ಅಫ್ಘಾನಿಸ್ತಾನ ವಿರುದ್ಧದ ODI ಸರಣಿಯಿಂದ ಹಿಂದೆ ಸರಿದು 30 ಅಂಕ ಕಳೆದುಕೊಂಡ ಆಸೀಸ್; ಕಾರಣ?

ಮಹಿಳೆಯರ ಮತ್ತು ಬಾಲಕಿಯರ ಹಕ್ಕುಗಳನ್ನು ಮತ್ತಷ್ಟು ನಿರ್ಬಂಧಿಸುವ ತಾಲಿಬಾನ್ ಕ್ರಮಗಳನ್ನು ಖಂಡಿಸಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಬೇಕಿದ್ದ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕದಿನ ಸರಣಿಯಿಂದ ಕ್ರಿಕೆಟ್ ಆಸ್ಟ್ರೇಲಿಯಾ ಗುರುವಾರ ಹಿಂದೆ ಸರಿದಿದೆ.
ಆಸ್ಟ್ರೇಲಿಯಾ ಹಿರಿಯ ಪುರುಷರ ತಂಡವು ಭಾರತಕ್ಕೆ ಟೆಸ್ಟ್ ಪ್ರವಾಸ ಕೈಗೊಂಡ ನಂತರ ಮಾರ್ಚ್‌ನಲ್ಲಿ ಐಸಿಸಿ ಸೂಪರ್ ಲೀಗ್‌ನ ಭಾಗವಾಗಿ ಮೂರು ಪಂದ್ಯಗಳಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಬೇಕಿತ್ತು. ಆದರೆ ಆಸ್ಟ್ರೇಲಿಯನ್ ಸರ್ಕಾರ ಸೇರಿದಂತೆ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯ ನಂತರ ಅಫ್ಘಾನ್ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.
ಕ್ರಿಕೆಟ್ ಆಸ್ಟ್ರೇಲಿಯಾ ಸರಣಿಯಿಂದ ಹಿಂದೆ ಸರಿಯುವ ನಿರ್ಧಾರದ ನಂತರ, ಐಸಿಸಿ ಏಕದಿನ ಸೂಪರ್ ಲೀಗ್‌ನ ಎಲ್ಲಾ 30 ಅಂಕಗಳು ಅಫ್ಘಾನಿಸ್ತಾನ ತಂಡಕ್ಕೆ ಹೋಗಲಿವೆ.
ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ನಮ್ಮ ಕ್ರಿಕೆಟ್ ಆಡಳಿತ ಮಂಡಳಿಯು ಏಕೆ ಸರಣಿಯಿಂದ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದೆ ಎನ್ನುವುದನ್ನು ತಿಳಿಸಿದೆ. ಅಫ್ಘಾನಿಸ್ತಾನ ಸೇರಿದಂತೆ ಜಗತ್ತಿನಾದ್ಯಂತ ಪುರುಷರು ಮತ್ತು ಮಹಿಳೆಯರಿಗಾಗಿ ಕ್ರಿಕೆಟ್ ಆಟವನ್ನು ಬೆಳೆಸಲು ಬದ್ಧರಾಗಿದ್ದೇವೆ ಎಂದು ಹೇಳಿದೆ.
"ಮಹಿಳೆಯರು ಹಾಗೂ ಬಾಲಕಿಯರ ಶಿಕ್ಷಣ ಮತ್ತು ಉದ್ಯೋಗಾವಕಾಶಗಳು, ಉದ್ಯಾನವನಗಳು, ಜಿಮ್ ಪ್ರವೇಶಿಸುವುದಕ್ಕೆ ತಾಲಿಬಾನ್ ಇತ್ತೀಚಿಗೆ ನಿರ್ಬಂಧ ವಿಧಿಸಿದ ನಂತರ ಏಕದಿನ ಸರಣಿಯಿಂದ ಹಿಂದೆ ಸರಿಯುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾದ ಹೇಳಿಕೆಯಲ್ಲಿ ತಿಳಿಸಿದೆ.
"ನಾವು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ದೇಶದಲ್ಲಿ ಮಹಿಳೆಯರು ಮತ್ತು ಬಾಲಕಿಯರ ಪರಿಸ್ಥಿತಿಗಳ ಸುಧಾರಣೆ ನಿರೀಕ್ಷೆಯಲ್ಲಿದ್ದೇವೆ," ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಡಳಿತ ಮಂಡಳಿ ಹೇಳಿದೆ.
ವಿಶ್ವಕಪ್ ಅರ್ಹತೆ ಗಿಟ್ಟಿಸುವುದಕ್ಕಾಗಿ ನಡೆಯಲಿರುವ ಸರಣಿಯಲ್ಲಿ ಆಸ್ಟ್ರೇಲಿಯಾ 30 ಸ್ಪರ್ಧಾತ್ಮಕ ಅಂಕಗಳನ್ನು ಕಳೆದುಕೊಳ್ಳಲಿದೆ. ಆದರೆ, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅವರು ಈಗಾಗಲೇ ಅರ್ಹತೆಯನ್ನು ಪಡೆದುಕೊಂಡಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.
ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಕ್ರಿಕೆಟ್ ಮೇಲೆ ಪ್ರಭಾವ ಬೀರಿವೆ ಮತ್ತು ಮಾರ್ಚ್‌ನಲ್ಲಿ ನಡೆಯುವ ಮುಂದಿನ ಮಂಡಳಿಯ ಸಭೆಯಲ್ಲಿ ಈ ವಿಷಯವನ್ನು ಪರಿಗಣಿಸಲಾಗುವುದು ಎಂದು ಐಸಿಸಿ ಸಿಇಒ ಜೆಫ್ ಅಲ್ಲಾರ್ಡಿಸ್ ತಿಳಿಸಿದ್ದಾರೆ.
ಅಫ್ಘಾನಿಸ್ತಾನವು ಮಹಿಳಾ ತಂಡವನ್ನು ಹೊಂದಿರದ ಏಕೈಕ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರವಾಗಿದೆ. ಶನಿವಾರ ಪ್ರಾರಂಭವಾಗಲಿರುವ ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಲ್ಲಿಯೂ ತಂಡವನ್ನು ಹೊಂದಿರದ ಏಕೈಕ ಪೂರ್ಣ ಸದಸ್ಯ ರಾಷ್ಟ್ರವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications