Asia Cup 2023: ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಕರುಣೆ ಇಲ್ಲದೆ ಆಡಲಿದ್ದಾರೆ; ಮೊಹಮ್ಮದ್ ಕೈಫ್
ಆಗಸ್ಟ್ 30ರಂದು ಪಾಕಿಸ್ತಾನ ಮತ್ತು ನೇಪಾಳ ಪಂದ್ಯದ ಮೂಲಕ 2023ರ ಏಷ್ಯಾ ಕಪ್ ಪಂದ್ಯಾವಳಿಗೆ ಚಾಲನೆ ಸಿಕ್ಕಿದ್ದು, ಮೊದಲ ಪಂದ್ಯದಲ್ಲಿ ಬಾಬರ್ ಅಜಂ ನಾಯಕತ್ವದ ತಂಡ ದಾಖಲೆಯ ಗೆಲುವು ಸಾಧಿಸಿತು.
ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ಶನಿವಾರ, ಸೆಪ್ಟೆಂಬರ್ 2ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ.

ಇದೇ ವೇಳೆ ಭಾರತದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಪಾಕಿಸ್ತಾನದ ವಿರುದ್ಧ ಅತ್ಯಂತ ಅಪಾಯಕಾರಿಯಾಗಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ.
ಏಷ್ಯಾ ಕಪ್ ನಂತರ ನಡೆಯುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮತ್ತೆ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.
ಕಳೆದ ವರ್ಷ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಂಸಿಜಿ) ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದಾಗ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಂಡದ ಗೆಲುವಿಗೆ ಕಾರಣರಾದರು.

ಪಾಕಿಸ್ತಾನ ನೀಡಿದ್ದ 160 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ ತಂಡದ ಪರ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿದರು. ಭಾರತ ತಂಡ ಕೊನೆಯ ಎಸೆತದಲ್ಲಿ ರೋಚಕವಾಗಿ ನಾಲ್ಕು ವಿಕೆಟ್‌ಗಳಿಂದ ಜಯಭೇರಿ ಬಾರಿಸಿತು.
2023ರ ಏಷ್ಯಾ ಕಪ್‌ನಲ್ಲಿ ಮತ್ತೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಣರೋಚಕ ಪಂದ್ಯದ ಬಗ್ಗೆ ಚರ್ಚಿಸುವಾಗ, 34 ವರ್ಷದ ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ ಆಡುವಾಗ ಕರುಣೆ ಇಲ್ಲದೆ ಆಡುತ್ತಾರೆ ಎಂದು ಮೊಹಮ್ಮದ್ ಕೈಫ್ ಸ್ಟಾರ್ ಸ್ಪೋರ್ಟ್ಸ್‌ಗೆ ಹೇಳಿದರು.
"ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಅದ್ಭುತವಾಗಿ ಆಡಿದರು. ಪಾಕಿಸ್ತಾನ ವಿರುದ್ಧ ಆಡುವಾಗ ಆತ ಅಪಾಯಕಾರಿಯಾಗುತ್ತಾನೆ ಮತ್ತು ಚೇಸ್ ಮಾಸ್ಟರ್ ಕೊಹ್ಲಿ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾನೆ," ಎಂದು ಮೊಹಮ್ಮದ್ ಕೈಫ್ ತಿಳಿಸಿದರು.
"2022ರ ಏಷ್ಯಾ ಕಪ್‌ನಲ್ಲಿ ಹೊಂದಿದ್ದ ಫಾರ್ಮ್‌ನಿಂದಾಗಿ ಅಫ್ಘಾನಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಶತಕ ಬಾರಿಸಿದರು. ನಂತರ, ಅದೇ ಫಾರ್ಮ್ ಅನ್ನು ಪಾಕಿಸ್ತಾನ ವಿರುದ್ಧವೂ ಮುಂದುವರೆಸಿದರು," ಎಂದರು.
ಕಳೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನದ ಸಾಕಷ್ಟು ಬೌಲರ್‌ಗಳನ್ನು ಎದುರಿಸಿರುವುದರಿಂದ, ಏನನ್ನು ನಿರೀಕ್ಷಿಸಬಹುದು ಎಂಬುದರ ಬಗ್ಗೆ ಅವರಿಗೆ ಉತ್ತಮ ಕಲ್ಪನೆ ಇರುತ್ತದೆ ಎಂದು 42 ವರ್ಷದ ಮೊಹಮ್ಮದ್ ಕೈಫ್ ತಿಳಿಸಿದರು.
"ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್‌ಗಳನ್ನು ಎದುರಿಸಿದ್ದಾರೆ. ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ ಅಥವಾ ಹ್ಯಾರಿಸ್ ರೌಫ್ ಆಗಿರಲಿ, ಪ್ರತಿಯೊಬ್ಬ ಪಾಕಿಸ್ತಾನಿ ಬೌಲರ್ ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬುದು ತಿಳಿದಿದೆ," ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ವಿವರಿಸಿದರು.
2022ರ ಟಿ20 ವಿಶ್ವಕಪ್‌ಗೆ ಮೊದಲು, ಯುಎಇಯಲ್ಲಿ ನಡೆದ 2021ರ ಟಿ20 ವಿಶ್ವಕಪ್ ಆವೃತ್ತಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತ ವಿರುದ್ಧ 10 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.
ಎಂಸಿಜಿಯಲ್ಲಿ ಗೆಲುವಿನ ಮಹಾಕಾವ್ಯ ಬರೆದ ವಿರಾಟ್ ಕೊಹ್ಲಿ
ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 160 ರನ್ ಬೆನ್ನತ್ತಿದ್ದ ಭಾರತ ತಂಡ 31 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು. ಕೆಎಲ್ ರಾಹುಲ್ (4), ರೋಹಿತ್ ಶರ್ಮಾ (4), ಸೂರ್ಯಕುಮಾರ್ ಯಾದವ್ (15) ಮತ್ತು ಅಕ್ಷರ್ ಪಟೇಲ್ (2) ಕಳಪೆ ರನ್‌ಗಳಿಗೆ ಔಟಾದರು.
ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಐದನೇ ವಿಕೆಟ್‌ಗೆ 113 ರನ್‌ಗಳ ಜೊತೆಯಾಟದಲ್ಲಿ ತಮ್ಮ ತಂಡವನ್ನು ಮೇಲಕ್ಕೆತ್ತಿದರು. ವಿರಾಟ್ ಕೊಹ್ಲಿ ಕೊನೆಯ ಓವರ್‌ಗಳಲ್ಲಿ ಸಂಪೂರ್ಣವಾಗಿ ತಿರುಗಿ ಬಿದ್ದರು ಮತ್ತು ಅವರ ಅದ್ಭುತ ಇನ್ನಿಂಗ್ಸ್‌ನಲ್ಲಿ 6 ಬೌಂಡರಿಗಳು ಮತ್ತು 4 ಸಿಕ್ಸರ್ ಒಳಗೊಂಡಿದ್ದವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications