IND vs BAN: ಭಾರತ-ಬಾಂಗ್ಲಾ ಸೂಪರ್ 4 ಹೋರಾಟ: ಗೆದ್ದವರು ಫೈನಲ್‌ಗೆ
ದುಬೈ: ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಈಗ ಸೂಪರ್ 4 ಹಂತದ ಕಾದಾಟಗಳು ನಡೆದಿವೆ. ಆಡಿದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ತಂಡಗಳು ಎರಡನೇ ಗೆಲುವಿನ ಹುಡುಕಾಟದಲ್ಲಿವೆ. ಪಾಕ್ ತಂಡವನ್ನು ಸೂಪರ್ 4 ಹಂತದಲ್ಲಿ ಮಣಿಸಿ ಆತ್ಮವಿಶ್ವಾಸದಿಂದ ಕೂಡಿರುವ ಭಾರತ, ಬಾಂಗ್ಲಾಗೆ ಸವಾಲು ಎಸೆಯಲಿದೆ. ಬಾಂಗ್ಲಾ ಸಹ ಸೂಪರ್ 4 ಹಂತದಲ್ಲಿ ಶ್ರೀಲಂಕಾ ತಂಡವನ್ನು ಸೋಲಿಸಿ ಅಬ್ಬರಿಸಿತ್ತು.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಆಡಿದ 17 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ 16 ರಲ್ಲಿ ಜಯ ಸಾಧಿಸಿದೆ. ಇನ್ನು ಬಾಂಗ್ಲಾ 1 ಪಂದ್ಯದಲ್ಲಿ ಜಯ ಸಾಧಿಸಿದೆ. ಯುವ ಆಟಗಾರರಿಂದ ಕೂಡಿರುವ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಆದರೆ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಹೀಗಾಗಿ ಈ ಪಂದ್ಯ ಸಹ ರೋಚಕತೆ ಹೆಚ್ಚಿಸಿದೆ.

ಪಿಚ್ ಹೇಗಿದೆ? ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್ ನಿಧಾನವಾಗಿದ್ದು, ಮಿಡ್ಲ್ ಓವರ್‌ಗಳಲ್ಲಿ ರನ್ ಗಳಿಸುವುದು ಕಷ್ಟ. ಸ್ಪಿನ್ ಬೌಲರ್‌ಗಳು ಬ್ಯಾಟರ್‌ಗಳನ್ನು ಕಾಡಬಲ್ಲರು. ಇನ್ನು ಟಾಸ್ ಗೆದ್ದ ತಂಡ ಫೀಲ್ಡಿಂಗ್ ಮಾಡಬಹುದು.
ಬದಲಾವಣೆ ಸಾಧ್ಯತೆ ಕಡಿಮೆ
ಈಗಾಗಲೇ ಸೂಪರ್ 4 ಹಂತದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ, ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ. ಈ ವೇಳೆ ಆರಂಭಿಕರಾದ ಅಭಿಷೇಕ್ ಶರ್ಮಾ, ಶುಭಮನ್ ಗಿಲ್ ಪಾಕ್ ವಿರುದ್ಧ ನೀಡಿದ ಪ್ರದರ್ಶನವನ್ನೇ ನೀಡುವ ಅನಿವಾರ್ಯತೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ತಿಲಕ್ ವರ್ಮಾ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಭರವಸೆ ಮೂಡಿಸಿದ್ದಾರೆ.
ಭಾರತ ತಂಡದಲ್ಲಿ ಆಲ್‌ರೌಂಡರ್‌ಗಳ ಬಳಗವೇ ಇದೆ. ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು. ಇನ್ನು ನುರಿತ ಸ್ಪಿನ್ ಬೌಲರ್ ಆಗಿ ವರುಣ್ ಚಕ್ರವರ್ತಿ ಹಾಗೂ ಕುಲ್‌ದೀಪ್ ಯಾದವ್ ಎದುರಾಳಿಗಳನ್ನು ಕಾಡಬಲ್ಲರು. ಏಷ್ಯಾ ಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಬಿಗುವಿನ ದಾಳಿ ನಡೆಸುವ ಅನಿವಾರ್ಯತೆ ಇದೆ.
ಸಂಭಾವ್ಯ ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಜಯ ಸಾಧಿಸಿ, ಫೈನಲ್‌ಗೆ ಪ್ರವೇಶಿಸುವ ಕನಸು ಕಾಣುತ್ತಿದೆ. ಈ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮನಮೋಹಕ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಪರಿಸ್ಥಿತಿಗೆ ಅನುಗುಣವಾಗಿ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ.
ಸಂಭಾವ್ಯ ಬಾಂಗ್ಲಾದೇಶ ತಂಡ: ಸೈಫ್ ಹಸನ್, ತಂಝಿದ್ ಹಸನ್, ಲಿಟನ್ ದಾಸ್ (ನಾಯಕ ಮತ್ತು ವಿಕೆಟ್ ಕೀಪರ್), ತೌಹಿದ್ ಹೃದೋಯ್, ಶಮಿಮ್ ಹುಸೇನ್, ಜಾಕರ್ ಅಲಿ, ಮೆಹೆದಿ ಹಸನ್, ನಸುಮ್ ಅಹ್ಮದ್, ಟಸ್ಕಿನ್ ಅಹ್ಮದ್, ತಂಝಿಮ್ ಹಸನ್, ಮುಸ್ತಾಫಿಜುರ್ ರೆಹಮಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications