Asia cup 2023: ಭಾರತಕ್ಕೆ ಬಾಂಗ್ಲಾದೇಶ ಸವಾಲು; ಬದಲಾಗುತ್ತಾ ಆಡುವ ಬಳಗ, ನೇರಪ್ರಸಾರದ ಮಾಹಿತಿ
ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯ ಶುಕ್ರವಾರ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆಯಲಿದೆ. ಈ ಎರಡು ತಂಡಗಳ ಪೈಕಿ ಭಾರತ ಮೊದಲ ಎರಡು ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದರೆ ಬಾಂಗ್ಲಾದೇಶ ಎರಡು ಪಂದ್ಯಗಳನ್ನು ಸೋಲು ಟೂರ್ನಿಯಿಮದ ಹೊರಬಿದ್ದಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶ ಯಾವುದೇ ಮಹತ್ವವಿಲ್ಲದಂತಾಗಿದೆ.
ಹಾಗಿದ್ದರೂ ವಿಶ್ವಕಪ್ ಸನಿಹದಲ್ಲಿರುವಾಗ ಎರಡು ತಂಡಗಳ ಆಟಗಾರರ ಅಭ್ಯಾಸಕ್ಕೆ ಇದು ಉತ್ತಮವಾದ ವೇದಿಕೆಯಾಗಿದ್ದು ಯಾವೆಲ್ಲಾ ಆಟಗಾರರಿಗೆ ಈ ಪಂದ್ಯದ ಮೂಲಕ ಅವಕಾಶ ದೊರೆಯಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯೊದ್ದು ಕೆಲ ಆಟಗಾರರಿಗೆ ಅವಕಾಶವನ್ನು ನಿರೀಕ್ಷಿಸಲಾಗುತ್ತಿದೆ. ಮತ್ತೊಂದೆಡೆ ಬಾಂಗ್ಲಾದೇಶ ಕೊನೆಯ ಪಂದ್ಯವನ್ನು ಗೆದ್ದು ಟೂರ್ನಿಯಿಮದ ಹೊರಹೋಗುವ ಲೆಕ್ಕಾಚಾರವನ್ನು ನಡೆಸುತ್ತಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಈ ಪಂದ್ಯ ಕೂಡ ಆಯೋಜನೆಯಾಗಲಿದ್ದು ಸ್ಟಾರ್‌ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರವಾಗಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ಲೈವ್ ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್
ಪ್ರೇಮದಾಸ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ಉತ್ತಮವಾಗಿ ನೆರವು ನೀಡುತ್ತದೆ. ಆದರೆ ಸತತವಾಗಿ ಪಂದ್ಯಗಳು ಇಲ್ಲಿ ನಡೆಯುತ್ತಿದ್ದು ಪಿಚ್ ಬ್ಯಾಟರ್‌ಗಳಿಗೆ ಸವಾಲಾಗಿ ಪರಿಣಮಿಸಿದೆ. ಇನ್ನು ಸ್ಪಿನ್ನರ್‌ಗಳು ಇಲ್ಲಿ ಹೆಚ್ಚಿನ ಮೇಲುಗೈ ಸಾಧಿಸಲು ಸಾಧ್ಯವಾಗುತ್ತಿದೆ. ಹೀಗಾಗಿ ಶುಕ್ರವಾರ ನಡೆಯುವ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಹವಾಮಾನ ವರದಿ
ಇನ್ನು ಕೊಲಂಬೋದಲ್ಲಿ ಶುಕ್ರವಾರ ಕೂಡ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಈ ಪಂದ್ಯ ಕೂಡ ಮಳೆಯ ಆತಂಕದ ಮಧ್ಯೆಯೇ ನಡೆಯುವ ನಿರೀಕ್ಷೆಯಿದೆ. ಅಲ್ಲದೆ ಪಂದ್ಯ ಆರಂಭವಾಗುವ ಸಮಯದಲ್ಲಿಯೇ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಂಭಾವ್ಯ ಆಡುವಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ : ಮೊಹಮ್ಮದ್ ನಯಿಮ್, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ತೌಹಿದ್ ಹೃದಯ್, ಶಮೀಮ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications