Shreyar Iyer: ಅಭ್ಯಾಸ ಆರಂಭಿಸಿದ ಶ್ರೇಯಸ್ ಐಯ್ಯರ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿತಾರಾ ಸ್ಟಾರ್ ಕ್ರಿಕೆಟಿಗ?
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಐಯ್ಯರ್ ಸೂಪರ್ 4 ಹಂತದ ಮೊದಲ ಎರಡು ಪಂದ್ಯಗಳಿಗೆ ಗಾಯದ ಕಾರಣದಿಂದಾಗಿ ಅಲಭ್ಯವಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಗಾಯಗೊಂಡಿರುವ ಶ್ರೇಯಸ್ ಐಯ್ಯರ್ ಚೇತರಿಸಿಕೊಂಡಿದ್ದು ಅಭ್ಯಾಸಕ್ಕೆ ಹಾಜರಾಗಿದ್ದಾರೆ.
ಸೂಪರ್ 4 ಹಂತದಲ್ಲಿ ಶ್ರೇಯಸ್ ಐಯ್ಯರ್ ಬದಲಿಗೆ 3ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿದಿದ್ದು ಅದ್ಭುತ ಯಶಸ್ಸು ಸಾಧಿಸಿದರು. ಪಾಕಿಸ್ತಾನದ ವಿರುದ್ಧ ಮ್ಯಾಚ್ ವಿನ್ನಿಂಗ್ ಶತಕ ಬಾರಿಸಿದ ಅವರು ಶ್ರೀಲಂಕಾ ವಿರುದ್ಧವೂ 39 ರನ್‌ಗಳ ಕೊಡುಗೆ ನೀಡಿ ಗಮನಸೆಳೆದಿದ್ದಾರೆ. ಇದೀಗ ಶ್ರೇಯಸ್ ಐಯ್ಯರ್ ಕೂಡ ಚೇತರಿಸಿಕೊಂಡಿದ್ದಾರೆ. ಆದರೆ ಶುಕ್ರವಾರ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಐಯ್ಯರ್ ಲಭ್ಯವಾಗಲಿದ್ದಾರೆಯೇ ಎನ್ನುವ ಬಗ್ಗೆ ಮಾಹಿತಿ ದೊರೆತಿಲ್ಲ.

ಶ್ರೇಯಸ್ ಐಯ್ಯರ್ ಹಹುರ ಬ್ಯಾಟ್‌ನ ಮೂಲಕ ತಮ್ಮ ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ಮೂಲಕ ಹಂತಹಂತವಾಗಿ ಪೂರ್ಣ ಫಿಟ್‌ನೆಸ್ ಕಂಡುಕೊಳ್ಳುವ ಪ್ರಯತ್ನಗಳು ಆಗುತ್ತಿದೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶ್ರೇಯಸ್ ಐಯ್ಯರ್ ಅದಾದ ಬಳಿಕ ಸಣ್ಣ ಪ್ರಮಾಣದ ಬೆನ್ನು ನೋವಿಗೆ ಒಳಗಾಗಿದ್ದರು ಎಂದು ವರದಿಯಾಗಿದ್ದರೂ ಅವರ ಚೇತರಿಕೆ ವಿಚಾರವಾಹಿ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಈ ಮಧ್ಯೆ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಈ ವಾರದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ, ಈ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ ಅವರ ಬೆನ್ನಿನ ಗಾಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ,
ಬಾಂಗ್ಲಾದೇಶ ಸ್ಕ್ವಾಡ್: ಶಕೀಬ್ ಅಲ್ ಹಸನ್ (ನಾಯಕ), ತಂಜಿದ್ ಹಸನ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಅಫೀಫ್ ಹೊಸೈನ್, ಶೋರಿಫುಲ್ ಇಸ್ಲಾಂ, ಮೊಹಮ್ಮದ್ ನಯಿಮ್, ಮಹೇದಿ ಹಸನ್, ತಂಝಿಮ್ ಹಸನ್ ಸಾಕಿಬ್, ಅನಾಮುಲ್ ಹಕ್, ಲಿಟ್ಟನ್ ದಾಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications