For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ 2023: ಶ್ರೀಲಂಕಾ ಭರ್ಜರಿ ಶುಭಾರಂಭ; ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಭಾರೀ ಸೋಲು

ಏಷ್ಯಾಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ಸಾಧಿಸಿದೆ. ಇತ್ತ ಬಾಂಗ್ಲಾದೇಶ ಆರಂಭಿಕ ಪಂದ್ಯದಲ್ಲೇ ಸೋಲು ಅನುಭವಿಸುವ ಮೂಲಕ ಆಘಾತ ಅನುಭವಿಸಿದೆ.

ಬಾಂಗ್ಲಾದೇಶ ನೀಡಿದ್ದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ ಶ್ರೀಲಂಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿತ್ತು. 15 ರನ್‌ಗಳಾಗುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ ಲಂಕಾ 43 ರನ್‌ಗಳಾಗಿದ್ದಾಗ 3ನೇ ವಿಕೆಟ್ ಕಳೆದುಕೊಂಡಿತ್ತು. ಹೀಗಾಗಿ ಬಾಂಗ್ಲಾ ಪಡೆ ಬೌಲಿಂಗ್‌ನಲ್ಲಿ ತಿರುಗಿಬೀಳುವ ಸೂಚನೆ ನೀಡಿತ್ತು. ಆದರೆ ಲಂಕಾ ತಂಡಕ್ಕೆ ಈ ಸಂದರ್ಭದಲ್ಲಿ ಆಸರೆಯಾಗಿದ್ದು ಸದೀರ ಸಮತವಿಕ್ರಮ ಹಾಗೂ ಚರಿತ ಅಸಲಂಕಾ.

Asia cup: Ban vs SL: Sri Lanka won match by 5 wickets against Bangladesh

ಈ ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕವನ್ನು ಗಳಿಸಿ ಮಿಂಚಿದರು. ಸಮರವಿಕ್ರಮ 54 ರನ್‌ಗಳಿಸಿದರೆ ಚರಿತ ಅಸಲಂಕಾ 62 ರನ್‌ಗಳನ್ನು ಗಳಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡ ಇನ್ನೂ 11 ಓವರ್‌ಗಳು ಬಾಕಿಯಿರುವಂತೆಯೇ 5 ವಿಕೆಟ್‌ಗಳ ಅಂತರದಿಂದ ಗೆದ್ದುಬೀಗಿದೆ.

ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ನಾಯಕ ಶಕೀಬ್ ಅಲ್ ಹಸನ್ ನಿರ್ಧಾರವನ್ನು ಸಮರ್ಥನೆ ಮಾಡಿಕೊಳ್ಳುವಂತೆ ಪ್ರದರ್ಶನ ನೀಡಲು ವಿಫಲವಾಯಿತು. ನಜ್ಮುಲ್ ಹುಸೇನ್ ಶಂಟೋ ಮಾತ್ರವೇ ಲಂಕಾ ದಾಳಿಗೆ ಪ್ರತ್ಯುತ್ತರ ನೀಡಲು ಸಮರ್ಥವಾಗಿದ್ದರು.

ಆರಂಭದಿಂದಲೇ ಹಿನ್ನಡೆ ಅನುಭವಿಸಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್‌ನಲ್ಲಿ ಹಿನ್ನಡೆ ಕಂಡಿತ್ತು. ಆದರೆ ಮೂರನೇ ಕ್ರಮಾಂಕದ ಆಟಗಾರ ನಜ್ಮುಲ್ ಹುಸೇನ್ ಶಂಟೋ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದರು. ಉಳಿದಂತೆ ಯಾವ ಬ್ಯಾಟರ್ ಕೂಡ ಉತ್ತಮ ಪ್ರದರ್ಶನ ನೀಡಲು ಸಫಲವಾಗಲಿಲ್ಲ. 122 ಎಸೆತಗಳನ್ನು ಎದುರಿಸಿದ ಶಂಟೋ 89 ರನ್‌ಗಳನ್ನು ಗಳಿಸಿದರು. ಹೀಗಾಗಿ 164 ರನ್‌ಗಳಿಸಿ ಬಾಂಗ್ಲಾದೇಶ ಆಲೌಟ್ ಆಯಿತು.

ಶ್ರೀಲಂಕಾ ತಂಡದ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ್ದು ಮತೀಶ ಪತಿರಣ. ಬಾಂಗ್ಲಾ ಪಡೆಗೆ ನಾಲ್ಕು ವಿಕೆಟ್ ಕಬಳಿಸಿ ಆಘಾತ ನೀಡಿದ್ದರು. ಉಳಿದಂತೆ ಮತೀಶ ಪತಿರಣ ಎರಡು ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಬಾಂಗ್ಲಾದೇಶ ತಂಡವನ್ನು 42.2 ಓವರ್‌ಗಳಲ್ಲಿ ಕಟ್ಟಿಹಾಕಲು ಶ್ರೀಲಂಕಾ ಯಶಸ್ವಿಯಾಗಿದೆ.

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

ಬೆಂಚ್: ಹಸನ್ ಮಹಮೂದ್, ಅಫೀಫ್ ಹೊಸೈನ್, ಅನಾಮುಲ್ ಹಕ್, ನಸುಮ್ ಅಹ್ಮದ್, ಶಮೀಮ್ ಹೊಸೈನ್, ತಂಝಿಮ್ ಹಸನ್ ಸಾಕಿಬ್

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ
ಬೆಂಚ್: ದುಶನ್ ಹೇಮಂತ, ಕುಸಲ್ ಪೆರೇರಾ, ಪ್ರಮೋದ್ ಮದುಶನ್, ಬಿನೂರ ಫೆರ್ನಾಂಡೋ

Story first published: Thursday, August 31, 2023, 22:10 [IST]
Other articles published on Aug 31, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+