ಟಿ20 ಮಾದರಿಯಲ್ಲಿ ಭಾರತದ ಈ ಆಟಗಾರ ನನ್ನ ಫೇವರೀಟ್ ಎಂದ ಪಾಕ್ ದಿಗ್ಗಜ

ಏಷ್ಯಾ ಕಪ್ ಟೂರ್ನಿ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಯಾವೆಲ್ಲಾ ಆಟಗಾರರು ಈ ಸರಣಿಯಲ್ಲಿ ಮುಖ್ಯವಾಗಬಹುದು? ಯಾವ ಆಟಗಾರರಿಂದ ಅದ್ಭುತ ಪ್ರದರ್ಶನ ಬರಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ದಿಗ್ಗಜ ಆಟಗಾರ ವಾಸಿಂ ಅಕ್ರಮ್ ಭಾರತದ ಒಬ್ಬ ಆಟಗಾರನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು ಆತ ಟಿ20 ಕ್ರಿಕೆಟ್ ಮಾದರಿಯಲ್ಲಿ ನನ್ನ ನೆಚ್ಚಿನ ಆಟಗಾರರಲ್ಲಿ ಒಬ್ಬ ಎಂದಿದ್ದಾರೆ.
ಭಾರತದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ವಾಸಿಂ ಅಕ್ರಮ್ ತನ್ನ ನೆಚ್ಚಿನ ಆಟಗಾರ ಎಂದು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. 31ರ ಹರೆಯದ ಸೂರ್ಯಕುಮಾರ್ ಯಾದವ್ ಕಳೆದ ಒಮದು ದಶಕದಿಂದ ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದು ಇತ್ತೀನ ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದರು. ಇದರ ಪರಿಣಾಮವಾಗಿ ಕಳೆದ ಎರಡು ವರ್ಷಗಳಿಂದೀಚೆಗೆ ಸೂರ್ಯಕುಮಾರ್ ಯಾದವ್ ಭಾರತ ತಂಡದಲ್ಲಿಯೂ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದು ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

ಕೊಹ್ಲಿ, ರೋಹಿತ್‌ಗಿಂತಲೂ ಈತನೇ ನೆಚ್ಚಿನ ಆಟಗಾರ
ಸ್ಟಾರ್ ಸ್ಪೋರ್ಟ್ಸ್ ಆಯೋಜನೆ ಮಾಡಿದ ಮಾಧ್ಯಮಗೋಷ್ಠಿಯಲ್ಲಿ ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ಶ್ರೇಷ್ಠ ಬೌಲರ್ ವಾಸಿಂ ಅಕ್ರಮ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. "ಖಮಡಿತವಾಗಿಯೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಇದ್ದಾರೆ. ಆದರೆಇತ್ತೀಚಿನ ದಿನಗಳಲ್ಲಿ ನನ್ನ ನೆಚ್ಚಿನ ಆಟಗಾರ ಸೂರ್ಯಕುಮಾರ್ ಯಾದವ್. ಅವರು ಅದ್ಭುತವಾದ ಪ್ರದರ್ಶನವನ್ನು ನೀಡುತ್ತಾ ಬಂದಿದ್ದಾರೆ" ಎಂದಿದ್ದಾರೆ ವಾಸಿಂ ಅಕ್ರಮ್.

'SKY' 360 ಡಿಗ್ರಿ ಆಟಗಾರ ಎಂದ ಅಕ್ರಮ್
ಮುಂದುವರಿದು ಮಾತನಾಡಿದ ವಾಸಿಂ ಅಕ್ರಮ್ ಭಾರತದ ಮಧ್ಯಮ ಕ್ರಮಾಂಕದ ಆಟಗಾರನ ಬ್ಯಾಟಿಂಗ್ ಸಾಮರ್ಥ್ಯವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. "ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾವನ್ನು ಪಡೆದುಕೊಂಡ ಬಳಿಕ ಸೂರ್ಯಕುಮಾರ್ ಯಾದವ್ ಆಟ ಮತ್ತಷ್ಟು ಸೊಗಸಾಗಿದೆ. ಅವರ ಆಟವನ್ನು ನೋಡುವುದೇ ಆಕರ್ಷಕವಾಗಿದೆ. ಸ್ಪಿನ್ ಅಥವಾ ವೇಗದ ಬೌಲಿಂಗ್ ಎರಡಕ್ಕೂ ಸೂರ್ಯಕುಮಾರ್ ಯಾದವ್ ಅತ್ಯಂತ ಅಪಾಯಕಾರಿ ಆಟಗಾರನಾಗಿದ್ದಾರೆ. ಆತನೋರ್ವ 360 ಆಟಗಾರನಾಗಿದ್ದು ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಸಾಮರ್ಥ್ಯವನ್ನು ಹೊಂದಿದ್ದಾರೆ" ಎಂದಿದ್ದಾರೆ.

ಏಷ್ಯಾ ಕಪ್‌ನಲ್ಲಿ ಆಡಲು ಸಜ್ಜಾಗಿದ್ದಾರೆ ಸೂರ್ಯ
ಸದ್ಯ ಭಾರತ ವೈಟ್‌ಬಾಲ್ ತಂಡದ ಪ್ರಮುಖ ಸದಸ್ಯನಾಗಿದ್ದಾರೆ ಸೂರ್ಯಕುಮಾರ್ ಯಾದವ್. ಅದ್ಭುತ ಫಾರ್ಮ್‌ನಲ್ಲಿರುವ ಭಾರತದ ಈ ಆಟಗಾರ ವೇಗವಾಗಿ ರನ್‌ಗಳನ್ನು ಗಳಿಸುವ ಸಾಮರ್ಥ್ಯವನ್ನು ಹೊಂದಿದ್ದು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಬಲ ತುಂಬಿದ್ದಾರೆ. ಈ ಬಾರಿಯ ಏಷ್ಯಾ ಕಪ್ ಟೂರ್ನಿಗೂ ಆಯ್ಕೆಯಾಗಿರುವ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಮೂಡಿಸಿದ್ದಾರೆ. ನಾಲ್ಕನೇ ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುವ ನಿರೀಕ್ಷೆಯಿದೆ.

ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಆವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications