For Quick Alerts
ALLOW NOTIFICATIONS  
For Daily Alerts
 

ಇದು ಭಾರತದ ವಿರುದ್ಧದ ಪಂದ್ಯಕ್ಕೆ ಸಿದ್ಧತೆ: ಟೀಮ್ ಇಂಡಿಯಾಗೆ ಬಾಬರ್ ಅಜಂ ನೇರ ಎಚ್ಚರಿಕೆ!

ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನ ಅದ್ಭುತ ಪ್ರದರ್ಶನ ನೀಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಪಾಕಿಸ್ತಾನ ತಂಡ ಅಮೋಘ ಪ್ರದರ್ಶಣ ನೀಡಿದ್ದು ಪ್ರತಿಷ್ಠಿತ ಟೂರ್ನಿಯನ್ನು ಭರ್ಜರಿಯಾಗಿ ಆರಂಭಿಸಿದೆ. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಬ್ಯಾಟಿಂಗ್‌ನಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.

ಇನ್ನು ಭರ್ಜರಿ ಶತಕದೊಂದಿಗೆ ಗೆಲುವು ಸಾಧಿಸಿದ ಬಳಿಕ ಪಾಕಿಸ್ತಾನ ತಮಡದ ನಾಯಕ ಬಾಬರ್ ಅಜಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಪಂದ್ಯದಲ್ಲಿ ನಡೆಸಿದ ಬ್ಯಾಟಿಂಗ್ ಪ್ರದರ್ಶನಮುಂದಿನ ಭಾರತದ ವಿರುದ್ಧದ ಪಂದ್ಯಕ್ಕೆ ಉತ್ತಮವಾದ ಸಿದ್ಧತೆಯಾಗಿದೆ ಎಂದು ಆತ್ಮವಿಶ್ವಾಸದಿಂದ ಹೇಳಿಕೆ ನೀಡುವ ಮೂಲಕ ಭಾರತ ತಂಡಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Asia cup: Babar Azam sends Warning to Team India after match winning knock against Nepal

ಬಾಬರ್ ಅಜಂ 151 ರನ್‌ಗಳ ಭರ್ಜರಿ ಬ್ಯಾಟಿಂಗ್ ಹಾಗೂ ಇಫ್ತಿಕಾರ್ ಅಹ್ಮದ್ ಅವರ ಅಜೇಯ 109 ರನ್‌ಗಳ ಕೊಡುಗೆಯ ಕಾರಣದಿಂದಾಗಿ ಪಾಕಿಸ್ತಾನ ಈ ಪಂದ್ಯದಲ್ಲಿ ಭರ್ಜರಿ 342 ರನ್‌ಗಳನ್ನು ಕಲೆಹಾಕಿತ್ತು. ಇದನ್ನು ಬೆನ್ನಟ್ಟಿದ ನೇಪಾಳ ಈ ಪಂದ್ಯದಲ್ಲಿ ಕೇವಲ 104 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಪಾಕಿಸ್ತಾನ ತಂಡ ಏಷ್ಯಾಕಪ್ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಗೆಲುವು ಸಾಧಿಸಿದೆ.

ಈ ಪಂದ್ಯದ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಸಂತಸ ವ್ಯಕ್ತಪಡಿಸಿದ್ದಾರೆ. "ಕೆಲ ಓವರ್‌ಗಳಲ್ಲಿ ನಾವು ಉತ್ತಮವಾಗಿರಲಿಲ್ಲ. ವೇಗಿಗಳು ಉತ್ತಮವಾದ ಆರಂಭವನ್ನು ನೀಡಿದರು. ಸ್ಪಿನ್ನರ್‌ಗಳಿಂದಲೂ ಅದ್ಭುತ ಹೋರಾಟ ಬಂದಿದೆ. ಇದು ಭಾರತದ ವಿರುದ್ಧದ ಪಂದ್ಯಕ್ಕೆ ನಮಗೆ ಅದ್ಭುತವಾದ ಸಿದ್ಧತೆಯಾಗಿದೆ. ಯಾಕೆಂದರೆ ಈ ಪಂದ್ಯದಲ್ಲಿ ನಮಗೆ ಸಾಖಷ್ಟು ಆತ್ಮವಿಶ್ವಾಸ ದೊರೆತಿದೆ" ಎಂದಿದ್ದಾರೆ ಬಾಬರ್ ಅಜಂ.

ಪಾಕಿಸ್ತಾನ ನೀಡಿದ 343 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ ತಂಡ ಯಾವ ಹಂತದಲ್ಲಿಯೂ ಪಾಕಿಸ್ತಾನ ತಂಡಕ್ಕೆ ಸವಾಲಾಗಲೇ ಇಲ್ಲ. ಮಧ್ಯಮ ಕ್ರಮಾಂಕದಲ್ಲಿ ಮೂವರು ಆಟಗಾರರು ಮಾತ್ರವೇ ಎರಡಂಕಿ ತಲುಪುವಲ್ಲಿ ಯಶಸ್ವಿಯಾಗಿದ್ದರು. ಉಳಿದಂತೆ ಎಲ್ಲಾ ಆಟಗಾರರು ಕೂಡ ಒಂದಂಕಿಗೆ ವಿಕೆಟ್ ಕಳೆದುಕೊಂಡಿದ್ದಾರೆ. ಶದಬ್ ಖಾನ್ 4 ವಿಕೆಟ್ ಕಬಳಿಸಿದರೆ ವೇಗಿಗಳಾದ ಶಹೀನ್ ಶಾ ಹಾಗೂ ಹ್ಯಾರಿಸ್ ರೌಫ್ ತಲಾ ಎರಡು ವಿಕೆಟ್ ಕಬಳಿಸಿದರು. ನಸೀಮ್ ಶಾ ಹಾಗೂ ಮೊಹಮ್ಮದ್ ನವಾಜ್ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಆರಂಭದಲ್ಲಿ ಎರಡು ವಿಕೆಟ್‌ಗಳನ್ನು ಕಳದುಕೊಂಡು ಹಿನ್ನಡೆ ಅನುಭವಿಸಿತ್ತು. ಫಕಾರ್ ಜಮಾನ್ ಹಾಗೂ ಇಮಾಮ್ ಉಲ್ ಹಕ್ ತಂಡದ ಮೊತ್ತ 25 ರನ್‌ಗಳಾಗುವಷ್ಟರಲ್ಲಿಯೇ ವಿಕೆಟ್ ಕಳೆದುಕೊಂಡಿದ್ದರು. ಆದರೆ ನಂತರ ಬಂದ ನಾಯಕ ಬಾಬರ್ ಅಜಂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಿಜ್ವಾನ್ ಅವರಿಗೆ ಸಾಥ್ ನೀಡಿದ್ದು ನಂತರ ಇಫ್ತಿಕಾರ್ ಅಹ್ಮದ್ ಕೂಡ ಸ್ಮರಣೀಯ ಇನ್ನಿಂಗ್ಸ್ ಕಟ್ಟಿದರು.

ನೇಪಾಳ (ಪ್ಲೇಯಿಂಗ್ XI): ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಆರಿಫ್ ಶೇಖ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಗುಲ್ಸನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಮಿಚಾನೆ, ಲಲಿತ್ ರಾಜಬನ್ಶಿ

ಪಾಕಿಸ್ತಾನ (ಪ್ಲೇಯಿಂಗ್ XI): ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ಸಿ), ಮೊಹಮ್ಮದ್ ರಿಜ್ವಾನ್(ಡಬ್ಲ್ಯೂ), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್

Story first published: Wednesday, August 30, 2023, 23:30 [IST]
Other articles published on Aug 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+