Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Abhishek Sharma: ಇತಿಹಾಸದ ಹೊಸ್ತಿಲಲ್ಲಿ ಅಭಿಷೇಕ್‌ ಶರ್ಮಾ

ಇನ್ನು ಎರುಡ ದಿನಗಳಲ್ಲಿ ಏಷ್ಯಾ ಕಪ್‌ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ದೇಶಗಳು ಭಾಗವಹಿಸಲಿವೆ. ಟೀಮ್ ಇಂಡಿಯಾ ಸಹ ಈ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಅಲ್ಲದೆ ಕಪ್‌ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ. ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಅಭಿಷೇಕ್‌ ಶರ್ಮಾ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ಮೂಲಕ ಏಳು ವರ್ಷಗಳ ಹಳೆಯ ದಾಖಲೆಯನ್ನು ಅಳಿಸುವ ಕನಸಿನಲಿದ್ದಾರೆ.

ಟೀಮ್ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಬ್ಯಾಟಿಂಗ್ ಕ್ರಮಾಂಕದಲ್ಲಿ ನಂಬರ್ 1 ಬ್ಯಾಟರ್. ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾಗಿನಿಂದಲೂ ಅಭಿಷೇಕ್‌ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಈಗ ಇವರು ಏಷ್ಯಾ ಕಪ್‌ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಸಫಲರಾದರೆ, ಮತ್ತೊಂದು ದೊಡ್ಡ ದಾಖಲೆ ಬರೆಯುವ ಇರಾದೆಯನ್ನು ಹೊಂದಿದ್ದಾರೆ.

Asia Cup T20 Abhishek Sharma Aims to Break Shikhar Dhawan s Seven-Year-Old Record

25 ವರ್ಷದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಇದುವರೆಗೆ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೇವಲ 17 ಪಂದ್ಯಗಳನ್ನು ಆಡಿದ್ದು, 2 ಶತಕ ಸಿಡಿಸಿದ್ದಾರೆ. ಇವರು ಪ್ರಸಕ್ತ ವರ್ಷದಲ್ಲಿ 22 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಏಷ್ಯಾ ಕಪ್‌ನಲ್ಲಿ ಅಭಿಷೇಕ್‌ ಶರ್ಮಾ ಕನಿಷ್ಠ 5 ಪಂದ್ಯಗಳನ್ನು ಆಡಲಿದ್ದಾರೆ. ಈ ವೇಳೆ 4 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಅವರು ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಎಡಗೈ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲ್ಲಿದ್ದಾರೆ. ಸದ್ಯ ದಾಖಲೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶಿಖರ್ ಧವನ್ ಅವರ ಹೆಸರಿನಲ್ಲಿದೆ. ಶಿಖರ್ 2018 ರಲ್ಲಿ 17 ಇನ್ನಿಂಗ್ಸ್‌ಗಳಲ್ಲಿ ಒಟ್ಟು 25 ಸಿಕ್ಸರ್‌ ಸಿಡಿಸಿದ್ದರು.

ಆರಂಭೀಕರಾಗಿ ಕಣಕ್ಕೆ ಇಳಿಯುವುದು ಯಾರು?

ಟೀಮ್ ಇಂಡಿಯಾ ಈಗಾಗಲೇ ಏಷ್ಯಾ ಕಪ್‌ ಟಿ20 ಟೂರ್ನಿಗಾಗಿ ಯುಎಇ ಪ್ರವೇಶಿಸಿದೆ. ಈ ವೇಳೆ ಭಾರತ ತಂಡದ ಆಟಗಾರರು ಅಭ್ಯಾಸವನ್ನು ಸಹ ನಡೆಸಿದ್ದಾರೆ. ಟೀಮ್ ಇಂಡಿಯಾದಲ್ಲಿ ಸದ್ಯ ಮೂವರು ಆರಂಭಿಕರು ಸ್ಥಾನ ಪಡೆದಿದ್ದಾರೆ. ಮೂವರಲ್ಲಿ ಇಬ್ಬರು ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದಾರೆ. ಅಭಿಷೇಕ್‌ ಶರ್ಮಾ ಜೊತೆ ಇನಿಂಗ್ಸ್‌ ಆರಂಭಿಸುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಸಂಜು ಸ್ಯಾಮ್ಸನ್‌ ಹಾಗೂ ಉಪನಾಯಕನ ಜವಾಬ್ದಾರಿಯನ್ನು ಪಡೆದಿರುವ ಶುಭಮನ್‌ ಗಿಲ್‌ ಇಬ್ಬರಲ್ಲಿ ಒಬ್ಬರು ಆರಂಭಿಕರಾಗಿ ಕಣಕ್ಕೆ ಇಳಿಯುವುದು ಫಿಕ್ಸ್‌.

Asia Cup T20 Abhishek Sharma Aims to Break Shikhar Dhawan s Seven-Year-Old Record

ಸೆ.9 ರಿಂದ ಯುಎಇನಲ್ಲಿ ಏಷ್ಯಾ ಕಪ್‌ ಟಿ20 ಟೂರ್ನಿ ಆರಂಭವಾಗಲಿದೆ. 8 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದು, 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಲೀಗ್ ಹಂತದಲ್ಲಿ ಪ್ರತಿ ತಂಡಕ್ಕೆ ಮೂರು ಪಂದ್ಯಗಳು ಆಡಲಿದ್ದು, ಗುಂಪು ಹಂತದಲ್ಲಿ ಅಗ್ರ 2 ಸ್ಥಾನ ಪಡೆದ ತಂಡಗಳು ಸೂಪರ್ 4ಗೆ ಅರ್ಹತೆ ಪಡೆಯಲಿವೆ. ಈ ವೇಳೆ ಸೂಪರ್‌ 4 ಹಂತದಲ್ಲಿ ಅಗ್ರ ಎರಡು ಸ್ಥಾನ ಪಡೆದಿರುವ ತಂಡಗಳು ಫೈನಲ್‌ಗೆ ಪ್ರವೇಶಿಸಲಿವೆ.

Story first published: Sunday, September 7, 2025, 13:52 [IST]
Other articles published on Sep 7, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+