Aus vs ENG 2nd ODI : ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಎರಡೂ ತಂಡದ ನಾಯಕರೇ ಬದಲಾವಣೆ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಈ ಏಕದಿನ ಪಂದ್ಯ ನಡೆಯುತ್ತಿದೆ.
ಸರಣಿಯ ಮೊದಲನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆಲ್ಲುವ ಉತ್ಸಾಹದಲ್ಲಿದೆ. ಇಂಗ್ಲೆಂಡ್ ಕೂಡ ಮೊದಲನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಮೊದಲನೇ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದ ಇಂಗ್ಲೆಂಡ್ ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ 4 ಬದಲಾವಣೆ ಮಾಡಿದೆ. ನಾಯಕ ಜೋಸ್ ಬಟ್ಲರ್ ಕೂಡ ಈ ಪಂದ್ಯದಿಂದ ವಿಶ್ರಾಂತಿ ಪಡೆಯುತ್ತಿದ್ದು, ಮೊಯಿನ್ ಅಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಯಾಮ್ ಕರನ್, ಕ್ರಿಸ್ ವೋಕ್ಸ್ ಮತ್ತು ಆದಿಲ್ ರಶೀದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ತಂಡದಲ್ಲಿ ಕೂಡ ಪ್ರಮುಖ ಬದಲಾವಣೆ ಮಾಡಲಾಗಿದೆ. ನಾಯಕ ಪ್ಯಾಟ್ ಕಮಿನ್ಸ್, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್‌ಗೆ ವಿಶ್ರಾಂತಿ ನೀಡಲಾಗಿದ್ದು, ಜೋಶ್ ಹೇಜಲ್‌ವುಡ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಮಿಚೆಲ್ ಮಾರ್ಷ್ ಗ್ರೀನ್ ಬದಲಿಗೆ ತಂಡಕ್ಕೆ ವಾಪಸಾಗಿದ್ದಾರೆ.

ರನ್ ಹೊಳೆ ಹರಿಯುವ ನಿರೀಕ್ಷೆ
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನ ಪಿಚ್ ಬ್ಯಾಟಿಂಗ್ ಸ್ನೇಹಿ ಆಗಿದೆ. ಉಭಯ ತಂಡಗಳಲ್ಲಿ ಸ್ಫೋಟಕ ಆಟಗಾರರ ದಂಡೇ ಇರುವುದರಿಂದ ರನ್ ಹೊಳೆಯನ್ನು ನಿರೀಕ್ಷಿಸಬಹುದು. ಮೊದಲು ಬ್ಯಾಟ್ ಮಾಡುವ ತಂಡ ಕನಿಷ್ಠ 280 ರನ್ ಗಳಿಸಿದರೆ ಮಾತ್ರ ಗೆಲುವಿನ ಸಾಧ್ಯತೆ ಇದೆ.
ಕಳೆದ ನವೆಂಬರ್ ತಿಂಗಳಿನಲ್ಲಿ ಇದೇ ಅಂಗಳದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ 389 ರನ್ ಗಳಿಸಿತ್ತು. ಭಾರತದ ವಿರುದ್ಧ ಆ ಪಂದ್ಯದಲ್ಲಿ 51 ರನ್‌ಗಳ ಬೃಹತ್ ಜಯ ದಾಖಲಿಸಿತ್ತು. ಮೊದಲನೇ ಪಂದ್ಯದ ಗೆಲುವಿನ ಅಲೆಯಲ್ಲಿರುವ ಆಸ್ಟ್ರೇಲಿಯಾ ಈ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಇಂಗ್ಲೆಂಡ್: ಜೇಸನ್ ರಾಯ್, ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೇಮ್ಸ್ ವಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮೊಯಿನ್ ಅಲಿ (ನಾಯಕ), ಕ್ರಿಸ್ ವೋಕ್ಸ್, ಸ್ಯಾಮ್ ಕರ್ರಾನ್, ಲಿಯಾಮ್ ಡಾಸನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಜಲ್‌ವುಡ್ (ನಾಯಕ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications