For Quick Alerts
ALLOW NOTIFICATIONS  
For Daily Alerts
 

Asian Games 2023: ಏಷ್ಯನ್ ಗೇಮ್ಸ್‌ಗಾಗಿ ಭಾರತದ ಪುರುಷ, ಮಹಿಳಾ ಅಧಿಕೃತ ತಂಡ ಪ್ರಕಟ; ಒಂದೆರಡು ಬದಲಾವಣೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲಿರುವ ಭಾರತೀಯ ಪುರುಷ ಮತ್ತು ಮಹಿಳಾ ಕ್ರಿಕೆಟ್ ರಾಷ್ಟ್ರೀಯ ತಂಡಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ಪ್ರಕಟಿಸಿದೆ.

ಮುಂಬರುವ 2023ರ ಏಕದಿನ ವಿಶ್ವಕಪ್‌ಗೆ ಹಿರಿಯರ ಪುರುಷ ತಂಡವು ತಯಾರಿಯಲ್ಲಿ ನಿರತರಾಗಿದ್ದರೆ, ಎರಡನೇ ದರ್ಜೆಯ ತಂಡವನ್ನು ಏಷ್ಯನ್ ಗೇಮ್ಸ್‌ಗಾಗಿ ಆಯ್ಕೆ ಮಾಡಲಾಗಿದೆ.

ಆದರೆ, ಭಾರತೀಯ ಮಹಿಳಾ ತಂಡಕ್ಕೆ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಪೂರ್ಣ ಸಾಮರ್ಥ್ಯದ ತಂಡವನ್ನು ಪ್ರಕಟ ಮಾಡಲಾಗಿದೆ.

asian-games-2023

ತಂಡಗಳ ಕುರಿತಾಗಿ, ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅನೇಕ ಯುವ ಆಟಗಾರರು ಬಹುರಾಷ್ಟ್ರೀಯ ಕ್ರೀಡಾಕೂಟ ವೇದಿಕೆಯಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸುವ ಪ್ರಯತ್ನಕ್ಕಾಗಿ ಕರೆ ಪಡೆದಿದ್ದಾರೆ.

ಸ್ಟಾರ್ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಪುರುಷರ ತಂಡಕ್ಕೆ ನಾಯಕನ ಜವಾಬ್ದಾರಿ ನೀಡಲಾಗಿದೆ. ಆದರೆ ಕೆಲವು ಗಾಯಗೊಂಡ ಮತ್ತು ಅಲಭ್ಯ ಆಟಗಾರರಿಗೆ ಬದಲಿ ಆಟಗಾರರನ್ನು ಸೇರಿಸಲಾಗಿದೆ. 15 ಸದಸ್ಯರ ತಂಡಕ್ಕೆ ಹೆಚ್ಚುವರಿಯಾಗಿ ನಾಲ್ವರು ಸ್ಟ್ಯಾಂಡ್‌ಬೈ ಆಟಗಾರರನ್ನು ಬಿಸಿಸಿಐ ಪ್ರಕಟಿಸಿದೆ.

ಭಾರತ ಮಹಿಳಾ ತಂಡಕ್ಕೆ ಹರ್ಲೀನ್ ಡಿಯೋಲ್, ಸೈಕಾ ಇಶಾಕ್, ಕಶ್ವೀ ಗೌತಮ್ ಮತ್ತು ಸ್ನೇಹ್ ರಾಣಾ ಅವರಂತಹ ಆಟಗಾರ್ತಿಯರು ಬ್ಯಾಕಪ್‌ಗಳಾಗಿದ್ದಾರೆ. ಇನ್ನು ಗಾಯಗೊಂಡಿರುವ ಅಂಜಲಿ ಸರ್ವಾಣಿ ಅವರ ಸ್ಥಾನಕ್ಕೆ ವೇಗಿ ಪೂಜಾ ವಸ್ತ್ರಾಕರ್ ಅವರನ್ನು ಆಯ್ಕೆ ಮಾಡಲಾಗಿದ್ದರೆ

asian-games-2023

ಇನ್ನು ಭಾರತ ಪುರುಷ ತಂಡಕ್ಕೆ ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ ಮತ್ತು ಸಾಯಿ ಸುದರ್ಶನ್ ಅವರು ಮೀಸಲು ಆಟಗಾರರಾಗಿ ತಂಡದೊಂದಿಗೆ ಪ್ರಯಾಣಿಸಲಿದ್ದಾರೆ.

ಪುರುಷರ ತಂಡದಲ್ಲಿ ಶಿವಂ ಮಾವಿ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬೆನ್ನುನೋವಿನಿಂದ ಬಳಲುತ್ತಿರುವ ಕಾರಣ ಅವರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಅವರ ಬದಲಾಗಿ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಲಾಗಿದೆ.

ಹೆಚ್ಚು ಕಡಿಮೆ, ಈ ಮೊದಲು ಘೋಷಿಸಿದ ತಂಡಗಳೇ ಇರಲಿದ್ದು, ಗಾಯಾಳು ಮತ್ತು ಅಲಭ್ಯ ಆಟಗಾರರಿಗೆ ಮಾತ್ರ ಸೂಕ್ತ ಬದಲಿ ಆಯ್ಕೆ ಮಾಡಲಾಗಿದೆ. ಇನ್ನು ಮಹಿಳಾ ತಂಡಗಳ ಸ್ಪರ್ಧೆಯು ಸೆಪ್ಟೆಂಬರ್ 19ರಿಂದ ಸೆಪ್ಟೆಂಬರ್ 28ರ ನಡುವೆ ನಿಗದಿಪಡಿಸಲಾಗಿದ್ದರೆ, ಪುರುಷರ ಸ್ಪರ್ಧೆಯು ಸೆಪ್ಟೆಂಬರ್ 28ರಿಂದ ಅಕ್ಟೋಬರ್ 8ರವರೆಗೆ ನಡೆಯಲಿದೆ.

ಗಮನಾರ್ಹವಾಗಿ, ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಟಿ20 ಸ್ವರೂಪದಲ್ಲಿ ಆಡಲಾಗುತ್ತದೆ ಮತ್ತು ಐಸಿಸಿ ನಿಯಮಗಳ ಪ್ರಕಾರ, ಅಂತಾರಾಷ್ಟ್ರೀಯ ಮನ್ನಣೆಯನ್ನು ಪಡೆದಿರುತ್ತದೆ.

2023ರ ಏಷ್ಯನ್ ಗೇಮ್ಸ್‌ಗಾಗಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು
ಪುರುಷರ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ದುಬೆ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಆಕಾಶ್ ದೀಪ್.

ಮೀಸಲು ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ದೇವಿಕಾ ವೈದ್ಯ, ಟಿಟಾಸ್ ಸಧು, ರಾಜೇಶ್ವರಿ ಗಾಯಕ್ವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ, ಪೂಜಾ ವಸ್ತ್ರಾಕರ್.

ಮೀಸಲು ಆಟಗಾರ್ತಿಯರು: ಹರ್ಲೀನ್ ಡಿಯೋಲ್, ಕಾಶ್ವೀ ಗೌತಮ್, ಸ್ನೇಹ್ ರಾಣಾ, ಸೈಕಾ ಇಶಾಕ್.

Story first published: Sunday, September 17, 2023, 9:10 [IST]
Other articles published on Sep 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+