Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asian Games 2023 Cricket: ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶಕ್ಕೆ ಮಣ್ಣುಮುಕ್ಕಿಸಿ ಫೈನಲ್ ಪ್ರವೇಶಸಿದ ಭಾರತ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಪುರುಷರ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಮಣಿಸಿ ಭಾರತ ತಂಡ ಫೈನಲ್‌ಗೆ ಪ್ರವೇಶಿಸಿದ್ದು, ಚಿನ್ನದ ಪದಕಕ್ಕೆ ಕೇವಲ ಒಂದೇ ಹೆಜ್ಜೆ ಬಾಕಿ ಇದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 96 ರನ್‌ಗಳನ್ನು ಕಲೆಹಾಕಿತು. ಸುಲಭ ಗುರಿ ಬೆನ್ನಟ್ಟಿದ ಭಾರತ ತಂಡ 9 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Asian Games 2023 Cricket: India Beat Bangladesh By 9 Wickets And Entered To The Final

ಕ್ವಾರ್ಟರ್-ಫೈನಲ್‌ನಲ್ಲಿ ನೇಪಾಳ ತಂಡವನ್ನು ಸೋಲಿಸಿದ್ದ ಭಾರತ, ಇದೀಗ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇನ್ನೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ವಿಜೇತರನ್ನು ಶನಿವಾರ ನಡೆಯುವ ಚಿನ್ನದ ಪದಕದ ಪಂದ್ಯದಲ್ಲಿ ಭಾರತ ಎದುರಿಸಲಿದೆ.

ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶದ ಆರಂಭಿಕರಾದ ಪರ್ವೇಜ್ ಹೊಸೈನ್ ಎಮಾನ್ 23 ರನ್ ಮತ್ತು ಮಹಮ್ಮದುಲ್ ಹಸನ್ ಜಾಯ್ 5 ರನ್ ಗಳಿಸಿದರು. ನಂತರ ಬಂದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಟಲು ವಿಫಲರಾದರು. ಕೊನೆಯಲ್ಲಿ ಜಾಕರ್ ಅಲಿ 24 ರನ್ ಗಳಿಸಿದರೆ, ರಕಿಬುಲ್ ಹಸನ್ 14 ರನ್ ಗಳಿಸಿದರು.

Asian Games 2023 Cricket: India Beat Bangladesh By 9 Wickets And Entered To The Final

ಭಾರತದ ಪರ ಬೌಲಿಂಗ್‌ನಲ್ಲಿ ಸಾಯಿ ಕಿಶೋರ್ 4 ಓವರ್‌ಗಳಲ್ಲಿ 12 ರನ್ ನೀಡಿ 3 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ 15 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ, ಅರ್ಶ್‌ದೀಪ್ ಸಿಂಗ್, ತಿಲಕ್ ವರ್ಮಾ, ರವಿ ಬಿಷ್ಣೋಯ್ ಮತ್ತು ಶಹಬಾಜ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಬಾಂಗ್ಲಾದೇಶ ನೀಡಿದ್ದ 96 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಕಳೆದ ಪಂದ್ಯದ ಶತಕವೀರ ಯಶಸ್ವಿ ಜೈಸ್ವಾಲ್ ಸೊನ್ನೆಗೆ ಔಟಾದರು. ನಂತರ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಮುರಿಯದ ಎರಡನೇ ವಿಕೆಟ್‌ಗೆ 97 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು.

ನಾಯಕ ರುತುರಾಜ್ ಗಾಯಕ್ವಾಡ್ 26 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 40 ರನ್ ಗಳಿಸಿದರೆ, ತಿಲಕ್ ವರ್ಮಾ 26 ಎಸೆತಗಳನ್ನು ಎದುರಿಸಿ 2 ಬೌಂಡರಿ ಮತ್ತು 6 ಭರ್ಜರಿ ಸಿಕ್ಸರ್ ನೆರವಿನಿಂದ 55 ರನ್ ಬಾರಿಸಿದರು.

Story first published: Friday, October 6, 2023, 9:22 [IST]
Other articles published on Oct 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+