For Quick Alerts
ALLOW NOTIFICATIONS  
For Daily Alerts
 

ಶ್ರೇಯಸ್ ಅಯ್ಯರ್, ಜೈಸ್ವಾಲ್ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ಸ್ಥಾನ ಪಡೆಯುವುದು ಅನುಮಾನ

ಯುಎಇನಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೆ ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಇನ್ನು ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಸೂರ್ಯಕುಮಾರ್ ಯಾದವ್ ತಂಡದ ಚುಕ್ಕಾಣಿಯನ್ನು ಹಿಡಿಯುವುದು ಖಚಿತ ಇದ್ದಂತೆ ಕಾಣುತ್ತಿದೆ. ಶ್ರೇಯಸ್ ಅಯ್ಯರ್ ಅವರನ್ನು ಟಿ 20 ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ.

ಟೀಮ್ ಇಂಡಿಯಾದ ಭರವಸೆಯ ಆಟಗಾರ ಸೂರ್ಯಕುಮಾರ್ ಯಾದವ್ ಪ್ರಸ್ತುತ ಬೆಂಗಳೂರಿನಲ್ಲಿ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿದ್ದಾರೆ. ಸೂರ್ಯಕುಮಾರ್ ತಮ್ಮ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇವರು ಗಾಯದಿಂದ ಈಗ ಚೇತರಿಕೆ ಕಾಣುತ್ತಿದ್ದು, ಅಂಗಳಕ್ಕೆ ಮರಳಲು ತಯಾರಿ ನಡೆಸಿದ್ದಾರೆ. ಮುಂಬೈನಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಉಪಸ್ಥಿತಿಯು ಅವರು ಏಷ್ಯಾ ಕಪ್‌ನಲ್ಲಿ ಟೀಮ್ ಇಂಡಿಯಾದ ನಾಯಕರಾಗಲಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ಏಷ್ಯಾ ಕಪ್‌ ಟಿ20 ಟೂರ್ನಿಗೆ ಬಿಸಿಸಿಐ ಆಯ್ಕೆ ಸಮಿತಿ ಆಗಸ್ಟ್ 19 ರಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

Asian Cup T20 Suryakumar Yadav likely to lead India Shreyas Iyer may be dropped

ಏಷ್ಯಾ ಕಪ್‌ ಟಿ20 ತಂಡದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಬಹುದು ಎಂಬ ಪ್ರಶ್ನೆಗಳು ಉದ್ಭವಿಸಿವೆ. ನಾಯಕರಾಗಿ ಸುರ್ಯಕುಮಾರ್ ಯಾದವ್ ಕಣಕ್ಕೆ ಇಳಿಯುವುದು ಖಚಿತ ಎನ್ನಲಾಗುತ್ತಿದೆ. ಹೀಗಾಗಿ ಶುಭಮನ್‌ ಗಿಲ್‌, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್‌, ಇವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಡೌಟ್ ಎಂದು ಹೇಳಲಾಗುತ್ತಿದೆ. ಟೀಮ್ ಇಂಡಿಯಾದ ಮೇಲ್ಪಂಕ್ತೀಯ ಆಟಗಾರರು ತಮ್ಮ ತಮ್ಮ ಸ್ಥಾನವನ್ನು ಭಧ್ರ ಪಡಿಸಿಕೊಂಡಿದ್ದರಿಂದ ಗಿಲ್‌, ಅಯ್ಯರ್‌, ಜೈಸ್ವಾಲ್ ಅವರಿಗೆ ಸ್ಥಾನ ಸಿಗುವು ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಏಷ್ಯಾ ಕಪ್‌ಗೆ ಸ್ಥಾನ ಡೌಟ್?

ಟೀಮ್ ಇಂಡಿಯಾದ ಭರವಸೆಯ ಆಟಗಾರರ ಯಶಸ್ವಿ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾ ಕಪ್ ಟಿ20 ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಈ ಇಬ್ಬರೂ ಆಟಗಾರರು ದುಲೀಪ್ ಟ್ರೋಫಿಯ ಭಾಗವಾಗಿದ್ದಾರೆ. ಹೀಗಾಗಿ ಈ ಆಟಗಾರರು ಸ್ವರೂಪಗಳನ್ನು ಬದಲಿಸಿದಾಗ, ಆಟಗಾರರ ಪ್ರದರ್ಶನದ ಮೇಲೆ ನೇರ ಪರಿಣಾಮ ಬೀರಬಹುದು ಎಂಬುದು ಆಯ್ಕೆದಾರರಿಗೆ ಕಳಕಳಿ ಆಗಿದೆ. ಟೀಮ್ ಇಂಡಿಯಾದ ರೂಪು ರೇಷೆ ಹೇಗಿರಲಿದೆ ಎಂಬ ಬಗ್ಗೆ ಅ.19 ರಂದೇ ಉತ್ತರ ಸಿಗಲಿದೆ.

Story first published: Friday, August 15, 2025, 19:30 [IST]
Other articles published on Aug 15, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+