ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆಕ್ಷಣಗಣನೆ ಆರಂಭವಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಆತಿಥೇಯ ಶ್ರೀಲಂಕಾ ಫೈನಲ್‌ನಲ್ಲಿ ಸವಾಲೊಡ್ಡಲಿದ್ದು ತೀವ್ರ ಕುತೂಹಲ ಮೂಡಿಸಿದೆ. ಭಾರತ ಹಾಗೂ ಶ್ರೀಲಂಕಾ ಎರಡು ತಂಡಗಳು ಕೂಡ ಏಷ್ಯಾಕಪ್ ಟೂರ್ನಿಯಲ್ಲಿ ಅತ್ಯಂತ ಹೆಚ್ಚು ಯಶಸ್ಸು ಕಂಡ ತಂಡಗಳೆನಿಸಿದೆ. ಎರಡು ತಮಡಗಳು ಕೂಡ ತಲಾ 7 ಬಾರಿ ಏಷ್ಯಾಕಪ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು 8ನೇ ಬಾರಿಯ ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ.
ಟೀಮ್ ಇಂಡಿಯಾ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆಯಾದರೂ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಸೋಲು ಕಂಡಿತ್ತು. ಆದರೆ ಕೆಲ ಪ್ರಮುಖ ಆಟಗಾರರಿಗೆ ಆ ಪಮದ್ಯದಲ್ಲಿ ವಿಶ್ರಾಂತಿ ನೀಡಲಾಗಿದ್ದು ಫೈನಲ್ ಪಂದ್ಯದಲ್ಲಿ ಪೂರ್ಣ ಸಾಮರ್ಥ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಅಲ್ಲದೆ ಸೂಪರ್ 4 ಹಂತದಲ್ಲಿ ಭಾರತ ಶ್ರೀಲಂಕಾ ತಂಡವನ್ನು ಒಂದು ಬಾರಿ ಮಣಿಸಿದ್ದು ಆತ್ಮವಿಶ್ವಾಸದಲ್ಲಿದೆ.

ಇನ್ನು ಶ್ರೀಲಂಕಾ ತಂಡಕ್ಕೆ ತವರಿನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ತವರಿನ ಲಾಭದ ನಿರೋಕ್ಷೆಯಲ್ಲಿದೆ. ಅಲ್ಲದೆ ತಂಡದಲ್ಲಿ ಬಹುತೇಕ ಆಟಗಾರರು ಅದ್ಭುತ ಲಯದಲ್ಲಿದ್ದು ವಿಶ್ವಕಪ್‌ನ ಸನಿಹದಲ್ಲಿ ತಂಡದ ಆತ್ಮವಿಶ್ವಾಸ ಹೆಚ್ಚಾಗಲು ಕಾರಣವಾಗಿದೆ. ಭಾರತದ ಬಲಿಷ್ಠ ಬ್ಯಾಟಿಂಗ್ ವಿಭಾಗದ ವಿರುದ್ಧ ಲಂಕಾ ಪಡೆ ರಣತಂತ್ರವನ್ನು ಹೆಣೆಯಲಿದ್ದು ಅದನ್ನು ರೋಹಿತ್ ಪಡೆ ಹೇಗೆ ಭಗ್ನಗೊಳಿಸಲಿದೆ ಎನ್ನುವುದು ಕುತೂಹಲ.
ಭಾರತ ಹಾಗೂ ಶ್ರೀಲಂಕಾ ತಮಡಗಳ ನಡುವಿನ ಫೈನಲ್ ಪಂದ್ಯ ಕೊಲಂಬೋದಲ್ಲಿ ಆಯೋಜನೆಯಾಗಲಿದೆ. ಸೂಪರ್ 4 ಹಂತದ ಎಲ್ಲಾ ಪಂದ್ಯಗಳು ಕೂಡ ಈ ಮೈದಾನದಲ್ಲಿಯೇ ಆಯೋಜನೆಯಾಗಿತ್ತು. ಮಧ್ಯಾಹ್ನ 3 ಗಂಟೆಗೆ ಈ ಪಂದ್ಯ ಆರಂಬವಾಗಲಿದ್ದು 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ. ಹಾಟ್‌ಸ್ಟಾರ್ ಮೊಬೈಲ್ ವರ್ಶನ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವಿದೆ.
ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ನೆರವು ಅಷ್ಟು ಸುಲಭವಾಗಿ ದೊರೆಯುವುದಿಲ್ಲ. ಆದರೆ ಉತ್ತಮ ಆರಂಭ ದೊರೆತರೆ ಸವಾಲಿನ ಮೊತ್ತವನ್ನು ಪೇರಿಸುವ ಅವಕಾಶವಿದೆ. ಇಲ್ಲಿ ಸ್ಪಿನ್ನರ್‌ಗಳಿಗೆ ಉತ್ತಮ ನೆರವು ದೊರೆಯಲಿದ್ದು ಅಪಾಯಕಾರಿಯಾಗುವ ಸಾಧ್ಯತೆ ಇದೆ. ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವೆನಿಸಲಿದೆ.
ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ
ಶ್ರೀಲಂಕಾ ಸಂಭಾವ್ಯ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಮತೀಶ ಪತಿರಣ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ
ಶ್ರೀಲಂಕಾ: ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಪಾತುಮ್ ನಿಸ್ಸಂಕ, ಕುಸಲ್ ಪೆರೇರ, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದುನಿತ್ ವೆಲ್ಲಲಾಗೆ, ಪ್ರಮೋದ್ ಮದುಶನ್, ಮಥೀಶ ಪತಿರಣ, ಸಹನ್ ಅರಚ್ಚಿಗೆ, ದುಶನ್ ಹೇಮಂತ, ಕಸುನ್ ರಜಿತ, ಬಿನೂರ ಫೆರ್ನಾಂಡೋ, ದಿಮುತ್ ಕರುಣಾರತ್ನ