For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾದೇಶದ ವಿರುದ್ಧ ಟೀಮ್ ಇಂಡಿಯಾ ಫೀಲ್ಡಿಂಗ್‌ಗೆ ಶಾರ್ದೂಲ್ ಅಸಮಾಧಾನ: ಹೇಳಿದ್ದೇನು?

ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಿದೆ. ಈಗಾಗಲೇ ಭಾರತ ಫೈನಲ್‌ಗೆ ಪ್ರವೇಶಿಸಿರುವ ಕಾರಣ ಈ ಪಂದ್ಯದಲ್ಲಿ ಸಾಕಷ್ಟು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ಬೆಂಚ್‌ ಸಾಮರ್ಥ್ಯ ಪರೀಕ್ಷಿಸುವ ಅವಕಾಶ ಪಡೆದುಕೊಂಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಜಸ್ಪ್ರೀತ್ ಬೂಮ್ರಾ ಸೇರಿದಂತೆ ಐವರು ಆಟಗಾರರ ಬದಲಾವಣೆ ಮಾಡಿ ಇಂದು ಕಣಕ್ಕಿಳಿಯಿತು.

ಇನ್ನು ಈ ಸಂದರ್ಭದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ತಂಡ ಟೀಮ್ ಇಂಡಿಯಾ ವಿರುದ್ಧ ಸವಾಲಿನ ಗುರಿಯನ್ನೇ ಪೇರಿಸಿದೆ. ನಿಗದಿತ 50 ಓವರ್‌ಗಳಲ್ಲಿ ಬಾಂಗ್ಲಾದೇಶ 8 ವಿಕೆಟ್ ಕಳೆದುಕೊಂಡು 265 ರನ್‌ಗಳನ್ನು ಕಲೆಹಾಕಿದೆ. ಆದರೆ ಮೊದಲ ಇನ್ನಿಂಗ್ಸ್‌ನ ಮುಕ್ತಾಯದ ಬಳಿಕ ಮಾತನಾಡಿದ ಟೀಮ್ ಇಂಡಿಯಾದ ಬೌಲರ್ ಶಾರ್ದೂಲ್ ಠಾಕೂರ್ ಟೀಮ್ಇಂಡಿಯಾದ ಫೀಲ್ಡಿಂಗ್ ಬಗ್ಗೆ ಅಸಾಧಾನ ಹೊರಹಾಕಿದ್ದಾರೆ.

Asia Cup 2023: Shardul Thakur Disappointed on Indias Fielding against Bangladesh

ಈ ಪಂದ್ಯದಲ್ಲಿ ಶರ್ದೂಲ್ ಠಾಕೂರ್ 10 ಓವರ್‌ಗಳಲ್ಲಿ 65 ರನ್ ನಿಡಿದ್ದು 3 ವಿಕೆಟ್ ಪಡೆದುಕೊಂಡಿದ್ದಾರೆ. "ನನಗೆ ಈ ಪಂದ್ಯದಲ್ಲಿ 10 ಓವರ್‌ಗಳ ಬೌಲಿಂಗ್ ಮಾಡಲು ದೊರೆತಿರುವುದಕ್ಕೆ ಹಾಗೂ 3 ವಿಕೆಟ್‌ ಕಬಳಿಸಿರುವುದಕ್ಕೆ ಖುಷಿಯಾಗಿದೆ. ಇಂದು ಪಿಚ್ ಬಹಳ ನಿಧಾನವಾಗಿತ್ತು. ಅವರು 265 ರನ್‌ಗಳನ್ನು ಗಳಿಸುವ ಮೂಲಕ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ಉತ್ತಮ ಫೀಲ್ಡಿಂಗ್ ಪ್ರದರ್ಶನ ನೀಡಿದ್ದರೆ ಅವರನ್ನು ಇನ್ನಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಬಹುದಾಗಿತ್ತು. 220-230 ರನ್‌ಗಳಿಗೆ ಅವರನ್ನು ನಿಯಂತ್ರಿಸುವ ಅವಕಾಶವಿತ್ತು. ಇದು ಉತ್ತಮವಾದ ಗುರಿ" ಎಂದು ಶಾರ್ದೂಲ್ ಠಾಕೂರ್ ಹೇಳಿಕೆ ನೀಡಿದ್ದಾರೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಬೆಂಚ್ ಸಾಮರ್ಥ್ಯವನ್ನು ಪರೀಕ್ಷಿಸುವ ನಿರೀಕ್ಷೆಯಿತ್ತು. ಈಗಾಗಲೇ ಭಾರತ ಫೈನಲ್‌ಗೆ ಅರ್ಹತೆ ಪಡೆದುಕೊಂಡಿರುವ ಕಾರಣ ಮ್ಯಾನೇಜ್‌ಮೆಂಟ್ ಈ ಯೋಜನೆ ಮಾಡಿದ್ದು ಐದು ಬದಲಾವಣೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಂದಿನ ಆಡುವ ಬಳಗದಿಂದ ಹೊರಗುಳಿದಿರುವ ಆಟಗಾರರಾಗಿದ್ದಾರೆ. ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಹಾಗೂ ಪ್ರಸಿದ್ಧ್ ಕೃಷ್ಣಗೆ ಆಡುವ ಬಳಗದಲ್ಲಿ ಸ್ಥಾನ ದೊರೆತಿದೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ
ಬೆಂಚ್: ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್

ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್ (ವಿಕೆಟ್ ಕೀಪರ್), ತನ್ಜಿದ್ ಹಸನ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್ (ನಾಯಕ), ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಮೊಹಮ್ಮದ್ ನಯಿಮ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ಅಫೀಫ್ ಹೊಸೈನ್

Story first published: Friday, September 15, 2023, 20:18 [IST]
Other articles published on Sep 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+