IND vs UAE Asia Cup T20: ಭಾರತದ ಬಿಗುವಿನ ದಾಳಿಗೆ ಯುಎಇ ಕಂಗಾಲು
ದುಬೈ: ಸ್ಟಾರ್ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ (7ಕ್ಕೆ 4) ಹಾಗೂ ಆಲ್‌ರೌಂಡರ್ ಶಿವಂ ದುಬೆ (4ಕ್ಕೆ 3) ಇವರುಗಳ ಶಿಸ್ತು ಬದ್ಧ ದಾಳಿಯ ನೆರವಿನಿಂದ ಟೀಮ್ ಇಂಡಿಯಾ ಏಷ್ಯಾ ಕಪ್ ಟಿ20 ಟೂರ್ನಿಯ "ಎ" ಗುಂಪಿನ ಪಂದ್ಯದಲ್ಲಿ 57 ರನ್‌ಗಳಿಗೆ ಯುಎಇ ತಂಡವನ್ನು ಕಟ್ಟಿ ಹಾಕಿದೆ.
ಏಷ್ಯಾ ಕಪ್ ಟಿ20 ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ತನ್ನದಾಗಿಸಿಕೊಂಡಿತು. ಈ ಪಂದ್ಯದಲ್ಲಿ ಯುಎಇ ಮೊದಲು ಬ್ಯಾಟ್ ಮಾಡಿತು. ಈ ವೇಳೆ ಆರಂಭಿಕರು ಸಾಧಾರಣ ಜೊತೆಯಾಟದ ಕಾಣಿಕೆ ನೀಡಿತು. ಯುಎಇ ತಂಡದ ಪರ ಅಲಿಶಾನ್ ಶರಾಫ್ ಹಾಗೂ ಮೊಹಮ್ಮದ್ ವಾಸೀಮ್ ಜೋಡಿ 3.4 ಓವರ್‌ಗಳಲ್ಲಿ 26 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾದರು. ಆರಂಭಿಕ ಆಲಿಶಾನ್ 17 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 22 ರನ್ ಬಾರಿಸಿ, ಜಸ್ಪ್ರೀತ್ ಬುಮ್ರಾ ತೋಡಿದ ಖೆಡ್ಡಾಗೆ ಬಲಿಯಾದರು.

ಮುಹಮ್ಮದ್ ಜೊಹೈಬ್, ರಾಹುಲ್ ಚೋಪ್ರಾ, ಹರ್ಷಿತ್ ಕೌಶಿಕ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಈ ಆಟಗಾರರು ಭಾರತದ ಸ್ಪಿನ್ ಬೌಲಿಂಗ್ ಎದುರಿಸುವಲ್ಲಿ ವಿಫಲವಾಯಿತು. ಆಸೀಫ್ ಖಾನ್ ಶಿವಂ ದುಬೆ ಅವರ ಎಸೆತದಲ್ಲಿ ಥರ್ಡ್ ಮೆನ್‌ಗೆ ಚೆಂಡನ್ನು ಅಟ್ಟುವಲ್ಲಿ ಹೋದಾಗ, ಸಂಜು ಸ್ಯಾಮ್ಸನ್ ಉತ್ತಮ ಡೈವಿಂಗ್ ಕ್ಯಾಚ್ ಪಡೆದರು.ಅಂತಿಮವಾಗಿ ಯುಎಇ 13.1 ಓವರ್‌ಗಳಲ್ಲಿ 57 ರನ್‌ಗಳಿಗೆ ಆಲೌಟ್ ಆಯಿತು. ಟಿ20 ಕ್ರಿಕೆಟ್‌ನಲ್ಲಿ ಯುಎಇ ಕಲೆ ಹಾಕಿದ ಕನಿಷ್ಠ ಮೊತ್ತ ಇದಾಗಿದೆ.
10 ರನ್‌ಗೆ 8 ವಿಕೆಟ್
ಒಂದು ಹಂತದಲ್ಲಿ ಯುಎಇ 47 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಇಲ್ಲಿಂದ ಟೀಮ್ ಇಂಡಿಯಾದ ಬೌಲರ್‌ಗಳ ಶಿಸ್ತು ಬದ್ಧ ದಾಳಿಯನ್ನು ಎದುರಿಸುವಲ್ಲಿ ಯುಎಇ ಬ್ಯಾಟರ್‌ಗಳು ವಿಫಲರಾದರು. ಟೀಮ್ ಇಂಡಿಯಾದ ಪರ ಕುಲ್‌ದೀಪ್ ಯಾದವ್ 2.1 ಓವರ್‌ಗಳಲ್ಲಿ 7 ರನ್ ನೀಡಿ 4 ವಿಕೆಟ್ ಪಡೆದರು. ಇನ್ನು ಆಲ್‌ರೌಂಡರ್ ಶಿವಂ ದುಬೆ 4 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್‌ಗೆ ಅವಕಾಶ
ದೇಶೀಯ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್ ಅವರಿಗೆ ಟೀಮ್ ಮ್ಯಾನೇಜ್ಮೆಂಟ್ ಮಣೆ ಹಾಕಿದೆ. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications