* ವಿಶ್ವಕಪ್ ವಿಜೇತ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್‌ಗೆ ನೀಡಿರುವ ನಿವೃತ್ತಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಈ ಮೂಲಕ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಬೆನ್ ಸ್ಟೋಕ್ಸ್ ಆಡುವುದು ಖಚಿತವಾಗಿದೆ. ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದು ಈ ಸರಣಿಗೆ ಆಯ್ಕೆ ಮಾಡಿರುವ ತಂಡದಲ್ಲಿ ಬೆನ್ ಸ್ಟೋಕ್ಸ್ ಸ್ಥಾನ ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್ ತಂಡ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ 15 ಆಟಗಾರರ ಪಡೆಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ತಂಡದಲ್ಲಿ ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕನಾಗಿರುವ ಬೆನ್ ಸ್ಟೋಕ್ಸ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬೆನ್ ಸ್ಟೋಕ್ಸ್ ತಮ್ಮ ನಿವೃತ್ತಿಯಿಂದ ಅಧಿಕೃತವಾಗಿ ಹೊರಬಂದಂತಾಗಿದೆ.
* ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ಅವರು ಬುಧವಾರ, ಆಗಸ್ಟ್ 16ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಕೆಲವೇ ದಿನಗಳಲ್ಲಿ 2023ರ ಏಷ್ಯಾ ಕಪ್ ಮತ್ತು ವಿಶ್ವಕಪ್ ಪಂದ್ಯಾವಳಿಗಳು ಆರಂಭವಾಗುವ ಮೊದಲೇ 38 ವರ್ಷದ ಎಡಗೈ ವೇಗಿ ಅತ್ಯುನ್ನತ ಮಟ್ಟದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದರು. ಆದರೆ, ವಹಾಬ್ ರಿಯಾಜ್ ಅವರು ವಿಶ್ವದಾದ್ಯಂತ ಫ್ರಾಂಚೈಸ್ ಆಧಾರಿತ ಕ್ರಿಕೆಟ್ ಲೀಗ್ ಆಡವುದನ್ನು ಮುಂದುವರಿಸುತ್ತಾರೆ.

* ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ರವಿಶಾಸ್ತ್ರಿ, 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಎಡಗೈ ಬ್ಯಾಟರ್‌ಗಳ ಅಗತ್ಯವಿದೆ ಮತ್ತು ಇದು ತಂಡದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ತರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಖಚಿತವಾಗಿ ಆಡಲಿದ್ದು, ಈ ಬ್ಯಾಟರ್‌ಗಳನ್ನು ಹೊರತುಪಡಿಸಿ ಇಶಾನ್ ಕಿಶನ್, ತಿಲಕ್ ವರ್ಮಾ ಮತ್ತು ರವೀಂದ್ರ ಜಡೇಜಾ ಅವರಂತಹ ಎಡಗೈ ಆಟಗಾರರನ್ನು ಸೇರಿಸಿಕೊಳ್ಳಬೇಕು ಎಂದು ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ತಿಳಿಸಿದರು.
* ಏಕದಿನ ವಿಶ್ವಕಪ್‌ಗೆ ಭಾರತದ ಅತ್ಯುತ್ತಮ ತಂಡದ ಬಗ್ಗೆ ವ್ಯಾಪಕ ಚರ್ಚೆಗಳ ನಡುವೆಯೇ, ಸ್ಟಾರ್ ಸ್ಪೋರ್ಟ್ಸ್ ತಜ್ಞರ ಸಮಿತಿಯು ಆಗಸ್ಟ್ 30ರಿಂದ ಪ್ರಾರಂಭವಾಗುವ 2023ರ ಏಷ್ಯಾ ಕಪ್ ಪಂದ್ಯಾವಳಿಗಾಗಿ 15 ಸದಸ್ಯರ ತಮ್ಮ ತಂಡವನ್ನು ಆಯ್ಕೆ ಮಾಡಿದೆ. ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನೊಳಗೊಂಡ ತಜ್ಞರ ಸಮಿತಿಯು ತಿಲಕ್ ವರ್ಮಾ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದೆ. ಗಮನಾರ್ಹವಾಗಿ, ತಿಲಕ್ ವರ್ಮಾ ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿದರು. ಆದರೆ, ಇನ್ನೂ ಅವರು ಚೊಚ್ಚಲ ಏಕದಿನ ಪಂದ್ಯವನ್ನು ಆಡಿಲ್ಲ. ತಿಲಕ್ ವರ್ಮಾ ಹೊರತುಪಡಿಸಿ, ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಆಯ್ಕೆಯಾಗಿದ್ದರೆ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್ ವಿಭಾಗದಲ್ಲಿದ್ದಾರೆ.
* ಟೀಮ್ ಇಂಡಿಯಾದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಗಂಭೀರ ಅಫಘಾತಕ್ಕೆ ಒಳಗಾಗಿ ಗಾಯಕ್ಕೆ ತುತ್ತಾದ ಬಳಿಕ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಪ್ರಸ್ತುತ ಎನ್‌ಸಿಎನಲ್ಲಿರುವ ರಿಷಭ್ ಪಂತ್ ಚೇತರಿಕೆಯ ಹಾದಿ ಅದ್ಭುತವಾಗಿದೆ. ಇದೀಗ ಟೀಮ್ ಇಂಡಿಯಾದ ಆಟಗಾರ ಪಂತ್ ಮತ್ತೆ ಮೈದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಸಂತಸ ಮೂಡಿಸಿದ್ದಾರೆ.
* ಇತ್ತೀಚಿನ ಸಂದರ್ಶನವೊಂದರಲ್ಲಿ ಕಪಿಲ್ ದೇವ್ ಅವರು ಬ್ಯಾಜ್‌ಬಾಲ್ ಆಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಮುಕ್ತಾಯಗೊಂಡ ಆಶಸ್ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್‌ನ ಪ್ರದರ್ಶನವನ್ನು ಆನಂದಿಸಿದೆ ಎಂದು ಹೇಳಿದರು. ಹರಿಯಾಣ ಮೂಲದ ಭಾರತೀಯ ಮಾಜಿ ನಾಯಕ ಕಪಿಲ್ ದೇವ್ ಅವರು ಹಾಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾರಿಗೆ ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಿರಲು ಒತ್ತಾಯಿಸಿದ್ದಾರೆ ಮತ್ತು ಡ್ರಾ ಮಾಡಿಕೊಳ್ಳಲು ಆಡುವ ಬದಲು, ಗೆಲ್ಲುವ ಉದ್ದೇಶಕ್ಕಾಗಿ ಆಡುವಂತೆ ತಂಡಕ್ಕೆ ತಿಳಿಸಿದರು.
* ನೂತನ ಐಸಿಸಿ ಶ್ರೇಯಾಂಖಪಟ್ಟಿ ಬಿಡುಗಡೆಯಾಗಿದ್ದು ಭಾರತೀಯ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಅದ್ಭುತ ಏರಿಕೆ ಕಂಡಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶುಬ್ಮನ್ ಗಿಲ್ ಹೇಳಿಕೊಳ್ಳುವಂತಾ ಯಶಸ್ಸು ಸಾಧಿಸಲು ಸಾಧ್ಯವಗಿರಲಿಲ್ಲ. ಹಾಗಿದ್ದರೂ ಟಿ20 ಶ್ರೇಯಾಂಕಪಟ್ಟಿಯಲ್ಲಿ ಶುಬ್ಮನ್ ಗಿಲ್ ಬರೊಬ್ಬರಿ 43 ಸ್ಥಾನಗಳ ಏರಿಕೆ ಸಾಧಿಸಿದ್ದಾರೆ. ಈ ಮೂಲಕ ತಮ್ಮ ವೃತ್ತಿಜೀವನದಲ್ಲಿ ಅತ್ಯುತ್ತಮ 25ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
* ಭಾರತ ಹಾಗೂ ಐರ್ಲೆಂಡ್ ತಂಡಗಳ ಮುಖಾಮುಖಿಗೆ ಕ್ಷಣಗಣನೆ ಆರಂಭವಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಆಗಸ್ಟ್ 18ರಂದು ಆರಂಭವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಆತಿಥೇಯ ಐರ್ಲೆಂಡ್ ತಂಡದ ಸ್ಪಿನ್ನರ್ ಬೆನ್ ವೈಟ್ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದು ಪ್ರಸ್ತುತ ಐರ್ಲೆಂಡ್ ತಂಡ ಬಲಿಷ್ಠವಾಗಿದ್ದು ಬಲಿಷ್ಠ ಐರ್ಲೆಂಡ್ ತಂಡ ಭಾರತವನ್ನು ಮಣಿಸಲು ಶಕ್ತವಾಗಿದೆ ಎಂದಿದ್ದಾರೆ.