Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India vs Pakistan: ರಣರೋಚಕ ಮುಖಾಮುಖಿ; ಸೂಪರ್ ಸಂಡೇಯ ಸರದಾರ ಯಾರು?

ಏಷ್ಯಾಕಪ್ ಟೂರ್ನಿಯಲ್ಲಿ ಎರಡನೇ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯ ಮಳೆಗೆ ಆಹುತಿಯಾದ ಬಳಿಕ ಸೂಪರ್ 4 ಹಂತದಲ್ಲಿ ಎರಡನೇ ಬಾರಿಗೆ ಎದುರಾಗುತ್ತಿವೆ ಈ ತಂಡಗಳು. ಎರಡು ತಂಡಗಳು ಕೂಡ ಸಾಕಷ್ಟು ಬಲಿಷ್ಠವಾಗಿರುವ ಕಾರಣ ಈ ಬದ್ಧವೈರಿಗಳ ನಡುವಿನ ಸೆಣೆಸಾಟ ಈಗ ತೀವ್ರ ಕುತೂಹಲ ಕೆರಳಿಸಿದೆ.

ಜಗತ್ತಿನ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಕೂಡ ಈ ಮುಖಾಮುಖಿಯನ್ನು ನೋಡಲು ಕಾತರಿಸುತ್ತಿದ್ದಾರೆ. ಪಾಕಿಸ್ತಾನದ ಬಲಿಷ್ಠ ಬೌಲಿಂಗ್ ವಿಭಾಗದ ವಿರುದ್ಧ ಈ ಬಾರಿ ಭಾರತದ ಬ್ಯಾಟಿಂಗ್ ಹೇಗೆ ಪ್ರತ್ಯುತ್ತರ ನೀಡಲಿದೆ, ಲೀಗ್ ಹಂತದಲ್ಲಿ ಮಾಡಿಕೊಂಡ ಎಡವಟ್ಟನ್ನು ಭಾರತೀಯ ಬ್ಯಾಟರ್‌ಗಳು ಯಾವ ರೀತಿಯಾಗಿ ಸರಿಪಡಿಸಿಕೊಳ್ಳಲಿದ್ದಾರೆ, ಭಾರತದ ಬೌಲರ್‌ಗಳು ಪಾಕ್ ದಾಂಡಿಗರನ್ನು ಕಟ್ಟಿಹಾಕುತ್ತಾರಾ ಎನ್ನುವ ಎಲ್ಲಾ ಪ್ರಶ್ನೆಗಳಿಗೂ ಇಂದು ಉತ್ತರ ದೊರೆಯಬೇಕಿದೆ.

Asia cup 2023, Super 4: India va Pakistan, match preview, probable playing XI and pitch report

ಭಾರತ vs ಪಾಕ್ ಮುಖಾಮುಖಿಯ ಸಮಯ

ಭಾರತ ಹಾಗೂ ಪಾಕಿಸ್ತಾನ ತಂಡಗಳ ಸೂಪರ್ 4 ಹಂತದ ಪಂದ್ಯ ಇಂದು ಸೆಪ್ಟೆಂಬರ್ 10 ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು ಅದಕ್ಕೂ ಮುನ್ನ 2:30 ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್‌ಸ್ಪೋರ್ಟ್ಸ್ ವಾಹಿನಿಯಲ್ಲಿ ಈ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶವಿದೆ. ಅಲ್ಲದೆ ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯ ಲೈವ್ ಸ್ಟ್ರೀಮಿಂಗ್ ಆಗಲಿದ್ದು ಮೊಬೈಲ್ ಬಳಕೆದಾರರು ಉಚಿತವಾಗಿ ಈ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೇಗಿದೆ?

ಶ್ರೀಲಂಕಾದ ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಬ್ಯಾಟಿಂಗ್ ಹಾಗೂ ಬೌಲರ್‌ಗಳ ಮಧ್ಯೆ ಉತ್ತಮ ಸಮತೋಲಿತ ಪಿಚ್ ಇದಾಗಿರಲಿದೆ. ಆರಂಭಿಕ ಹಂತದಲ್ಲಿ ವೇಗಿಗಳಿಗೆ ಇಲ್ಲಿ ಉತ್ತಮವಾದ ನೆರವು ದೊರೆಯುವ ಸಾಧ್ಯತೆಯಿದೆ. ಆದರೆ ಪಂದ್ಯ ಮುಂದುವರಿಯುತ್ತಿದ್ದಂತೆಯೇ ಪಿಚ್ ಸ್ಥಿರತೆಯನ್ನು ಹೊಂದಲಿದೆ. ಇನ್ನು ಬೌಲಿಂಗ್‌ನಲ್ಲಿ ಸ್ಪಿನ್ನರ್‌ಗಳ ಪಾತ್ರ ಕೂಡ ನಿರ್ಣಾಯಕವಾಗಿರುವ ಸಾಧ್ಯತೆಯಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳ ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಪಾಕಿಸ್ತಾನಳ ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್

Story first published: Sunday, September 10, 2023, 8:52 [IST]
Other articles published on Sep 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+