ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Aus vs ENG 3rd ODI : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಎರಡೂ ತಂಡಗಳಲ್ಲಿ ಪ್ರಮುಖ ಬದಲಾವಣೆ

Aus vs ENG : England Have Won The Toss And Opted To Bowl, Playing XI, Pitch Report

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.

ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಆಸ್ಟ್ರೇಲಿಯಾ 3ನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ವೈಟ್‌ವಾಷ್ ಮಾಡುವ ಉತ್ಸಾಹದಲ್ಲಿದೆ. ಇನ್ನು ಸರಣಿಯ ಕೊನೆಯ ಪಂದ್ಯದಲ್ಲಾದರೂ ಗೆದ್ದು, ಮುಖಭಂಗ ತಪ್ಪಿಸಿಕೊಳ್ಳಲು ನೋಡುತ್ತಿದೆ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡ.

ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಉಭಯ ತಂಡದ ನಾಯಕರಾದ ಪ್ಯಾಟ್ ಕಮಿನ್ಸ್ ಮತ್ತು ಜೋಸ್ ಬಟ್ಲರ್ ಮೂರನೇ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ತನ್ನ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಅವರಿಗೆ ಮೂರನೇ ಪಂದ್ಯದಲ್ಲಿ ವಿಶ್ರಾಂತಿ ನೀಡಿದ್ದು, ಸೀನ್‌ ಅಬಾಟ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

IPL 2023: ಈ ಆಟಗಾರನಿಗೆ ನಾಯಕತ್ವ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್IPL 2023: ಈ ಆಟಗಾರನಿಗೆ ನಾಯಕತ್ವ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್

ಇಂಗ್ಲೆಂಡ್ ತಂಡದಲ್ಲಿ ಕಳೆದ ಪಂದ್ಯದಲ್ಲಿ ನಾಯಕರಾಗಿದ್ದ ಮೊಯಿನ್ ಅಲಿ ಮತ್ತು ಸ್ಪಿನ್ನರ್ ಆದಿಲ್ ರಶೀದ್ ಮೂರನೇ ಪಂದ್ಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಓಲಿ ಸ್ಟೋನ್ ಆದಿಲ್ ರಶೀದ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Aus vs ENG : England Have Won The Toss And Opted To Bowl, Playing XI, Pitch Report

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಪಿಚ್ ಮಾಹಿತಿ

ಇದೇ ಅಂಗಳದಲ್ಲಿ ಇಂಗ್ಲೆಂಡ್ ಪಾಕಿಸ್ತಾನದ ವಿರುದ್ಧ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿತ್ತು. ಮೆಲ್ಬೋರ್ನ್ ಪಿಚ್‌ ಸ್ವಿಂಗ್ ಬೌಲರ್ ಗಳಿಗೆ ಹೆಚ್ಚಿನ ಸಹಕಾರಿಯಾಗಿದೆ. ವಿಶ್ವಕಪ್ ಫೈನಲ್‌ನಲ್ಲಿ ಇದ್ದಂತೆಯೇ ಪಿಚ್ ಇರಲಿದೆ ಎಂದು ಹೇಳಲಾಗಿದೆ.

ಆರಂಭದಲ್ಲಿ ಪಿಚ್‌ ವೇಗಿಗಳಿಗೆ ಸಾಕಷ್ಟು ಸಹಕಾರಿಯಾಗಲಿದ್ದು, ಬ್ಯಾಟರ್ ಗಳು ರನ್ ಗಳಿಸಲು ಕಷ್ಟ ಪಡುತ್ತಾರೆ. ದೊಡ್ಡ ಬೌಂಡರಿಗಳನ್ನು ಕೂಡ ಹೊಂದಿರುವುದರಿಂದ ಇಲ್ಲಿ ಹೆಚ್ಚಿನ ರನ್ ನಿರೀಕ್ಷಿಸಲು ಸಾಧ್ಯವಿಲ್ಲ. ಆರಂಭದಲ್ಲಿ ಬ್ಯಾಟರ್ ಗಳು ಎಚ್ಚರಿಕೆಯಿಂದ ಆಡಿದರೆ ನಂತರ ರನ್ ಗಳಿಸುವುದು ಸುಲಭವಾಗುತ್ತದೆ.

ಉಭಯ ತಂಡಗಳ ಪ್ಲೇಯಿಂಗ್ XI

ಇಂಗ್ಲೆಂಡ್ : ಜೇಸನ್ ರಾಯ್, ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೇಮ್ಸ್ ವಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್(ನಾಯಕ), ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಡೇವಿಡ್ ವಿಲ್ಲಿ, ಓಲಿ ಸ್ಟೋನ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ , ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹೇಜಲ್‌ವುಡ್

Story first published: Tuesday, November 22, 2022, 8:51 [IST]
Other articles published on Nov 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X