Asia Cup 2023 Super 4: ಪಾಕಿಸ್ತಾನ vs ಬಾಂಗ್ಲಾದೇಶ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಬುಧವಾರ, ಸೆಪ್ಟೆಂಬರ್ 6ರಂದು ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಹಂತದ ರೋಚಕ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಬಾಂಗ್ಲಾದೇಶ ತಂಡ ತಂಡದ ನಾಯಕ ಶಕಿಬ್ ಅಲ್ ಹಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಪಾಕಿಸ್ತಾನ ತಂಡವು 2023ರ ಏಷ್ಯಾ ಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ ನೇಪಾಳ ವಿರುದ್ಧ 238 ರನ್‌ಗಳ ಗೆಲುವು ಸಾಧಿಸಿದ್ದರೆ, ಭಾರತ ವಿರುದ್ಧದ ಪಂದ್ಯವು ಯಾವುದೇ ಫಲಿತಾಂಶ ಕಾಣದೆ ಮಳೆಯಿಂದ ರದ್ದುಗೊಂಡಿತು.
ಮತ್ತೊಂದೆಡೆ, ಬಾಂಗ್ಲಾದೇಶ ತಂಡವು ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳಿಂದ ಸೋಲು ಕಂಡರೆ, ನಂತರದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 89 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಮುಂಬರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅತ್ಯುತ್ತಮವಾಗಿ ಮುನ್ನಡೆಯಲು ಮತ್ತು ಪೂರ್ವ ತಯಾರಿಯಾಗಿ ಏಷ್ಯಾ ಕಪ್ ಪಂದ್ಯಾವಳಿ ಸಹಾಯಕಾರಿಯಾಗಿದೆ.
ಪಾಕಿಸ್ತಾನ vs ಬಾಂಗ್ಲಾದೇಶ ಟಿವಿ ಮತ್ತು ಲೈವ್ ಸ್ಟ್ರೀಮ್ ವಿವರ
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಡಿಸ್ನಿ+ಹಾಟ್ ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಏಷ್ಯಾ ಕಪ್ 2023 ಸೂಪರ್ 4: ಪಾಕಿಸ್ತಾನ vs ಬಾಂಗ್ಲಾದೇಶ ಆಡುವ 11ರ ಬಳಗ
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.
ಬಾಂಗ್ಲಾದೇಶ: ಮೊಹಮ್ಮದ್ ನಯಿಮ್, ಮೆಹಿದಿ ಹಸನ್ ಮಿರಾಜ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೋಯ್, ಶಮೀಮ್ ಹೊಸೈನ್, ಅಫೀಫ್ ಹೊಸೈನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications