ಟಾಸ್ ಸೋತರೂ ನಾವು ತಲೆ ಕೆಡಿಸಿಕೊಳ್ಳಲ್ಲ: ಪಾಕ್‌ಗೆ ಎಚ್ಚರಿಕೆ ನೀಡಿದ ಶ್ರೀಲಂಕಾ ನಾಯಕ

ಏಷ್ಯಾ ಕಪ್‌ನ ಫೈನಲ್ ಮುಖಾಮುಖಿಗೆ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಸಜ್ಜಾಗಿದೆ. ಐದು ಬಾರಿ ಚಾಂಪಿಯನ್ ಆಗಿರುವ ಶ್ರೀಲಂಕಾ ತಂಡ ಆರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಪಾಕಿಸ್ತಾನ ಮೂರನೇ ಬಾರಿಗೆ ಈ ಪ್ರತಿಷ್ಠಿತ ಟ್ರೋಫಿ ಎತ್ತಿ ಹಿಡಿಯುವ ಕನಸು ಕಾಣುತ್ತಿದೆ. ಈ ಕುತೂಹಲಕಾರಿ ಪಂದ್ಯದ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡದ ನಾಯಕ ದಾಸುನ್ ಶನಕ ಪ್ರತಿಕ್ರಿಯಿಸಿದ್ದು ಟಾಸ್ ವಿಚಾರವಾಗಿ ಎದುರಾಳಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಬಾರಿಯ ಏಷ್ಯಾ ಕಪ್ ಟೂರ್ನಿಯಲ್ಲಿ ಟಾಸ್ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ರನ್ ಬೆನ್ನಟ್ಟುವ ತಂಡಕ್ಕೆ ಹೆಚ್ಚಿನ ಅನುಕೂಲಗಳು ಆಗುತ್ತಿರುವುದು ಸ್ಪಷ್ಟವಾಗಿದೆ. ಆದರೆ ಶ್ರೀಲಂಕಾ ನಾಯಕ ದಾಸುನ್ ಶನಕಾ ತಾವು ಟಾಸ್ ಸೋತರು ಮೊದಲಿಗೆ ಬ್ಯಾಟಿಂಗ್‌ಗೆ ಕಣಕ್ಕಿಳಿಯಲು ಸಿದ್ಧವಾಗಿದ್ಧೇವೆ ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಈ ಮೂಲಕ ಫೈನಲ್ ಪಂದ್ಯಕ್ಕೆ ತಾವು ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದೇವೆ ಎಂಬ ಸೂಚನೆ ನೀಡಿದ್ದಾರೆ.

2014 ಸಾಧನೆ ಪುನರಾವರ್ತಿಸುತ್ತಾ ಶ್ರೀಲಂಕಾ
ಕಳೆದ ಕೆಲ ವರ್ಷಗಳಿಂದ ಕಳೆಗುಂದಿದಂತಿದ್ದ ಶ್ರೀಲಂಕಾ ಇತ್ತೀಚೆಗೆ ಮತ್ತೆ ಹೊಸ ಹುರುಪು ಕಾಣಿಸಲು ಆರಂಭಿಸಿತ್ತು. ಏಷ್ಯಾ ಕಪ್‌ನ ಆರಂಭಿಕ ಪಂದ್ಯಗಳಲ್ಲಿ ನೀರಸ ಪ್ರದರ್ಶನ ನಿಡಿದರೂ ನಂತರ ಲಯಕ್ಕೆ ಮರಳಿದಂತೆ ಕಂಡುಬಂದಿದ್ದು ಸೂಪರ್ 4 ಹಂತದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇದೀಗ ಫೈನಲ್‌ನಲ್ಲಿ ಮತ್ತೆ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದ್ದು 2014ರ ಏಷ್ಯಾ ಕಪ್ ಟೂರ್ನಿಯಲ್ಲಿ ಏಕದಿನ ಮಾದರಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಟ್ರೋಫಿ ಎತ್ತಿ ಹಿಡಿದಂತೆ ಈ ಬಾರಿಯೂ ಆ ಸಾಧನೆ ಮಾಡುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಪಾಕಿಸ್ತಾನ ಏಷ್ಯಾ ಕಪ್ ಟ್ರೋಫಿ ಗೆಲ್ಲದೆ ದಶಕವೇ ಕಳೆದಿದ್ದು ಆ ಸಾಧನೆ ಮೇಲೆ ಮತ್ತೆ ಕಣ್ಣಿಟ್ಟಿದೆ.

ನಿರ್ಣಾಯಕ ಪಾತ್ರವಹಿಸಿದೆ ಟಾಸ್
ಇನ್ನು ಈ ಬಾರಿಯ ಏಷ್ಯಾ ಕಪ್‌ನಲ್ಲಿ ಟಾಸ್ ಅತ್ಯಂತ ಮಹತ್ವದ ಪಾತ್ರವಹಿಸಿರುವುದು ಸ್ಪಷ್ಟವಾಗಿದೆ. ಟಾಸ್ ಗೆದ್ದು ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ತಂಡಗಳೇ ಗೆಲುವು ಸಾಧಿಸಿದೆ. ಶ್ರೀಲಂಕಾ ತಂಡ ಕೂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಎಲ್ಲ ಪಂದ್ಯದಲ್ಲಿಯೂ ಗೆಲುವು ಸಾಧಿಸಿದೆ. ಹಾಗಿದ್ದರೂ ಫೈನಲ್ ಪಂದ್ಯದಲ್ಲಿ ಟಾಸ್ ಮೇಲೆ ತಂಡ ಅವಲಂಬಿತವಾಗುವುದಿಲ್ಲ ಎಂಬ ಅಂಶವನ್ನು ಶ್ರೀಲಂಕಾ ತಂಡದ ನಾಯಕ ದಾಸುನ್ ಶನಕ ಹೇಳಿಕೊಂಡಿದ್ದಾರೆ.

ಲಂಕಾ ನಾಯಕ ಹೇಳಿದ್ದಿಷ್ಟು
ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ದಾಸುನ್ ಶನಕ "ಇಲ್ಲಿ ಟಾಸ್ ಬಹಳ ಮುಖ್ಯವಾದ ಅಂಶವಾಗಿದೆ. ಆದರೆ ನಮ್ಮ ಬ್ಯಾಟ್ಸ್‌ಮನ್‌ಗಳು ಮೊದಲ ಮತ್ತು ಎರಡನೇ ಇನ್ನಿಂಗ್ಸ್ ಎರಡರಲ್ಲೂ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ. ಹಾಗಾಗಿ ಫೈನಲ್ ಪಂದ್ಯದಲ್ಲಿ ಟಾಸ್ ಸೋತರೆ ನಾವು ಮೊದಲು ಬ್ಯಾಟಿಂಗ್ ಮಾಡಲು ಸಿದ್ಧರಿದ್ದೇವೆ. ತಂಡವಾಗಿ ನಾವು ಫೈನಲ್ ಆಡಲು ಉತ್ಸುಕರಾಗಿದ್ದೇದ್ದು ಪಾಕಿಸ್ತಾನ ಉತ್ತಮ ತಂಡವಾಗಿದೆ. ಇನ್ನು ಎಲ್ಲಾ ಪಂದ್ಯಗಳು ಕೂಡ ತೀವ್ರ ಪೈಪೋಟಿಯ ಪಂದ್ಯಗಳೇ ಆಗಿದೆ. ನಮ್ಮ ಪಾಲಿಗೆ ಇದು ಅತ್ಯುತ್ತಮ ಏಷ್ಯಾ ಕಪ್ ಟೂರ್ನಿಗಳಲ್ಲಿ ಒಂದಾಗಿದೆ. ಹೀಗಾಘಿ ಫೈನಲ್ ಪಂದ್ಯಕ್ಕಾಗಿ ನಾವು ಎದುರುನೋಡುತ್ತಿದ್ದೇವೆ" ಎಂದಿದ್ದಾರೆ.
ಸಂಪೂರ್ಣ ಸ್ಕ್ವಾಡ್ ಹೀಗಿದೆ: ಶ್ರೀಲಂಕಾ: ದಸುನ್ ಶನಕಾ (ನಾಯಕ), ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕ, ಭಾನುಕ ರಾಜಪಕ್ಸೆ, ಅಶೇನ್ ಬಂಡಾರ, ಧನಂಜಯ ಡಿ ಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಜೆಫ್ರಿ ವಂಡರ್ಸೆ, ಪ್ರವೀಣ್ ಜಯವಿಕ್ರಮ, ಚಾಮಿಕ ಕರುಣಾರತ್ನೆ, ಡಿ.ಡಿ. ಚಂಡಿಮಲ್, ನುವಾನಿಡು ಫೆರ್ನಾಂಡೊ, ಅಸಿತ ಫೆರ್ನಾಂಡೊ, ಪ್ರಮೋದ್ ಮದುಶನ್, ನುವಾನ್ ತುಷಾರ
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಆಸಿಫ್ ಅಲಿ, ಮೊಹಮ್ಮದ್ ಹಸನೈನ್, ಹಸನ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications