ಟಿ20 ಸರಣಿ: ವಿಶ್ವಕಪ್‌ಗೂ ಮುನ್ನ ತವರಿನಲ್ಲೇ ಆಸ್ಟ್ರೇಲಿಯಾಗೆ ಮುಖಭಂಗ: ಇಂಗ್ಲೆಂಡ್ ವಿರುದ್ಧ ಮತ್ತೊಂದು ಸೋಲು

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿಯೂ ಆತಿಥೇಯ ಆಸ್ಟ್ರೇಲಿಯಾ ತಂಡ ಸೋಲು ಅನುಭವಿಸಿದೆ. ಈ ಸೋಲಿನೊಂದಿಗೆ ಆತಿಥೇಯ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೋಲು ಅನುಭವಿಸುವ ಮೂಲಕ ವಿಶ್ವಕಪ್‌ಗೂ ಮುನ್ನ ತವರಿನಲ್ಲಿಯೇ ಸೋಲು ಅನುಭವಿಸಿದೆ.
ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆಲುವು ಸಾಧಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ತಂಡದ ಪಾಲಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿತ್ತು. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಇಂಗ್ಲೆಂಡ್ ತಂಡ 8 ರನ್‌ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇನ್ನೂ ಒಂದು ಪಂದ್ಯ ಬಾಕಿಯಿರುವಂತೆಯೇ ಇಂಗ್ಲೆಂಡ್ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಂಡಿದ್ದು ಚುಟುಕು ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದೆ. ತವರಿನಲ್ಲಿಯೇ ಆಸ್ಟ್ರೇಲಿಯಾಗೆ ಸೋಲಿನ ರುಚಿ ತೋರಿಸಿರುವ ಕಾರಣ ಇಂಗ್ಲೆಂಡ್ ತಂಡದ ಆತ್ಮವಿಶ್ವಾಸ ಸಹಜವಾಗಿಯೇ ಹೆಚ್ಚಾಗಿರಲಿದೆ.

ಸವಾಲಿನ ಮೊತ್ತ ಪೇರಿಸಿದ ಇಂಗ್ಲೆಂಡ್
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ವಿರುದ್ಧ ಇಂಗ್ಲೆಂಡ್ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಡೇವಿಡ್ ಮಲನ್ ಈ ಪಂದ್ಯದಲ್ಲಿಯೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಇಂಗ್ಲೆಂಡ್ ತಂಡ ಸವಾಲಿನ ಮೊತ್ತ ಪೇರಿಸಲು ಕಾರಣವಾದರು. 49 ಎಸೆತಗಳನ್ನು ಎದುರಿಸಿದ ಮಲನ್ 82 ರನ್‌ಗಳಿಸಿದ್ದಾರೆ. ಇನ್ನು ಆಲ್‌ರೌಂಡರ್ ಮೊಯೀನ್ ಅಲಿ ಕೂಡ 27 ಎಸೆತಗಳಲ್ಲಿ 44 ರನ್‌ಗಳನ್ನು ಗಳಿಸಿ ಮಿಂಚಿದರು. ಆದರೆ ಇತರ ಆಟಗಾರರಿಂದ ಉತ್ತಮ ಪ್ರದರ್ಶನ ಬಾರದೆ ಇಂಗ್ಲೆಂಡಗ ನಿರಾಸೆ ಅನುಭವಿಸಿತು.

ಮಿಚೆಲ್ ಮಾರ್ಶ್, ಟಿಮ್ ಡೇವಿಡ್ ಹೋರಾಟ
ಇಂಗ್ಲೆಂಡ್ ತಂಡದ ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಮಿಚೆಲ್ ಮಾರ್ಶ್ ಹಾಗೂ ಟಿಮ್ ಡೆವಿಡ್ ಮಾತ್ರವೇ ಆಸಿಸ್ ಪರವಾಗಿ ಉತ್ತಮ ಪ್ರದರ್ಶನ ನೀಡಲು ಯಶಸ್ವಿಯಾದರು. ಆದರೆ ಇತರ ಉಳಿದ ಬ್ಯಾಟರ್‌ಗಳಿಂದ ಮಹತ್ವದ ಜೊತೆಯಾಟ ಬಾರದ ಕಾರಣ ಆಸ್ಟ್ರೇಲಿಯಾ ತಂಡ 6 ವಿಕೆಟ್ ಕಳೆದುಕೊಂಡು 170 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾದರು.

ಇತ್ತಂಡಗಳ ಆಡುವ ಬಳಗ
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ಬೆಂಚ್: ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಸೀನ್ ಅಬಾಟ್, ಸ್ಟೀವನ್ ಸ್ಮಿತ್
ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ರೀಸ್ ಟೋಪ್ಲಿ
ಬೆಂಚ್: ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲಿಪ್ ಸಾಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications