Asian Games 2023: ಭಾರತ vs ಅಫ್ಘಾನಿಸ್ತಾನ ಫೈನಲ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್
ಶನಿವಾರ, ಅಕ್ಟೋಬರ್ 7ರಂದು 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳು ಚಿನ್ನದ ಪದಕಕ್ಕಾಗಿ ಪೈಪೋಟಿ ನಡೆಸಲಿವೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಗುಲ್ಬದಿನ್ ನೈಬ್ ನಾಯಕತ್ವದ ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಫೈನಲ್ ಪಂದ್ಯವು ಈ ದಿನದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡವು ಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸುತ್ತಿದೆ.
ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಭಾರತ ತಂಡವು ಐತಿಹಾಸಿಕ ಚಿನ್ನದ ಪದಕವನ್ನು ಖಚಿತಪಡಿಸಿಕೊಳ್ಳಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್‌ಗೆ ಅನಿರೀಕ್ಷಿತವಾಗಿ ಲಗ್ಗೆ ಇಟ್ಟಿರುವ ಅಫ್ಘಾನಿಸ್ತಾನ ಕೂಡ ಮೊದಲ ಚಿನ್ನವನ್ನು ತನ್ನದಾಗಿಸಿಕೊಳ್ಳಲು ಕಾಯುತ್ತಿದೆ.

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ಟಿ20 ಮುಖಾಮುಖಿಗಳಲ್ಲಿ ಒಟ್ಟು ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಸಂದರ್ಭದಲ್ಲೂ ಭಾರತ ತಂಡ ವಿಜಯಶಾಲಿಯಾಗುತ್ತಿದೆ. ಈ ದಾಖಲೆಯು ಫೈನಲ್ ಪಂದ್ಯಕ್ಕೆ ರೋಚಕತೆಯ ಆಯಾಮವನ್ನು ಸೇರಿಸಲಿದ್ದು, ಮತ್ತೊಮ್ಮೆ ಅಪಘಾನಿಸ್ತಾನವನ್ನು ಹೆಡೆಮುರಿ ಕಟ್ಟಲು ಎದುರು ನೋಡುತ್ತಿದೆ.
ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿದರೆ, ಅಫ್ಘಾನಿಸ್ತಾನವು ಬಲಿಷ್ಠ ಪಾಕಿಸ್ತಾನ ತಂಡವನ್ನು ಸೋಲಿಸಿದೆ.
ಭಾರತ ತಂಡವು ನಾಯಕ ರುತುರಾಜ್ ಗಾಯಕ್ವಾಡ್, ರಿಂಕು ಸಿಂಗ್, ತಿಲಕ್ ವರ್ಮಾ ಮುಂತಾದ ಐಪಿಎಲ್ ಸ್ಟಾರ್‌ಗಳಿಂದ ತುಂಬಿದೆ. ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದ್ದರೂ, ಅಫ್ಘಾನಿಸ್ತಾನ ತಂಡವನ್ನು ಲಘುವಾಗಿ ಪರಿಗಣಿಸುವುದಿಲ್ಲ.
ಭಾರತ vs ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್(ನಾಯಕ), ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅರ್ಶ್‌ದೀಪ್ ಸಿಂಗ್.
ಅಫ್ಘಾನಿಸ್ತಾನ ತಂಡ: ಜುಬೈದ್ ಅಕ್ಬರಿ, ಮೊಹಮ್ಮದ್ ಶಹಜಾದ್(ವಿಕೆಟ್ ಕೀಪರ್), ನೂರ್ ಅಲಿ ಝದ್ರಾನ್, ಶಾಹಿದುಲ್ಲಾ ಕಮಾಲ್, ಅಫ್ಸರ್ ಝಜೈ, ಕರೀಂ ಜನತ್, ಗುಲ್ಬದಿನ್ ನೈಬ್(ನಾಯಕ), ಶರಫುದ್ದೀನ್ ಅಶ್ರಫ್, ಖೈಸ್ ಅಹ್ಮದ್, ಫರೀದ್ ಅಹ್ಮದ್ ಮಲಿಕ್, ಜಹೀರ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications