ಸೋಮವಾರ, ಸೆಪ್ಟೆಂಬರ್ 25ರಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ 2023ರ ಏಷ್ಯನ್ ಗೇಮ್ಸ್‌ನ ಮಹಿಳಾ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಚಿನ್ನದ ಪದಕಕ್ಕಾಗಿ ಸೆಣಸಾಡಲಿವೆ.
ಭಾನುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಬಾಂಗ್ಲಾದೇಶ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದರೆ, ಇನ್ನೊಂದು ಸೆಮಿಫೈನಲ್‌ನಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನ ಮಹಿಳಾ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಮಹಿಳಾ ತಂಡ 17.5 ಓವರ್‌ಗಳಲ್ಲಿ ಕೇವಲ 51 ರನ್‌ಗಳಿಗೆ ಆಲೌಟ್ ಆಯಿತು. 52 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಶ್ರೀಲಂಕಾ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 75 ರನ್ ಗಳಿಸಿತು. 76 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ 16.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿ ಗೆಲುವಿನ ಗುರಿ ತಲುಪಿತು.
ಇನ್ನು ಐಸಿಸಿಯಿಂದ ಪಡೆದ ಎರಡು ಪಂದ್ಯಗಳ ಅಮಾನತು ಶಿಕ್ಷೆ ಅನುಭವಿಸಿದ ನಂತರ, ಭಾರತದ ಖಾಯಂ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯಕ್ಕೆ ಲಭ್ಯವಿರುತ್ತಾರೆ ಎಂಬುದು ಗಮನಾರ್ಹ ಸಂಗತಿ.
ದಿನಾಂಕ ಮತ್ತು ಸ್ಥಳ: ಏಷ್ಯನ್ ಗೇಮ್ಸ್ 2023ರ ಭಾರತ ಮಹಿಳಾ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯ ಸೋಮವಾರ, ಸೆಪ್ಟೆಂಬರ್ 25ರಂದು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಏಷ್ಯನ್ ಗೇಮ್ಸ್ 2023ರ ಭಾರತ ಮಹಿಳಾ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯ ಬೆಳಗ್ಗೆ 11.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮ್ ವಿವರ
ಏಷ್ಯನ್ ಗೇಮ್ಸ್ 2023ರ ಭಾರತ ಮಹಿಳಾ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯದ ನೇರಪ್ರಸಾರವು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ.
ಏಷ್ಯನ್ ಗೇಮ್ಸ್ 2023ರ ಭಾರತ ಮಹಿಳಾ ಮತ್ತು ಶ್ರೀಲಂಕಾ ಮಹಿಳಾ ಕ್ರಿಕೆಟ್ ಫೈನಲ್ ಪಂದ್ಯವನ್ನು ಆನ್‌ಲೈನ್‌ನಲ್ಲಿ SonyLiv ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ದೇವಿಕಾ ವೈದ್ಯ, ಪೂಜಾ ವಸ್ತ್ರಾಕರ್, ಟಿಟಾಸ್ ಸಧು, ರಾಜೇಶ್ವರಿ ಗಾಯಕ್ವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ.
ಶ್ರೀಲಂಕಾ: ಚಾಮರಿ ಅಥಾಪತ್ತು(ನಾಯಕಿ), ಅನುಷ್ಕಾ ಸಂಜೀವನಿ(ವಿಕೆಟ್ ಕೀಪರ್), ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಹಾಸಿನಿ ಪೆರೇರಾ, ನೀಲಾಕ್ಷಿ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇನೋಕಾ ರಣವೀರ, ಸುಗಂದಿಕಾ ಕುಮಾರಿ, ಉದೇಶಿಕಾ ಪ್ರಬೋಧನಿ, ಇನೋಶಿ ಪ್ರಿಯದರ್ಶನಿ, ಅಚಿನಿ ಕುಲಸೂರಿಯಾ, ಓಷದಿ ರಣಸಿಂಗ್, ಇಮೇಶಾ ದುಲಾನಿ, ಕೌಶಾನಿ ನುತ್ಯಂಗನ.