Asia cup T20 Final: ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಭಾರತ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗಾಗಲೇ ಉಭಯ ತಂಡಗಳು ಈ ಟೂರ್ನಿಯಲ್ಲಿ ಆಡಿದ 2 ಪಂದ್ಯಗಳನ್ನು ಗೆದ್ದು ಬೀಗಿರುವ ಭಾರತ, ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ. ಮಹತ್ವದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಸೂಪರ್ 4 ಹಂತದಲ್ಲಿ ಹಾಗೂ ಲೀಗ್ ಹಂತದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿರುವ ಸೂರ್ಯ ಪಡೆ ಆತ್ಮವಿಶ್ವಾಸದಲ್ಲಿದೆ. ಅಲ್ಲದೆ 9ನೇ ಬಾರಿಗೆ ಏಷ್ಯಾ ಕಪ್ ಟಿ20 ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸಿನಲ್ಲಿ ಟೀಮ್ ಇಂಡಿಯಾ ಇದೆ. ಇನ್ನು ಪಾಕ್ ಮೂರನೇ ಬಾರಿಗೆ ಪ್ರಶಸ್ತಿಯ ಮೇಲೆ ಕಣ್ಣು ನೆಟ್ಟಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸೂರ್ಯ, ಎಂಎಸ್ ಧೋನಿ ಅವರ ವಿಶೇಷ ಕ್ಲಬ್ ಸೇರುವ ಕನಸಿನಲ್ಲಿದ್ದಾರೆ.

ಹಾರ್ದಿಕ್‌ಗೆ ಗಾಯ
ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಶ್ರೀಲಂಕಾ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಅವರಿಗೆ ಗೇಟ್ ಪಾಟ್ ನೀಡಲಾಗಿದೆ. ಇನ್ನು ಗಾಯಾಳು ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಕಂ ಬ್ಯಾಕ್ ಮಾಡಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ಪಾಕ್ ತಂಡ: ಫಖರ್ ಜಮಾನ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಅಲಿ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications