Ind vs SL Final: ಶ್ರೀಲಂಕಾ ಬ್ಯಾಟಿಂಗ್ ದಹನ ಮಾಡಿದ ಸಿರಾಜ್: ಭಾರತ ಚಾಂಪಿಯನ್ ಪಟ್ಟಕ್ಕೇರಲು ಕೇವಲ 51 ರನ್ ಗುರಿ
ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ಅಕ್ಷರಶಃ ಅಬ್ಬರಿಸಿದೆ. ಅದರಲ್ಲೂ ವೇಗಿ ಮೊಹಮ್ಮದ್ ಸಿರಾಜ್ ಶ್ರೀಲಂಕಾ ತಂಡಕ್ಕೆ ಆರಂಭದಲ್ಲಿಯೇ ಆಘಾತದ ಮೇಲೆ ಆಘಾತ ನೀಡುವ ಮೂಲಕ ದಾಖಲೆಯ ಬೌಲಿಂಗ್ ಪ್ರದರ್ಶಿಸಿದ್ದಾರೆ. ಸಿರಾಜ್ ದಾಳಿಗೆ ತತ್ತರಿಸಿರುವ ಶ್ರೀಲಂಕಾ ಕೇವಲ 50 ರನ್‌ಗಳನ್ನು ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು ಭಾರತಕ್ಕೆ ಅತ್ಯಂತ ಸುಲಭ ಸವಾಲು ನೀಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿತು. ಆರಂಭಿಕ ಓವರ್‌ನಲ್ಲಿಯೇ ಅನುಭವಿ ಜಸ್ಪ್ರೀತ್ ಬೂಮ್ರಾ ಎರಡನೇ ಎಸೆತದಲ್ಲಿಯೇ ವಿಕೆಟ್ ಪಡೆಯುವ ಮೂಲಕ ಶ್ರೀಲಂಕಾ ತಂಡಕ್ಕೆ ಆಘಾತ ನೀಡಿದ್ದರು. ಈ ಮೂಲಕ ಲಂಕಾ ತಂಡಕ್ಕೆ ಆರಂಭದಲ್ಲಿಯೇ ಒತ್ತಡವುಂಟಾಯಿತು. ಆದರೆ ಇನ್ನಿಂಗ್ಸ್‌ನ ನಾಲ್ಕನೇ ಓವರ್ ಎಸೆಯಲು ಬಂದ ಸಿರಾಜ್ ಅಬ್ಬರಿಸಿ ಲಂಕಾಗೆ ಆಘಾತ ನೀಡಿದರು.

4ನೇ ಓವರ್; W 0 W W 4 W
ಇನ್ನಿಂಗ್ಸ್‌ನ ನಾಲ್ಕನೇ ಓವರ್ ಎಸೆಯಲು ಬಂದ ಸಿರಾಜ್ ಮೊದಲ ಎಸೆತದಲ್ಲಿಯೇ ಫಾತುಮ್ ನಿಸ್ಸಾಂಕ ಜಡೇಜಾ ಪಡೆದ ಅದ್ಭುತ ಕ್ಯಾಚ್‌ಗೆ ಬಲಿಯಾಗಿ ಫೆವಿಲಿಯನ್‌ಗೆ ತೆರಳಿದರು. ಓವರ್ನ ಎರಡನೇ ಎಸೆತದಲ್ಲಿ ಯಾವುದೇ ರನ್ ಹರಿದುಬಾರಲಿಲ್ಲ. ಮೂರನೇ ಎಸೆತದಲ್ಲಿ ಸದೀರ ಸಮತವಿಕ್ರಮ ಎಲ್‌ಬಿಡಬ್ಲ್ಯು ಆಗಿ ವಿಕೆಟ್ ಕಳೆದುಕೊಂಡರು. ನಂತರದ ಎಸೆತದಲ್ಲಿ ಚರಿತ ಅಸಲಂಕಾ ಇಶಾನ್ ಕಿಶನ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರದ ಎಸೆತ ಎದುರಿಸಿದ ಧನಂಜಯ ಡಿಸಿಲ್ವ ಬೌಂಡರಿ ಬಾರಿಸಿದರು. ಆದರೆ ಓವರ್‌ನ ಕೊನೆಯ ಎಸೆತದಲ್ಲಿ ಸಿರಾಜ್ ನಾಯಕ ದಾಸುನ್ ಶನಕ ಅವರನ್ನು ಬೌಲ್ಡ್ ಮಾಡುವ ಮೂಲಕ ಫೆವಿಲಿಯನ್‌ಗೆ ಅಟ್ಟಿದ್ದಾರೆ.
ಇನ್ನು ಸಿರಾಜ್ ಅಬ್ಬರ ಅಷ್ಟಕ್ಕೇ ನಿಲ್ಲಲಿಲ್ಲ. ತನ್ನ ಮುಂದಿನ ಓವರ್‌ನಲ್ಲಿ ಸಿರಾಜ್ ಲಂಕಾ ನಾಯಕ ದಾಸುನ್ ಶನಕ ಅವರನ್ನು ಬೌಲ್ಡ್ ಮಾಡುವ ಮೂಲಕ ಫೆವಿಲಿಯನ್‌ಗೆ ಅಟ್ಟಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡದ ಸ್ಥಿತಿ ಕೇವಲ 12 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಸಿರಾಜ್ ತಮ್ಮ 5ನೇ ವಿಕೆಟ್ ಕೂಡ ಪೂರ್ಣಗೊಳಿಸಿ ವೇಗವಾಗಿ ಐದು ವಿಕೆಟ್ ಗೊಂಚಲು ಪಡೆದ ದಾಖಲೆಯನ್ನು ಸರಿಗಟ್ಟಿದರು. ಬಳಿಕ 17 ರನ್‌ಗಳಿಸಿದ್ದ ಕುಸಾಲ್ ಮೆಂಡಿಸ್ ಅವರನ್ನು ಕೂಡ ಬೌಲ್ಡ್ ಮಾಡುವ ಮೂಲಕ 6 ವಿಕೆಟ್‌ಗಳ ಗೊಂಚಲು ಪೂರ್ಣಗೊಳಿಸಿದರು.
ನಂತರ ಹಾರ್ದಿಕ್ ಪಾಂಡ್ಯ ಶ್ರೀಲಂಕಾದ ಕೊನೆಯ ಮೂರು ವಿಕೆಟ್‌ಗಳನ್ನು ಕಬಳಿಸಿ ಲಂಕಾ ಇನ್ನಿಂಗ್ಸ್‌ಗೆ ಅಂತ್ಯಹಾಡಿದರು. ಹೀಗಾಗಿ ಶ್ರೀಲಂಕಾ ಕೇವಲ 50 ರನ್‌ಗಳನ್ನು ಗಳಿಸಿ ಶ್ರೀಲಂಕಾ ತಂಡ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾಗೆ ಶ್ರೀಲಂಕಾ ಸುಲಭ ಸವಾಲು ನೀಡಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಗೆ, ದುಶನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ
ಬೆಂಚ್: ಕಸುನ್ ರಜಿತಾ, ಬಿನೂರ ಫೆರ್ನಾಂಡೋ, ದಿಮುತ್ ಕರುಣಾರತ್ನೆ, ಸಹನ್ ಅರಚ್ಚಿಗೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications