ತು ಪಂದ್ಯಗಳ ಪಂದ್ಯಾವಳಿಯನ್ನು ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಘೋಷಿಸಿತು.

asia-cup-2023

ಉಭಯ ದೇಶಗಳ ನಡುವಿನ ರಾಜಕೀಯ ಉದ್ವಿಗ್ನ ಸಂಬಂಧದಿಂದಾಗಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ತಿಳಿಸಿದ್ದರಿಂದ ಹೈಬ್ರಿಡ್ ಮಾದರಿಯನ್ನು ಪ್ರಸ್ತಾಪಿಸಲಾಯಿತು.

ಪಿಸಿಬಿಯ ಕ್ರಿಕೆಟ್ ನಿರ್ವಹಣಾ ಸಮಿತಿಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ ಹೈಬ್ರಿಡ್ ಮಾದರಿಯನ್ನು ಭಾರತ ಸೇರಿದಂತೆ ಎಸಿಸಿ ಸದಸ್ಯ ತಂಡಗಳು ಒಪ್ಪಿಕೊಂಡಿವೆ. ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎರಡು ಪಂದ್ಯಗಳು ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುವ ಸಾಧ್ಯತೆ ಇದೆ.

2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಸೇರಿದಂತೆ ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಭಾಗವಹಿಸಲಿವೆ.

2023ರ ಏಷ್ಯಾ ಕಪ್ ಆವೃತ್ತಿಯು ಎರಡು ಗುಂಪುಗಳನ್ನು ಹೊಂದಿರುತ್ತದೆ. ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ 4 ಹಂತಕ್ಕೆ ಅರ್ಹತೆ ಪಡೆಯುತ್ತವೆ. ನಂತರ ಸೂಪರ್ 4 ಹಂತದಿಂದ ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಸೆಣಸಾಡಲಿವೆ.

ಇನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಂಗಳವಾರ, ಜುಲೈ 18ರಂದು ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳ ತವರಿನ ಸರಣಿಯನ್ನು ಜನವರಿ-ಫೆಬ್ರವರಿ 2024ರಿಂದ ಜನವರಿ 2025ಕ್ಕೆ ಮುಂದೂಡಲಾಗಿದೆ.

ಇದೇ ಸಮಯದಲ್ಲಿ ಐದು ಟಿ20 ಪಂದ್ಯಗಳ ಸರಣಿಗಾಗಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ ಎಂದು ಪಿಸಿಬಿ ಮಂಗಳವಾರ ತಿಳಿಸಿದೆ.

"2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಉತ್ತಮ ತಯಾರಿ ಅವಕಾಶಗಳನ್ನು ಒದಗಿಸುವ ತನ್ನ ಕಾರ್ಯತಂತ್ರದ ನಿರ್ಧಾರದ ಭಾಗವಾಗಿ 2023-24ರ ಋತುವಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಪುರುಷರ ತಂಡವು 10 ಹೆಚ್ಚುವರಿ ಟಿ20 ಪಂದ್ಯಗಳನ್ನು ಆಡಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಘೋಷಿಸಿದೆ," ಎಂದು ಪಿಸಿಬಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Story first published: Tuesday, July 18, 2023, 23:01 [IST]
Other articles published on Jul 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+