For Quick Alerts
ALLOW NOTIFICATIONS  
For Daily Alerts
 

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಪ್ರಕಟ: ಋತುರಾಜ್ ನೇತೃತ್ವದಲ್ಲಿ ಹೊಸ ತಂಡ!!

ಚೀನಾಗ ಹಾಂಗ್ಜೂನಲ್ಲಿ ಈ ಬಾರಿ 19ನೇ ಏಷ್ಯನ್ ಗೇಮ್ಸ್ ಆಯೋಜನೆಯಾಗಲಿದೆ. ಈ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕೂಡ ಆಯೋಜನೆಯಾಗಲಿದ್ದು ಭಾರತ ತಂಡ ಕೂಡ ಭಾಗವಹಿಸುತ್ತಿದೆ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಭಾರತ ತಂಡವನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದ್ದು ಋತುರಾಜ್ ಗಾಯಕ್ವಾಡ್ ನೇತೃತ್ವದ 15 ಸದಸ್ಯರ ಪಡೆಯನ್ನು ಘೋಷಣೆ ಮಾಡಲಾಗಿದೆ.

ಏಷ್ಯನ್ ಗೇಮ್ಸ್ ಅವಧಿಯಲ್ಲಿ ವಿಶ್ವಕಪ್ ಕ್ರಿಕೆಟ್ ಸನಿಹದಲ್ಲಿರುವ ಕಾರಣ ಅಲ್ಲಿ ಭಾಗವಹಿಸುವ ಆಟಗಾರರಿಗೆ ಪೂರ್ವಸಿದ್ಧತೆಗೆ ಅವಕಾಶ ನೀಡಲಾಗಿದ್ದು ಭಾರತ ತನ್ನ ಈ ಕ್ರೀಡಾಕೂಟಕ್ಕೆ ಹೊಸ ಆಟಗಾರರನ್ನು ಹೆಸರಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಟಿ20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರಿವ ಆಟಗಾರರಿಗೆ ಈ ಟೂರ್ನಿಯಲ್ಲಿ ಅವಕಾಶ ದೊರೆತಿದೆ. ಹೀಗಾಗಿ ಈ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

Asian Games 2023: Ruturaj Gaikwad led Indian squad announced many young stars get chance

ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಮಿಂಚಿರುವ ಯುವ ಪ್ರತಿಭೆಗಳಿಗೆ ಈ ಟೂರ್ನಿ ಅದ್ಭುತ ಅವಕಾಶವಾಗಿದ್ದು ಪ್ರತಿಭಾನ್ವಿತ ಕ್ರಿಕೆಟಿಗರು ಈ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಋತುರಾಜ್ ಗಾಯಕ್ವಾಡ್‌ಗೆ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ದೊರೆತಿದ್ದು ರಿಂಕು ಸಿಂಗ್, ಜಿತೇಶ್ ಶರ್ಮಾ ಅವರಂತಾ ಪ್ರತಿಭೆಗಳಿಗೂ ಸ್ಥಾನ ನೀಡಲಾಗಿದೆ. ಈ ಇಬ್ಬರು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಇದಕ್ಕೆ ಪ್ರತಿಫಲವಾಗಿ ರಾಷ್ಟ್ರೀಯ ತಂಡದಲ್ಲಿ ಗೌರವ ದೊರೆತಂತಾಗಿದೆ.

ರಿಂಕು ಸಿಂಗ್ ಈ ಬಾರಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಿದ 14 ಪಂದ್ಯಗಳಿಂದ 474 ರನ್ ಬಾರಿಸುವ ಮೂಲಕ ತಮ್ಮ ಅದ್ಭುತ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರೂ ಅವರ ಸ್ಥಿರ ಪ್ರದರ್ಶನ ಅವರಿಗೆ ಏಷ್ಯನ್ ಗೇಮ್ಸ್ ತಂಡದಲ್ಲಿ ಸ್ಥಾನ ಸಿಗುವಂತೆ ಮಾಡಿದೆ.

ಪಂಜಾಬ್ ಕಿಂಗ್ಸ್‌ನ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಕೂಡ ಐಪಿಎಲ್‌ನಲ್ಲಿ ಅವರ ಭರ್ಜರಿ ಪ್ರದರ್ಶನದ ನಂತರ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರು ಕಳೆದ ಐಪಿಎಲ್‌ನಲ್ಲಿ 309 ರನ್ ಗಳಿಸಿದ್ದು ಮ್ಯಾಚ್ ಫಿನಿಷ್ ಮಾಡುವ ವಿಶೇಷ ಸಾಮರ್ಥ್ಯ ಅವರಿಗೆ ತಂಡದಲ್ಲಿ ಈ ಅವಕಾಶ ನೀಡಿದೆ.

ಇನ್ನುಳಿದಂತೆ ತಂಡದಲ್ಲಿ ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಅವಕಾಶ ಪಡೆದುಕೊಂಡಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಐಸಿಸಿ ವಿಶ್ವಕಪ್ 2023ರ ಸಿದ್ಧತೆಯ ಕಾರಣದಿಂದಾಗಿ ಈ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಏಷ್ಯನ್ ಗೇಮ್ಸ್‌ ಯುವ ಆಟಗಾರರಿಗೆ ತಮ್ಮ ಛಾಪು ಮೂಡಿಸಲು ಮತ್ತು ರಾಷ್ಟ್ರೀಯ ತಂಡದಲ್ಲಿ ಮಿಂಚಲು ಅತ್ಯುತ್ತಮ ಅವಕಾಶವೊಂದನ್ನು ನೀಡಿದಂತಾಗಿದೆ.

ಭಾರತ ತಂಡ ಹೀಗಿದೆ: ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್)
ಸ್ಟ್ಯಾಂಡ್ ಬೈ ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

Story first published: Saturday, July 15, 2023, 9:13 [IST]
Other articles published on Jul 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+