Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್ ಕೊಹ್ಲಿ ಆಟದ ಬಗ್ಗೆ ತೆಲುಗು ಸ್ಟಾರ್ ನಟ ವಿಜಯ್ ದೇವರಕೊಂಡ ಹೇಳಿದ್ದೇನು?

ಬುಧವಾರ, ಆಗಸ್ಟ್ 30ರಂದು ಮುಲ್ತಾನ್‌ನಲ್ಲಿ ನಡೆಯಲಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ಪ್ರವಾಸಿ ನೇಪಾಳ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ಏಷ್ಯಾ ಕಪ್ 2023ರ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಶನಿವಾರ, ಸೆಪ್ಟೆಂಬರ್ 2ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಕೇವಲ ಭಾರತ ಮತ್ತು ಪಾಕಿಸ್ತಾನ ಅಭಿಮಾನಿಗಳಲ್ಲದೆ, ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಪ್ರಮುಖ ಪಂದ್ಯಕ್ಕಾಗಿ ಕಾತರರಾಗಿದ್ದಾರೆ.

asia-cup-2023

ಇದೇ ವೇಳೆ ಯಶಸ್ವಿ ತೆಲುಗು ಚಲನಚಿತ್ರ ಸ್ಟಾರ್ ನಟ ವಿಜಯ್ ದೇವರಕೊಂಡ ಅವರು ಕ್ರಿಕೆಟ್‌ ಬಗ್ಗೆ ತಮ್ಮ ಆಳವಾದ ಪ್ರೀತಿಯನ್ನು ವ್ಯಕ್ತಪಡಿಸಿದರು. ಅಳಿಸಲಾಗದ ಬಾಲ್ಯದ ನೆನಪುಗಳು ಮತ್ತು ಅನುಭವಗಳನ್ನು ವಿವರಿಸಿದರು.

ಏಷ್ಯಾ ಕಪ್‌ನಲ್ಲಿ ಐತಿಹಾಸಿಕ ಕ್ಷಣಗಳನ್ನು ವೀಕ್ಷಿಸುವ ಉತ್ಸಾಹದಿಂದ ತಮ್ಮ ವೈಯಕ್ತಿಕ ನೆಚ್ಚಿನ ಆಟಗಾರರನ್ನು ಹುರಿದುಂಬಿಸಿದರು ಮತ್ತು ಇದು ಕೋಟ್ಯಂತರ ದೇಶವಾಸಿಗಳನ್ನು ಒಂದುಗೂಡಿಸುವ ಕ್ರೀಡೆಯ ಬಗ್ಗೆ ಅವರ ಅಚಲವಾದ ಉತ್ಸಾಹದ ಒಂದು ನೋಟವನ್ನು ನೀಡುತ್ತದೆ.

2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದ ದಿನ ಹತ್ತಿರ ಬರುತ್ತಿದ್ದಂತೆ, ತೆಲುಗು ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಅವರು ಇದೇ ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿರುವ ಅವರ ಮುಂಬರುವ ಚಲನಚಿತ್ರ "ಕುಶಿ' ಪ್ರಚಾರದ ವೇಳೆ ಸ್ಟಾರ್ ಸ್ಪೋರ್ಟ್ಸ್ ತೆಲುಗಿನಲ್ಲಿ ಐತಿಹಾಸಿಕ ಪಂದ್ಯದ ಬಗ್ಗೆ ಮಾತನಾಡಿದರು.



ತೆಲುಗು ನಟ ವಿಜಯ್ ದೇವರಕೊಂಡ ಅವರ ಮೆಚ್ಚುಗೆಯ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಇತರ ಕೆಲವು ಆಟಗಾರರೂ ಇದ್ದಾರೆ. ತಿಲಕ್ ವರ್ಮಾ ಅವರನ್ನು ಭಾರತ ತಂಡದಲ್ಲಿ ಸೇರಿಸಿಕೊಂಡಿರುವುದರ ಬಗ್ಗೆ ತಮ್ಮ ಸಂತೋಷ ವ್ಯಕ್ತಪಡಿಸಿದರು ಮತ್ತು ಉದಯೋನ್ಮುಖ ಪ್ರತಿಭೆಯ ಆಟದ ಬಗ್ಗೆ ಮೆಚ್ಚುಗೆ ಹೊರಹಾಕಿದರು.

"ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಆಟವನ್ನು ನೋಡುವುದೇ ಶುದ್ಧ ಮೋಜಿನಿಂದ ಕೂಡಿರುತ್ತದೆ. ನಂತರ ರೋಹಿತ್ ಶರ್ಮಾ ಅವರು ಪ್ರಯಾಸವಿಲ್ಲದ ಕ್ರಿಕೆಟ್ ಆಡುತ್ತಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ದಿನದಂದು ಅವರನ್ನು ನಿಯಂತ್ರಿಸುವುದು ಕಷ್ಟ ಮತ್ತು ಹಾರ್ದಿಕ್ ಪಾಂಡ್ಯ ಅವರು ಶಾಟ್ ಆಡುವಾಗ ಧ್ವನಿ ಅದ್ಭುತವಾಗಿರುತ್ತದೆ," ಎಂದು ವಿಜಯ್ ದೇವರಕೊಂಡ ಹೇಳಿದರು.

"ಈ ದಿನಗಳಲ್ಲಿ ನಾನು ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ಬೌಲರ್‌ಗಳನ್ನು ಎದುರು ನೋಡುತ್ತಿದ್ದೇನೆ. ಭಾರತ ತಂಡದಲ್ಲಿ ಯುವ ಆಟಗಾರ ತಿಲಕ್ ವರ್ಮಾ ಸ್ಥಾನ ಪಡೆದಿರುವುದು ಸಂತಸ ತಂದಿದೆ," ಎಂದು ನಟ ವಿಜಯ್ ದೇವರಕೊಂಡ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದರು.

asia-cup-2023

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಿಕಟ ಪೈಪೋಟಿಯನ್ನು ನೇರವಾಗಿ ವೀಕ್ಷಿಸಿದ ಅನುಭವವನ್ನು ನಟ ವಿಜಯ್ ದೇವರಕೊಂಡ ನೆನಪಿಸಿಕೊಂಡರು.

2023ರ ಏಷ್ಯಾ ಕಪ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Story first published: Wednesday, August 30, 2023, 16:46 [IST]
Other articles published on Aug 30, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+