For Quick Alerts
ALLOW NOTIFICATIONS  
For Daily Alerts
 

Asian Games Cricket: ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ: ನೇಪಾಳ ತಂಡಕ್ಕೆ ಬೃಹತ್ ಗುರಿ ನೀಡಿದ ಭಾರತ

ಮಂಗಳವಾರ, ಅಕ್ಟೋಬರ್ 3ರಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ ಉತ್ತಮ ಮೊತ್ತ ಕಲೆಹಾಕಿದೆ.

Asian Games 2023 Cricket: Nepal Need 203 Runs To Win Against India In The Quarter-final

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಈ ಮೂಲಕ ನೇಪಾಳ ತಂಡಕ್ಕೆ 203 ರನ್‌ಗಳ ಬೃಹತ್ ಗುರಿ ನೀಡಲಾಗಿದೆ.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‌ಗೆ 9.5 ಓವರ್‌ಗಳಲ್ಲಿ 103 ರನ್‌ಗಳ ಜೊತೆಯಾಟದ ಮೂಲಕ ಉತ್ತಮ ಆರಂಭ ಒದಗಿಸಿದರು.

ಈ ವೇಳೆ 23 ಎಸೆತಗಳಲ್ಲಿ 4 ಬೌಂಡರಿ ಸಮೇತ 25 ರನ್ ಗಳಿಸಿದ್ದ ರುತುರಾಜ್ ಗಾಯಕ್ವಾಡ್ ವಿಕೆಟ್ ಒಪ್ಪಿಸಿದರು. ನಂತರ ಬಂದ ತಿಲಕ್ ವರ್ಮಾ 2 ರನ್, ಜಿತೇಶ್ ಶರ್ಮಾ 5 ರನ್ ಗಳಿಸಿ ಬೇಗನೇ ಔಟಾದರು.

ಆ ಬಳಿಕ ಜೊತೆಗೂಡಿದ ಶಿವಂ ದುಬೆ ನಿಧಾನಗತಿ ಬ್ಯಾಟಿಂಗ್ ಆರಂಭಿಸಿದರು. ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 49 ಎಸೆತಗಳನ್ನು ಎದುರಿಸಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ 100 ರನ್ ಬಾರಿಸಿ ಔಟಾದರು.

ಕೊನೆಯಲ್ಲಿ ಶಿವಂ ದುಬೆ ಮತ್ತು ರಿಂಕು ಸಿಂಗ್ ಹೊಡಿಬಡಿ ಆಟ ಪ್ರದರ್ಶಿಸಿದರು. ಶಿವಂ ದುಬೆ 19 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 25 ರನ್ ಗಳಿಸಿದರೆ, ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ 15 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಸಹಾಯದಿಂದ 37 ರನ್ ಬಾರಿಸಿದರು. ಇವರಿಬ್ಬರು ಮುರಿಯದ 5ನೇ ವಿಕೆಟ್‌ಗೆ 22 ಎಸೆತಗಳಲ್ಲಿ 52 ರನ್‌ಗಳ ಜೊತೆಯಾಟವಾಡಿದರು.

ಇನ್ನು ಬೌಲಿಂಗ್‌ನಲ್ಲಿ ನೇಪಾಳ ತಂಡದ ಪರ ದೀಪೆಂದ್ರ್ ಸಿಂಗ್ ಐರಿ 4 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರೆ, ಸೋಂಪಾಲ್ ಕಾಮಿ 4 ಓವರ್‌ಗಳಲ್ಲಿ 38 ರನ್ ನೀಡಿ 1 ವಿಕೆಟ್ ಮತ್ತು ಸಂದೀಪ್ ಲ್ಯಾಮಿಶ್ಚಾನೆ 3 ಓವರ್‌ಗಳಲ್ಲಿ 28 ರನ್ ನೀಡಿ 1 ವಿಕೆಟ್ ಕಬಳಿಸಿದರು.

Story first published: Tuesday, October 3, 2023, 8:21 [IST]
Other articles published on Oct 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+