Aus vs ENG : ವಿಶ್ವಚಾಂಪಿಯನ್ನರಿಗೆ ಸವಾಲು ಹಾಕಲು ಹೊಸ ನಾಯಕತ್ವದಲ್ಲಿ ಸಿದ್ಧವಾದ ಕಾಂಗರೂ ಪಡೆ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗುಂಪು ಹಂತದಲ್ಲೇ ಹೊರಬಿದ್ದು ಮುಖಭಂಗ ಅನುಭವಿಸಿದ ಮಾಜಿ ಟಿ20 ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ಸಾಂಪ್ರದಾಯಿಕ ಎದುರಾಳಿ, ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಸವಾಲು ಹಾಕಲು ಸಿದ್ಧವಾಗಿದೆ.
ಟಿ20 ವಿಶ್ವಕಪ್ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಇಂಗ್ಲೆಂಡ್ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಏಕದಿನ ಮತ್ತು ಟಿ20 ಎರಡೂ ಮಾದರಿಯಲ್ಲಿ ವಿಶ್ವಕಪ್ ಗೆದ್ದಿರುವ ಮೊದಲ ತಂಡ ಎನ್ನುವ ಹೆಗ್ಗಳಿಕೆ ಹೊಂದಿರುವ ಆಂಗ್ಲರು, ಕಾಂಗರೂ ಪಡೆಯನ್ನು ಆತ್ಮವಿಶ್ವಾಸದಿಂದಲೇ ಎದುರಿಸಲು ಸಜ್ಜಾಗಿದೆ.
ನವೆಂಬರ್ 17ರಂದು ಸರಣಿಯ ಮೊದಲನೇ ಪಂದ್ಯ ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ನವೆಂಬರ್ 19ರಂದು ಸಿಡ್ನಿಯಲ್ಲಿ ನಡೆಯಲಿದ್ದು, ಸರಣಿಯ ಕೊನೆಯ ಪಂದ್ಯ ನವೆಂಬರ್ 22ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಆರೋನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ ನಂತರ, ಟೆಸ್ಟ್ ತಂಡದ ನಾಯಕರಾಗಿದ್ದ ಪ್ಯಾಟ್ ಕಮಿನ್ಸ್‌ರನ್ನು ಏಕದಿನ ತಂಡಕ್ಕೆ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಇದು ಆಸ್ಟ್ರೇಲಿಯಾ ತಂಡಕ್ಕೆ ಮೊದಲನೇ ಏಕದಿನ ಸರಣಿಯಾಗಿದೆ.

ಮ್ಯಾಕ್ಸ್‌ವೆಲ್‌ಗೆ ಗಾಯದ ಸಮಸ್ಯೆ
ಇಂಗ್ಲೆಂಡ್ ವಿರುದ್ಧದ ಸರಣಿಗೆ ಆರಂಭಕ್ಕೆ ಮುನ್ನವೇ ಆಸ್ಟ್ರೇಲಿಯಾಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮೊಣಕಾಲು ಗಾಯಕ್ಕೆ ತುತ್ತಾಗಿದ್ದು ಟೂರ್ನಿಯಿಂದ ಹೊರಗುಳಿದಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಅನುಪಸ್ಥಿತಿಯಲ್ಲಿ ಅವರ ಸ್ಥಾನಕ್ಕೆ ಸೀನ್ ಅಬಾಟ್‌ರನ್ನು ಆಯ್ಕೆ ಮಾಡಲಾಗಿದೆ. ಸೀನ್ ಅಬಾಟ್ ಕೂಡ ಆಲ್‌ರೌಂಡರ್ ಆಗಿರುವುದರಿಂದ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
IPL 2023: ನಿವೃತ್ತಿ ಘೋಷಿಸಿದ ಪೊಲಾರ್ಡ್‌ಗೆ ಸಚಿನ್, ರೋಹಿತ್ ಹೇಳಿದ್ದೇನು?

ಉಭಯ ತಂಡಗಳ ಬಲಾಬಲ
ಎರಡೂ ತಂಡಗಳ ಬಲಾಬಲ ನೋಡುವುದಾದರೆ ಆಸ್ಟ್ರೇಲಿಯಾ ಆಂಗ್ಲರ ವಿರುದ್ಧ ಮೇಲುಗೈ ಸಾಧಿಸಿದೆ. ಎರಡೂ ತಂಡಗಳ ನಡುವೆ ಇದುವರೆಗೆ 152 ಏಕದಿನ ಪಂದ್ಯಗಳು ನಡೆದಿದ್ದು, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಜಯಗಳಿಸಿದೆ. ಇಂಗ್ಲೆಂಡ್ 63 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಎರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿವೆ. ಮೂರು ಪಂದ್ಯಗಳು ಫಲಿತಾಂಶ ಇಲ್ಲದೆ ಅಂತ್ಯವಾಗಿವೆ.
ಆಸ್ಟ್ರೇಲಿಯಾ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 71 ಪಂದ್ಯಗಳನ್ನಾಡಿದ್ದು, 45 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ತವರಿನ ಲಾಭ ಪಡೆದಿದೆ. ಆದರೆ, ಕಳೆದ 10 ವರ್ಷಗಳ ದಾಖಲೆಗಳನ್ನು ನೋಡುವುದಾದರೆ ಇಂಗ್ಲೆಂಡ್ ಹೆಚ್ಚಿನ ಪೈಪೋಟಿ ನೀಡಿದೆ. 35 ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ 17 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಏಕದಿನ ಸರಣಿಗೆ ಉಭಯ ತಂಡ
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಆಶ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯ್ನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಸ್ಯಾಮ್ ಬಿಲ್ಲಿಂಗ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ಓಲಿ ಸ್ಟೋನ್, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಲ್ಯೂಕ್ ವುಡ್
ಆಸ್ಟ್ರೇಲಿಯಾ ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೇರಪ್ರಸಾರ ಮಾಡಲಿದೆ. ಸೋಲಿ ಲೈವ್ ಆಪ್‌ನಲ್ಲಿ ಕೂಡ ಪಂದ್ಯವನ್ನು ವೀಕ್ಷಿಸಬಹುದು. ಮೊದಲನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 8.50ಕ್ಕೆ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications