Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia Cup 2023 Super 4: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಭಾನುವಾರ, ಸೆಪ್ಟೆಂಬರ್ 10ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಅವರು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್ 4 ಪಂದ್ಯಕ್ಕೆ ಮಳೆ ಭೀತಿ ಇದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದವು. ಆದರೆ, ಅದೃಷ್ಟವಶಾತ್ ಸದ್ಯ ಆಕಾಶ ಸ್ವಚ್ಛಂದವಾಗಿದ್ದು, ಸೂರ್ಯ ಹೊರಗೆ ಬಂದಿದ್ದಾನೆ.

asia-cup-2023-super-4

ಒಂದು ವೇಳೆ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಇದೇ ಆಟವನ್ನು ಮೀಸಲು ದಿನದಂದು (ಸೆಪ್ಟೆಂಬರ್ 11) ಮುಂದುವರೆಸಲಾಗುವುದು ಎಂದು ಎಸಿಸಿ ತಿಳಿಸಿದೆ. ಈ ಹಿಂದೆ ಎರಡೂ ತಂಡಗಳು ಗುಂಪು ಹಂತದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾಗ, ಮಳೆಯಿಂದ ಪಂದ್ಯ ರದ್ದಾಗಿತ್ತು.

ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಭಾರತದ ಆಡುವ ಬಳಗಕ್ಕೆ ವಾಪಸ್ಸಾಗಿದ್ದಾರೆ. ನೇಪಾಳ ವಿರುದ್ಧ ಆಡಿದ್ದ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ. ಅಭ್ಯಾಸದ ವೇಳೆ ಬೆನ್ನು ಸೆಳೆತಕ್ಕೆ ಒಳಗಾದ ಶ್ರೇಯಸ್ ಅಯ್ಯರ್ ಹೊರಗುಳಿಯಬೇಕಾಯಿತು.

ಇನ್ನು ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬಾಂಗ್ಲಾದೇಶ ವಿರುದ್ಧ ಆಡಿದ್ದ ತಂಡವನ್ನೇ ಮುಂದುವರೆಸಿದೆ. ಒಂದು ದಿನ ಮುಂಚೆಯೇ ತಮ್ಮ ತಂಡವನ್ನು ಪಾಕಿಸ್ತಾನ ಪ್ರಕಟಿಸಿತ್ತು.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಮ್ಮ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ನೇಪಾಳ ತಂಡವನ್ನು ಸೋಲಿಸಿದ ಆತ್ಮವಿಶ್ವಾಸದಲ್ಲಿದ್ದರೆ, ಪಾಕಿಸ್ತಾನವು ತನ್ನ ಹಿಂದಿನ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು.

ಏಷ್ಯಾ ಕಪ್ 2023: ಭಾರತ vs ಪಾಕಿಸ್ತಾನ ತಂಡಗಳ ಆಡುವ 11ರ ಬಳಗ

ಭಾರತ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಾಹೀಮ್ ಅಶ್ರಫ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

Story first published: Sunday, September 10, 2023, 14:37 [IST]
Other articles published on Sep 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+